SUMA: ಹೊಸಬರ ಚಿತ್ರಕ್ಕೆ ಮುಹೂರ್ತ
Team Udayavani, Apr 6, 2024, 4:30 PM IST
ಸಂಪೂರ್ಣ ಹೊಸಬರೇ ಸೇರಿ ನಿರ್ಮಿಸುತ್ತಿರುವ “ಸುಮಾ’ ಎಂಬ ಸಿನಿಮಾದ ಮುಹೂರ್ತ ಇತ್ತೀಚೆಗೆ ನಡೆದಿದೆ. ಓಂ ಸಾಯಿ ಸಿನೆಮಾಸ್ ಬ್ಯಾನರಿನಲ್ಲಿ ನಿರ್ಮಾಣವಾಗುತ್ತಿರುವ ಮಹಿಳಾ ಪ್ರಧಾನ ಚಿತ್ರವಿದು. ಈ ಹಿಂದೆ ಕನ್ನಡದಲ್ಲಿ “ಶ್ರೀಕಬ್ಟಾಳಮ್ಮನ ಮಹಿಮೆ’, “ಮನೆ’, “ಬ್ಯಾಂಕ್ ಲೋನ್’, “ಸುಳಿ’ ಸೇರಿದಂತೆ ನಾಲ್ಕು ಸಿನಿಮಾಗಳನ್ನು ನಿರ್ದೇಶಿಸಿರುವ ರಶ್ಮಿ ಎಸ್. “ಸುಮಾ’ ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಮೈಸೂರು ಮೂಲದ ಪ್ರದೀಪ್ ಗೌಡ “ಸುಮಾ’ ಸಿನಿಮಾದಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದು, ಉಳಿದಂತೆ ಬಲರಾಜವಾಡಿ, ರೇಣು ಶಿಕಾರಿ, ಮುರಳೀಧರ್ ಡಿ.ಆರ್, ಕಾವ್ಯ ಪ್ರಕಾಶ್, ರೋಹಿಣಿ, ಸುನಂದ ಕಲಬುರ್ಗಿ, ರೇಣುಕುಮಾರ್ ಸಂಸ್ಥಾನ ಮಠ ಸೇರಿದಂತೆ ಇತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಇದೇ ವೇಳೆ ಮಾತನಾಡಿದ ಚಿತ್ರತಂಡ, “ಇದೊಂದು ಮಹಿಳಾ ಪ್ರಧಾನ ಕಥಾಹಂದರದ ಸಿನಿಮಾ. “ಸುಮಾ’ ಅಂದ್ರೆ ಸಂಪೂರ್ಣ ಮೊಗ್ಗು ಅಲ್ಲದ, ಸಂಪೂರ್ಣ ಅರಳಿಯೂ ಇರದಂತಹ ಹೂವು. ಈ ಸಿನಿಮಾದ ನಾಯಕಿಯ ಪಾತ್ರ ಕೂಡ ಹಾಗೇ ಇರುವಂಥದ್ದು. ನಮ್ಮ ನಡುವೆಯೇ ಇರುವಂಥ ಹುಡುಗಿಯೊಬ್ಬಳ ಅಂತರಂಗದ ಕಥೆ ಈ ಸಿನಿಮಾದಲ್ಲಿದೆ. ಮುಂದಿನ ದಿನಗಳಲ್ಲಿ ಚಿತ್ರದ ನಾಯಕಿ ಮತ್ತು ಸಿನಿಮಾದ ಬಗ್ಗೆ ಇನ್ನಷ್ಟು ಮಾಹಿತಿ ನೀಡಲಿದ್ದೇವೆ’ ಎಂದಿತು.
ಏಪ್ರಿಲ್ ತಿಂಗಳಿನಿಂದ “ಸುಮಾ’ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಒಟ್ಟು 25 ದಿನಗಳ ಕಾಲ ಒಂದೇ ಹಂತದಲ್ಲಿ ಮಂಡ್ಯ, ಮದ್ದೂರು, ಆಲಭುಜನಹಳ್ಳಿ, ಕೆ. ಎಂ ದೊಡ್ಡಿ, ನಗರಕೆರೆ ಸುತ್ತಮುತ್ತ ಸಿನಿಮಾದ ಚಿತ್ರೀಕರಣ ನಡೆಯಲಿದೆ.
“ಸುಮಾ’ ಸಿನಿಮಾಕ್ಕೆ ಶಂಖು, ನಟರಾಜ್ ಛಾಯಾಗ್ರಹಣ, ಮುತ್ತುರಾಜ್ ಟಿ. ಸಂಕಲನವಿದೆ. ಸಿನಿಮಾದ ಹಾಡುಗಳಿಗೆ ಎನ್. ರಾಜು ಸಂಗೀತವಿದ್ದು, ಸತೀಶ್ ಜೋಶಿ ಹಾವೇರಿ ಸಾಹಿತ್ಯ ಮತ್ತು ಸಹ ನಿರ್ದೇಶನವಿದೆ.
ಚಿತ್ರತಂಡದ ಯೋಜನೆಯಂತೆ, ಇದೇ ಆಗಸ್ಟ್ ವೇಳೆಗೆ “ಸುಮಾ’ ಸಿನಿಮಾದ ಕೆಲಸಗಳನ್ನು ಪೂರ್ಣಗೊಳಿಸಿ, ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ ಚಿತ್ರತಂಡ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.