Lok Sabha Polls; ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸದಿದ್ದರೆ ಮಾಜಿ ಆಗುತ್ತೀರಿ

ಹೊಸದಾಗಿ ಅಧಿಕಾರ ಸ್ವೀಕರಿಸಿದ ಕಾರ್ಯಾಧ್ಯಕ್ಷರು, ಚುನಾವಣ ಪ್ರಚಾರ ಸಮಿತಿ ಅಧ್ಯಕ್ಷರಿಗೆ ಡಿಕೆಶಿ

Team Udayavani, Apr 5, 2024, 11:37 PM IST

Lok Sabha Polls; ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸದಿದ್ದರೆ ಮಾಜಿ ಆಗುತ್ತೀರಿ

ಬೆಂಗಳೂರು: ನಿಮಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು. ಇಲ್ಲದಿದ್ದರೆ ಚುನಾವಣೆ ಬಳಿಕ ನೀವು ಮಾಜಿ ಆಗುತ್ತೀರಿ. ನೀವು ವಿಸಿಟಿಂಗ್‌ ಕಾರ್ಡ್‌ಗಳಿಗೆ ಸೀಮಿತವಾಗಬಾರದು. ನೀವೇ ಸ್ಥಳೀಯರೊಂದಿಗೆ ಸಮನ್ವಯ ಸಾಧಿಸಿ, ಕೆಲಸ ಮಾಡಬೇಕೇ ಹೊರತು ಅಲ್ಲಿ ಹೋಗಿ ಲೀಡರ್‌ಗಿರಿ ತೋರಿಸುವಂತಿಲ್ಲ…

-ಇದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಹೊಸ ದಾಗಿ ಅಧಿಕಾರ ಸ್ವೀಕರಿಸಿದ ಪಕ್ಷದ ಕಾರ್ಯಾಧ್ಯಕ್ಷರು, ಚುನಾವಣ ಪ್ರಚಾರ ಸಮಿತಿ ಅಧ್ಯಕ್ಷರಿಗೆ ನೀಡಿದ ಎಚ್ಚರಿಕೆ.

ಈಗಾಗಲೇ ಸಚಿವರು, ನಿಗಮ-ಮಂಡಳಿ ಅಧ್ಯಕ್ಷರು-ಉಪಾಧ್ಯಕ್ಷರಿಗೆ ಚುನಾವಣೆಯಲ್ಲಿ ಶತಾಯಗತಾಯ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಬೇಕು. ಇಲ್ಲದಿದ್ದರೆ ತಲೆದಂಡ ನಿಶ್ಚಿತ ಎಂದು ವರಿಷ್ಠರು ಟಾಸ್ಕ್ ನೀಡಿದ್ದಾರೆ. ಇದರ ಮುಂದುವರಿದ ಭಾಗವಾಗಿ ಕೆಪಿಸಿಸಿ ಅಧ್ಯಕ್ಷರು ಕೂಡ ಪಕ್ಷದ ಪದಾಧಿಕಾರಿಗಳಿಗೆ ಚುನಾವಣ ಟಾಸ್ಕ್ ನೀಡಿದ್ದಾರೆ.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ನೂತನ ವಾಗಿ ನೇಮಕಗೊಂಡ ಕಾಂಗ್ರೆಸ್‌ ಕಾರ್ಯಾ ಧ್ಯಕ್ಷರು ಮತ್ತು ಪ್ರಚಾರ ಸಮಿತಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾತ ನಾಡಿದ ಡಿಕೆಶಿ, ಯಾರು ಶ್ರಮಪಡು ತ್ತಾರೋ ಅವರ ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಗಲಿದೆ. ಪಕ್ಷದ ನೂತನ ಕಾರ್ಯಾಧ್ಯಕ್ಷರು ಹಾಗೂ ಪದಾಧಿಕಾರಿಗಳು ನಿಷ್ಠೆ, ಪ್ರಾಮಾಣಿ ಕತೆ ಹಾಗೂ ಜವಾಬ್ದಾರಿ ಪ್ರದರ್ಶಿಸಬೇಕು. ನಿಮಗೆ ಕೊಟ್ಟ ಕೆಲಸವನ್ನು ಸಮರ್ಥವಾಗಿ ನಿಭಾಯಿಸಬೇಕು. ಇಲ್ಲದಿದ್ದರೆ ಚುನಾವಣೆ ಬಳಿಕ ಹುದ್ದೆ ಕಳೆದುಕೊಳ್ಳುತ್ತೀರಿ. ನೀವು ಶ್ರಮಪಡದಿದ್ದರೆ ಚುನಾವಣೆ ಬಳಿಕ ಪದಾಧಿಕಾರಿಗಳ ಪಟ್ಟಿಯನ್ನು ಪರಿಷ್ಕರಿ ಸಲಾಗುವುದು ಎಂದು ಎಚ್ಚರಿಸಿದರು.

ನಾಲ್ಕು ವರ್ಷಗಳಿಂದ ಪಕ್ಷದ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ, ರಾಮಲಿಂಗಾ ರೆಡ್ಡಿ, ಸಲೀಂ ಅಹಮದ್‌, ಬಿ.ಎನ್‌. ಚಂದ್ರಪ್ಪ ಹಾಗೂ ದಿ| ಧ್ರುವನಾರಾ ಯಣ ಅವರ ಸಂಘಟನೆಯನ್ನು ನಾವು ಸ್ಮರಿಸಬೇಕು. ಕೋವಿಡ್‌ ಸಂದರ್ಭದಲ್ಲಿ ಹಾಗೂ ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಧ್ರುವನಾರಾಯಣ ಅವರ ತಾಳ್ಮೆ, ಶ್ರಮ ಪ್ರಶಂಸನೀಯ ಎಂದರು.

