Hardik Pandya; ದೇವರ ಮೊರೆ ಹೋದ ಹಾರ್ದಿಕ್: ಸೋಮನಾಥ ದೇವಸ್ಥಾನಕ್ಕೆ ಭೇಟಿ
Team Udayavani, Apr 6, 2024, 9:48 AM IST
ಮುಂಬೈ: ಸತತ ಸೋಲು ಮತ್ತು ಪ್ರೇಕ್ಷಕರ ವರ್ತನೆಯಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರು ಈಗ ದೇವರ ಮೊರೆ ಹೋಗಿದ್ದಾರೆ. ಗುಜರಾತ್ ನ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಿರುವ ಹಾರ್ದಿಕ್, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸಾಂಪ್ರದಾಯಿಕ ಉಡುಪು ಧರಿಸಿದ ಪಾಂಡ್ಯ ಪೂಜೆ ಸಲ್ಲಿಸಿದ್ದಾರೆ. ಸೋಮನಾಥ ದೇವಾಲಯವು ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾಗಿ ಐತಿಹಾಸಿಕ ಮಹತ್ವವನ್ನು ಹೊಂದಿದೆ. ವರ್ಷವಿಡೀ ವಿಶ್ವಾದ್ಯಂತ ಭಕ್ತರನ್ನು ಆಕರ್ಷಿಸುತ್ತದೆ.
ಗುಜರಾತ್ ಟೈಟಾನ್ಸ್ ನಿಂದ ಮುಂಬೈ ಇಂಡಿಯನ್ಸ್ ತಂಡಕ್ಕೆ ಬಂದ ಹಾರ್ದಿಕ್ ಪಾಂಡ್ಯಗೆ ಮುಂಬೈ ನಾಯಕತ್ವ ನೀಡಲಾಗಿದೆ. ರೋಹಿತ್ ಅವರನ್ನು ನಾಯಕತ್ವದಿಂದ ಕೆಳಕ್ಕಿಳಿಸಿದ ಬಳಿಕ ಅಭಿಮಾನಿಗಳು ಹಾರ್ದಿಕ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಪ್ರತಿ ಪಂದ್ಯದಲ್ಲಿ ಅಭಿಮಾನಿಗಳು ಹಾರ್ದಿಕ್ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ತವರು ಮೈದಾನ ವಾಂಖೆಡೆಯಲ್ಲೂ ಹಾರ್ದಿಕ್ ಅಭಿಮಾನಿಗಳ ನಿಂದನೆ ಎದುರಿಸಿದ್ದರು.
#WATCH | Gujarat: Indian Cricket Team all-rounder Hardik Pandya offers prayers at Somnath Temple.
Source: Somnath Temple Trust pic.twitter.com/F8n05Q1LSA
— ANI (@ANI) April 5, 2024
ಮುಂಬೈ ಇಂಡಿಯನ್ಸ್ ತಂಡವು ಆಡಿದ ಮೂರು ಪಂದ್ಯಗಳನ್ನೂ ಸೋತಿದೆ. ಅಂಕಪಟ್ಟಿಯಲ್ಲಿ ಮುಂಬೈ ಕೊನೆಯ ಸ್ಥಾನದಲ್ಲಿದೆ. ಮುಂದಿನ ಪಂದ್ಯದಲ್ಲಿ ಹಾರ್ದಿಕ್ ಪಡೆ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ರವಿವಾರ (ಎ.7) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.