![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Apr 6, 2024, 7:10 AM IST
ಬೆಂಗಳೂರು: ವಿಪಕ್ಷಗಳ 30 ರಷ್ಟು ಶಾಸಕರು ಕಾಂಗ್ರೆಸ್ ಸೇರಲು ತುದಿಗಾಲಿನಲ್ಲಿ ನಿಂತಿದ್ದು, ಇದಕ್ಕೆ ಚುನಾ ವಣೆ ಮುಗಿದ ಬಳಿಕ ಮುಹೂರ್ತ ನಿಗದಿ ಯಾಗಿದೆ ಎನ್ನಲಾಗಿದೆ. ಚುನಾವಣೆಯ ಅನಂತರ ಸರಕಾರ ಪತನ ಆಗುತ್ತದೆ ಎಂಬ ವದಂತಿ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿರುವ ನಡುವೆಯೇ ದೊಡ್ಡ ಪ್ರಮಾಣದ “ಆಪರೇಷನ್ ಹಸ್ತ’ ನಡೆಸಲು ಸದ್ದಿಲ್ಲದೆ ತೆರೆಮರೆಯಲ್ಲಿ ಸಿದ್ಧತೆ ನಡೆದಿದೆ ಎಂದು ಹೇಳಲಾಗಿದೆ.
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಪಕ್ಷದ ನಾಯಕ ರಿಗೆ ಈ ಬಗ್ಗೆ ಸುಳಿವು ನೀಡಿದ್ದಾರೆ.
ನಗರದ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಎರಡನೇ ಹಂತದ ಲೋಕ ಸಭಾ ಚುನಾವಣೆ ನಡೆಯಲಿರುವ ಕ್ಷೇತ್ರಗಳ ನಾಯಕರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಲೋಕಸಭಾ ಚುನಾವಣೆಯ ಅನಂತರ ಸರಕಾರ ಪತನ ಆಗುವುದಿಲ್ಲ. ಬದಲಾಗಿ ಹಾಗೆ ಹೇಳುತ್ತಿರುವ ವಿಪಕ್ಷಗಳ 30 ಶಾಸಕರು ಯಾವುದೇ ಘಳಿಗೆಯಲ್ಲಿ ಕಾಂಗ್ರೆಸ್‌ಗೆ ಬರಲು ಕಾಯುತ್ತಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ನಿಶ್ಚಿಂತೆಯಿಂದ ಕೆಲಸ ಮಾಡಿ
ಬಿಜೆಪಿಯ 17 ಮತ್ತು ಜೆಡಿಎಸ್‌ನ 13 ಶಾಸಕರು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಹಸುರು ನಿಶಾನೆ ನೀಡಿದ 24 ತಾಸುಗಳಲ್ಲಿ ಅವರೆಲ್ಲರೂ ನಮ್ಮ ತೆಕ್ಕೆಗೆ ಬರಲಿದ್ದಾರೆ. ಚುನಾವಣೆ ಅನಂತರ ಅದಕ್ಕೆ ಕೈ ಹಾಕೋಣ ಎಂದು ನಾವೇ ಸುಮ್ಮನಿದ್ದೇವೆ. ಲೋಕಸಭಾ ಚುನಾವಣೆಯ ಅನಂತರ ಸರಕಾರ ಬೀಳಲಿದೆ ಎಂಬುದು ಹಸಿ ಸುಳ್ಳು. ಹಾಗಾಗಿ ಅನಿಶ್ಚಿತತೆಯ ಆತಂಕದಲ್ಲಿ ಯಾರೂ ಕೆಲಸ ಮಾಡಬೇಕಿಲ್ಲ. ನಿಶ್ಚಿಂತೆಯಿಂದ ಪಕ್ಷದ ಗೆಲುವಿಗಾಗಿ ಶ್ರಮಿಸಿ ಎಂದು ಡಿಸಿಎಂ ನಾಯಕರಿಗೆ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ಯಾವುದೇ ಕಾರಣಕ್ಕೂ ಯಾರಿಂದಲೂ ಈ ಸರಕಾರವನ್ನು ಅಲ್ಲಾಡಿಸಲಾಗುವುದಿಲ್ಲ. ಬದಲಿಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಶಾಸಕರು ಕಾಂಗ್ರೆಸ್ ಸೇರುವುದರಿಂದ ಸರಕಾರ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಎಂದು ಹೇಳಿದರು ಎನ್ನಲಾಗಿದೆ.
20ಕ್ಕೂ ಅಧಿಕ ಕಡೆ ಗೆಲುವು
ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಚುನಾವಣೆ ಪೂರ್ವದಲ್ಲಿ ನಡೆಸಲಾಗಿರುವ ಹಲವು ಸಮೀಕ್ಷೆಗಳು ಹೇಳಿವೆ. ಇದರಿಂದ ಕಾಂಗ್ರೆಸ್ ಪರ ಅಲೆ ಇರುವುದು ಸ್ಪಷ್ಟ. ಆದ್ದರಿಂದ ಅಲ್ಲಲ್ಲಿ ಇರುವ ಮುನಿಸು, ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಕಳೆದ ಒಂದು ವರ್ಷದಲ್ಲಿ ಐದು ಪ್ರಮುಖ ಗ್ಯಾರಂಟಿಗಳನ್ನು ಸರಕಾರ ಈಡೇರಿಸಿದೆ. ಇದರಲ್ಲಿ ಮಹಿಳೆಯರಿಗೆ ಅನುಕೂಲವಾಗುವ ಯೋಜನೆಗಳೇ ಹೆಚ್ಚಿವೆ. ಮನೆ-ಮನೆಗೆ ಸರಕಾರದ ಸಾಧನೆಗಳನ್ನು ತಲುಪಿಸಬೇಕು. ಭಾವನಾತ್ಮಕ ವಿಷಯಗಳಿಂದ ಚುನಾವಣೆ ಎದುರಿಸಲು ಹೊರಟ ಮೈತ್ರಿ ಪಕ್ಷಗಳ ವೈಫಲ್ಯಗಳನ್ನು ಕೂಡ ಅಷ್ಟೇ ಪರಿಣಾಮಕಾರಿಯಾಗಿ ತಲುಪಿಸುವ ಅಗತ್ಯವಿದೆ ಎಂದು ಸಭೆಯಲ್ಲಿ ಹಾಜರಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.