ಸಿಎಂ ಸಿದ್ದರಾಮಯ್ಯ, ಸಚಿವರಾದ ಎಂ.ಬಿ.ಪಾಟೀಲ್‌, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌.ಎಂ. ರೇವಣ್ಣ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರೋಜಿ ಎಂ.ಜಾನ್‌ ಮತ್ತಿತರರಿದ್ದರು.

ಅಧಿಕಾರ ಸ್ವೀಕಾರ
ಚುನಾವಣ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯಕುಮಾರ್‌ ಸೊರಕೆ, ನೂತನ ಕಾರ್ಯಾಧ್ಯಕ್ಷರಾದ ತನ್ವೀರ್‌ ಸೇಠ್ ವಿನಯ್‌ ಕುಲಕರ್ಣಿ, ಜಿ.ಸಿ.ಚಂದ್ರಶೇಖರ್‌, ವಸಂತಕುಮಾರ್‌, ಮಂಜುನಾಥ ಭಂಡಾರಿ ಅಧಿಕಾರ ಸ್ವೀಕರಿಸಿದರು.

ಸಿ.ಎಂ.ಇಬ್ರಾಹಿಂ ಪುತ್ರ ಕಾಂಗ್ರೆಸ್‌ಗೆ
ಜೆಡಿಎಸ್‌ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಪುತ್ರ ಸಿ.ಎಂ.ಫ‌ಯಾಜ್‌, ಮಾಜಿ ಸಚಿವ ಆರ್‌.ಶಂಕರ್‌, ತುಮಕೂರಿನ ಗೋವಿಂದರಾಜು, ಕೊರಟಗೆರೆಯ ಜೆಡಿಎಸ್‌ನ ಪ್ರೇಮಾ ಮಹಾಲಿಂಗಪ್ಪ, ಬೋರೇಗೌಡ ಮತ್ತಿತರರು ಕಾಂಗ್ರೆಸ್‌ ಸೇರಿದರು.

ನಾನೇ ಸಾಕ್ಷಿ: ಮಂಜುನಾಥ ಭಂಡಾರಿ
ಕಾಂಗ್ರೆಸ್‌ನಲ್ಲಿ ಒಬ್ಬ ಸಾಮಾನ್ಯ ಕಾರ್ಯಕರ್ತ ಕೂಡ ಉನ್ನತ ಸ್ಥಾನ ತಲುಪಬಹುದು ಎಂಬುದಕ್ಕೆ ನಾನೇ ಸಾಕ್ಷಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತಿಳಿಸಿದರು. ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯಸಭೆ ಮಾಜಿ ಸದಸ್ಯ ದಿ| ಆಸ್ಕರ್‌ ಫೆರ್ನಾಂಡಿಸ್‌ ನನ್ನನ್ನು ಮೊದಲ ಬಾರಿಗೆ ಗುರುತಿಸಿದ್ದರು. ಅನಂತರ ಸ್ಥಳೀಯವಾಗಿ ಸಂಘಟನೆ ಚಟುವಟಿಕೆಗಳಲ್ಲಿ ಕ್ರಿಯಾಶೀಲನಾಗಿದ್ದೆ. ಸುಮಾರು 22 ವರ್ಷಗಳ ಕಾಲ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದೇನೆ. ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನದ ಅವಕಾಶ ಇದ್ದರೂ ಬೇಡವೆಂದು ಹೇಳಿದ್ದೆ. ಇಂದು ಕಾರ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದ್ದೇನೆ. ನನ್ನಂತಹ ಒಬ್ಬ ಸಾಮಾನ್ಯ ಕಾರ್ಯಕರ್ತ ಕೂಡ ಪಕ್ಷದ ಉನ್ನತ ಸ್ಥಾನ ತಲುಪಬಹುದು ಎಂಬುದಕ್ಕೆ ನಾನೇ ಸಾಕ್ಷಿ. ಇದು ಕಾಂಗ್ರೆಸ್‌ನಲ್ಲಿ ಮಾತ್ರ ಸಾಧ್ಯ ಎಂದರು.

ಚನ್ನಪಟ್ಟಣ: 9 ನಗರಸಭೆ ಸದಸ್ಯರು ಕಾಂಗ್ರೆಸ್‌ಗೆ
ಚನ್ನಪಟ್ಟಣ: ಚುನಾವಣೆ ಬಿಸಿ ತಾರಕಕ್ಕೇರಿರುವ ಬೆನ್ನಲ್ಲೇ, ಎಚ್‌.ಡಿ. ಕುಮಾರ ಸ್ವಾಮಿ ಹಾಗೂ ಸಿ.ಪಿ.ಯೋಗೇಶ್ವರ್‌ಗೆ ಆಘಾತ ನೀಡಿರುವ ಡಿ.ಕೆ.ಸಹೋದರರು, ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಸಹಿತ ಜೆಡಿಎಸ್‌ನ 9 ಮಂದಿ ಸದಸ್ಯರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡಿದ್ದಾರೆ. ನಗರಸಭೆ ಅಧ್ಯಕ್ಷ ಪಿ.ಪ್ರಶಾಂತ್‌ ಹಾಗೂ ಸದಸ್ಯರಾದ ಸಯ್ಯದ್‌ ರಫೀಕ್‌ ಅಹಮದ್‌, ಅಭಿದಾ ಬಾನು, ನಾಗೇಶ್‌, ರೇವಣ್ಣ, ಸತೀಶ್‌ ಬಾಬು, ಲೋಕೇಶ್‌, ಭಾನುಪ್ರಿಯ, ಪಕ್ಷೇತರ ಸದಸ್ಯೆ ಉಮಾ ಕಾಂಗ್ರೆಸ್‌ ಸೇರಿದವರು.

ಟಾಪ್ ನ್ಯೂಸ್

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.