Repo Rate: ಸತತ 7ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: ಗವರ್ನರ್ ಶಕ್ತಿಕಾಂತ್ ದಾಸ್
Team Udayavani, Apr 5, 2024, 10:46 AM IST
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿಯು ಸತತ 7ನೇ ಬಾರಿಯೂ ರೆಪೋ (Repo Rate) ದರದಲ್ಲಿ ಯಾವುದೇ ಬದಲಾವಣೆ ಮಾಡದಿರುವ ನಿರ್ಧಾರ ಕೈಗೊಂಡಿರುವುದಾಗಿ ಶುಕ್ರವಾರ (ಏ.05) ತಿಳಿಸಿದೆ.
ಇದನ್ನೂ ಓದಿ:Taiwan Earthquake: ತೈವಾನ್ ಭೂಕಂಪದಲ್ಲಿ ನಾಪತ್ತೆಯಾಗಿದ್ದ 2 ಭಾರತೀಯರು ಸುರಕ್ಷಿತ: ಕೇಂದ್ರ
ರೆಪೋ ದರವನ್ನು ಶೇ.6.5ರಲ್ಲೇ ಮುಂದುವರಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅಧ್ಯಕ್ಷತೆಯಲ್ಲಿ ಮೂರು ದಿನಗಳ ಕಾಲ ನಡೆದ ಹಣಕಾಸು ನೀತಿ ಸಮಿತಿಯ ಸಭೆ ನಡೆದಿದ್ದು, ಶುಕ್ರವಾರ (ಏ.05) ಬೆಳಗ್ಗೆ ಮುಕ್ತಾಯಗೊಂಡಿತ್ತು. ಈ ಬಾರಿಯೂ ರೆಪೋ ದರವನ್ನು ಶೇ.6.5ನ್ನು ಯಥಾಸ್ಥಿತಿ ಕಾಪಾಡಿಕೊಳ್ಳಲು ಒಮ್ಮತದಿಂದ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.
ರಿವರ್ಸ್ ರೆಪೋ ದರ ಶೇ.3.5ರಲ್ಲಿ ಮುಂದುವರಿಯಲಿದೆ ಎಂದು ಆರ್ ಬಿಐ(RBI) ತಿಳಿಸಿದೆ. ಹಣದುಬ್ಬರ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮ ತೆಗೆದುಕೊಳ್ಳಲಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಆರ್ಥಿಕ ಸ್ಥಿತಿಗತಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ ಎಂದು ದಾಸ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್‌ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.