Lok Sabha Election; ನನ್ನ ಮುಖ ನೋಡಿ ಯಾರೂ ಓಟು ಹಾಕಲ್ಲ: ಪ್ರೀತಂ ಗೌಡ
ನಮ್ಮ ಮನೆಯಲ್ಲೂ ಮೋದಿ ಮುಖ ನೋಡೇ ಮತ ಹಾಕುತ್ತಾರೆ
Team Udayavani, Apr 7, 2024, 7:38 PM IST
ಮೈಸೂರು: ಹಾಸನ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಜತೆ ನನ್ನ ಭೇಟಿ ವಿಚಾರ ನನಗೇ ಗೊತ್ತಿಲ್ಲ, ಅದರ ಬಗ್ಗೆ ನನಗೆ ಮಾಹಿತಿಯೂ ಇಲ್ಲ ಎಂದು ಹೇಳಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ, ಒಟ್ಟಿನಲ್ಲಿ ಎನ್‌ಡಿಎ ಅಭ್ಯರ್ಥಿ ಹಾಸನದಲ್ಲಿ ಗೆಲ್ಲಬೇಕು ಅಷ್ಟೆ. ಪ್ರೀತಂ ಗೌಡ ಮುಖ ನೋಡಿ ಯಾರೂ ಓಟು ಹಾಕುವುದಿಲ್ಲ. ನಮ್ಮ ಮನೆಯಲ್ಲೂ ಮೋದಿ ಮುಖ ನೋಡೇ ಮತ ಹಾಕುತ್ತಾರೆ ಎಂದು ಸೂಚ್ಯವಾಗಿ ನುಡಿದರು.
ನಗರದಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ ಅಪ್ಪಿತಪ್ಪಿಯೂ ಹಾಸನ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮತ್ತು ಜೆಡಿಎಸ್ ಪಕ್ಷದ ಹೆಸರು ಹೇಳದ ಪ್ರೀತಮ್ ಗೌಡ, ತಮ್ಮ ಮಾತಿನುದ್ದಕ್ಕೂ ಎನ್‌ಡಿಎ ಅಭ್ಯರ್ಥಿ ಎನ್ನುತ್ತಲೇ ಇದ್ದರು. ಹಾಸನದಲ್ಲಿ ಪ್ರಚಾರಕ್ಕೆ ಹೋಗುವ ವಿಚಾರದಲ್ಲೂ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದರಲ್ಲದೇ ಕಾಶ್ಮೀರಕ್ಕೆ ಹೋಗು ಅಂದ್ರೆ ಹೋಗುತ್ತೇನೆ ಎಂದು ಮಾತನ್ನು ಬೇರೆಕಡೆಗೆ ಸೆಳೆದರು.
ಮನವೊಲಿಕೆಗೂ ಬಗ್ಗದ ಪ್ರೀತಂ,
ಪ್ರಚಾರಕ್ಕೆ ಬರುವುದು ಅನುಮಾನ
ಹಾಸನ: ಲೋಕಸಭಾ ಚುನಾವಣೆಗೆ ಕೇವಲ 18 ದಿನಗಳಷ್ಟೇ ಬಾಕಿ ಇವೆ. ಕ್ಷೇತ್ರದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಗೆ ಬಹುಪಾಲು ಬಿಜೆಪಿ ಮುಖಂಡರು ಸಮ್ಮತಿಸಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಮಾಜಿ ಶಾಸಕ ಪ್ರೀತಂ ಗೌಡ ಮತ್ತು ಬೆಂಬಲಿಗರು ಪ್ರಚಾರಕ್ಕಿಳಿದಿಲ್ಲ.
ಪ್ರೀತಂ ಗೌಡ ಮನವೊಲಿಕೆಗೆ ಪ್ರಯತ್ನ ಮುಂದುವರಿಸಿದರೂ ಪ್ರಯೋಜನವಾಗಿಲ್ಲ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪ್ರೀತಂ ಗೌಡರಿಗೆ ಮೈಸೂರು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಜವಾಬ್ದಾರಿ ವಹಿಸಲಾಗಿದೆ. ಹಾಗಾಗಿ ಅವರು ಆ ಕ್ಷೇತ್ರಗಳಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.
ಮೈತ್ರಿ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಿಗಿಕೊಳ್ಳುವಂತೆ ಪ್ರೀತಂ ಗೌಡ ತಮ್ಮ ಬೆಂಬಲಿಗರಿಗೂ ಸೂಚನೆ ನೀಡಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಪ್ರೀತಂ ಪರ ಹೋರಾಟ ನಡೆಸಿದ್ದ ಅವರ ಆಪ್ತ ಬೆಂಬಲಿಗರು ಅಲ್ಲಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಈ ಬೆಳವಣಿಗೆಯನ್ನು ಗಮನಿಸಿದರೆ ಪ್ರೀತಂ ಗೌಡ ಹಾಸನದಲ್ಲಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.