16 ಲಕ್ಷ ಕೋಟಿ ಶ್ರೀಮಂತರ ಸಾಲ ಮನ್ನಾ: ರಾಹುಲ್
Team Udayavani, Apr 7, 2024, 6:00 AM IST
ಹೈದರಾಬಾದ್: ಕಾಂಗ್ರೆಸ್ ಪಕ್ಷದ ಪ್ರಣಾ ಳಿಕೆಯು ಭಾರತೀಯ ಧ್ವನಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೇಳಿ ದ್ದಾರೆ. ಹೈದರಾಬಾದ್ನಲ್ಲಿ ಆಯೋಜಿ ಸಲಾಗಿದ್ದ ಚುನಾವಣ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಪ್ರಧಾನಿ ಯಾದ ಬಳಿಕ ಕೋಟ್ಯಂತರ ಜನರು ಭಾರತ ದಲ್ಲಿ ಬಡವರಾಗಿದ್ದಾರೆ ಎಂದು ಅವರು ಆರೋಪಿಸಿದರು.
ಬಿಜೆಪಿ ನೇತೃತ್ವದ ಎನ್ಡಿಎ ಸರಕಾರದ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ ಕಾಂಗ್ರೆಸ್ ನಾಯಕ, ದೇಶದಲ್ಲಿ ನಿತ್ಯ 30 ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಮೋದಿ ರೈತರ ಸಾಲಮನ್ನಾ ಮಾಡದೇ, ಶ್ರೀಮಂತರ 16 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿ ದ್ದಾರೆ ಎಂದು ಹೇಳಿದರು.
ಒಂದು ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಿಸಾನ್ ನ್ಯಾಯದಡಿ ರೈತರ ಸಾಲಮನ್ನಾ ಮಾಡಲಾಗುವುದು ಮತ್ತು ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ ದೊರಕಿಸಿಕೊಡಲಾಗುವುದು ಎಂದು ಹೇಳಿದರು. ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೀಡಿದ್ದ ಭರವಸೆಗಳನ್ನು ಪೂರೈ ಸುತ್ತಿದೆ. ವಾಗ್ಧಾನದಂತೆ ಕಾಂಗ್ರೆಸ್ ಈಗಾಗಲೇ 30 ಸಾವಿರ ಸರಕಾರ ಹುದ್ದೆಗಳನ್ನು ಭರ್ತಿ ಮಾಡಿದ್ದು, ಶೀಘ್ರವೇ 50 ಸಾವಿರ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ತಿಳಿಸಿದರು.
ಚುನಾವಣೆ ಬಾಂಡ್ ಜಗತ್ತಿನ ಅತೀದೊಡ್ಡ ಹಗರಣ: ಚುನಾವಣ ಬಾಂಡ್ ಜಗತ್ತಿನ ಅತೀದೊಡ್ಡ ಹಗರಣವಾಗಿದೆ ಎಂದು ರಾಹುಲ್ ಗಾಂಧಿ ಅವರು ಬಿಜೆಪಿಯ ವಿರುದ್ಧ ಹರಿಹಾಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.