Campaignನಿಂದ ದೂರ ಉಳಿದ ಇಂಡಿಯಾ ಒಕ್ಕೂಟದ ‘ಪ್ರಧಾನಿ’ ಆಕಾಂಕ್ಷಿ: ಮೋದಿ
Team Udayavani, Apr 8, 2024, 6:10 AM IST
ಪಟ್ನಾ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿಯ ರದ್ದತಿ ವಿರೋಧಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಾತಿಗೆ ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ದೇಶದ ಸೈನಿಕರನ್ನು ಅವಮಾನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಬಿಹಾರದ ನವಾಡದಲ್ಲಿ ರವಿವಾರ ಚುನಾವಣ ರ್‍ಯಾಲಿಯಲ್ಲಿ ಮಾತನಾಡಿದ ಪ್ರಧಾನಿ, “ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗುವುದು ಸಣ್ಣ ಹುದ್ದೆಯಲ್ಲ. ಅಲ್ಲದೇ ರಾಜಸ್ಥಾನದಲ್ಲಿ ಅವರು 370ನೇ ವಿಧಿಯ ಬಗ್ಗೆ ಮಾತನಾಡಿದ್ದನ್ನು ಕೇಳಲು ನನಗೆ ನಾಚಿಕೆಯಾಗುತ್ತಿದೆ. ಏಕೆ ಕಾಶ್ಮೀರ ಭಾರತದಲ್ಲಿಲ್ಲ ಎಂದು ಕಾಂಗ್ರೆಸ್ ಭಾವಿಸುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.
ಇತ್ತೀಚೆಗೆ ರಾಜಸ್ಥಾನದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಖರ್ಗೆ ಅವರನ್ನು ಪತ್ರಕರ್ತರು, “370ನೇ ವಿಧಿ’ ಬಗ್ಗೆ ಪ್ರಶ್ನಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಖರ್ಗೆ, “ರಾಜಸ್ಥಾನಕ್ಕೂ ಜಮ್ಮು-ಕಾಶ್ಮೀರದ 370ನೇ ವಿಧಿಗೂ ಏನು ಸಂಬಂಧ, ಇಲ್ಲಿನ ಜನರ ಮೇಲೆ ಅದು ಹೇಗೆ ಪರಿಣಾಮ ಬೀರುತ್ತದೆ’ ಎಂದು ಪ್ರಶ್ನಿಸಿದ್ದರು. ಈ ಹೇಳಿಕೆಯನ್ನೇ ಈಗ ಪ್ರಧಾನಿ ಮೋದಿಯಾದಿಯಾಗಿ ಬಿಜೆಪಿ ನಾಯಕರು ಅಸ್ತ್ರವಾಗಿ ಬಳಸಿಕೊಂಡಿದ್ದಾರೆ.
ರವಿವಾರದ ರ್ಯಾಲಿಯಲ್ಲಿ ಈ ವಿಚಾರ ಪ್ರಸ್ತಾವಿಸಿ ಖರ್ಗೆ ವಿರುದ್ಧ ವಾಗ್ಬಾಣ ಪ್ರಯೋಗಿಸಿದ ಮೋದಿ, ಕಾಶ್ಮೀರದ ರಕ್ಷಣೆ ಮಾಡುತ್ತಿರುವ ಹಲವು ಯುವ ಯೋಧರು ಹುತಾತ್ಮರಾಗಿ ಬಿಹಾರಕ್ಕೆ ಹಿಂದಿರುಗುತ್ತಿದ್ದಾರೆ. ಇದೇ ರೀತಿ ರಾಜಸ್ಥಾನದಲ್ಲೂ ನಡೆಯುತ್ತಿದೆ. ಆದರೆ ಕಾಂಗ್ರೆಸ್ ದೇಶದ ಒಂದು ಭಾಗದಿಂದ ಮತ್ತೂಂದು ಭಾಗಕ್ಕೆ ಏನು ಪ್ರಯೋಜನ ಎಂದು ಮಾತನಾಡುತ್ತಿದೆ. ಇದು ತುಕೆxà ತುಕೆxà ಗ್ಯಾಂಗ್‌ನವರ ಮಾತಾಗಿದೆ. ಇಂತಹ ಜನರನ್ನು ನೀವು ಕ್ಷಮಿಸುತ್ತೀರಾ ಎಂದು ನೆರೆದಿದ್ದ ಜನ ಸಮೂಹವನ್ನು ಪ್ರಶ್ನಿಸಿದರು. ಈ ವೇಳೆ ಜನರು ಜೋರಾಗಿ “ಇಲ್ಲ’ ಎಂದು ಉತ್ತರಿಸಿದರು.
ಮೋದಿ ಗ್ಯಾರಂಟಿಯಿಂದ ಭಯ: ಮೋದಿ ಗ್ಯಾರಂಟಿ ಯಿಂದ ವಿಪಕ್ಷ ನಾಯಕರುಗಳು ಹೆದರಿದ್ದಾರೆ. ಹೀಗಾಗಿ ಯೇ ಇದನ್ನು ಬ್ಯಾನ್ ಮಾಡಬೇಕು ಎಂದು ಹಲವರು ಕರೆ ನೀಡಿದ್ದಾರೆ. ಮೋದಿ ಗ್ಯಾರಂಟಿಗಳು ನೀಡಿದ ಭರವಸೆಗಳನ್ನು ಪೂರ್ಣಗೊಳಿಸುತ್ತದೆ ಎಂದರು.
ಮೋದಿ ಕಾಲು ಮುಟ್ಟಿ ನಮಸ್ಕರಿಸಿದ ನಿತೀಶ್….
ಬಿಹಾರದ ನವಾಡದ ರ್‍ಯಾಲಿ ವೇಳೆ ಸಿಎಂ ನಿತೀಶ್ ಕುಮಾರ್ ಅವರು ಪ್ರಧಾನಿ ಮೋದಿ ಅವರ ಕಾಲು ಮುಟ್ಟಿ ನಮಸ್ಕರಿಸಿದರು. ಈ ಹಿಂದೆ ಮೋದಿ ಅವರಿಂದ ಅಂತರ ಕಾಯ್ದುಕೊಂಡಿದ್ದ ನಿತೀಶ್, ಈಗ ಕಾಲಿಗೆ ನಮಸ್ಕರಿಸಿರುವ ಈ ಫೋಟೋ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪ್ರಚಾರದಿಂದ ದೂರ ಉಳಿದ ಇಂಡಿಯಾ ಒಕ್ಕೂಟದ “ಪ್ರಧಾನಿ’ ಆಕಾಂಕ್ಷಿ: ಮೋದಿ
ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟದಲ್ಲಿ ಆಂತರಿಕ ಬಿರುಕು ಉಂಟಾಗಿದೆ. ಪ್ರಧಾನಿ ಅಭ್ಯರ್ಥಿಯಾಗಿ ತನ್ನನ್ನು ಆಯ್ಕೆ ಮಾಡಿಲ್ಲ ಎಂಬ ಕಾರಣಕ್ಕೆ ಹಿರಿಯ ನಾಯಕರೊಬ್ಬರು ಚುನಾವಣ ಪ್ರಚಾರದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ. ಆದರೆ ಆ ನಾಯಕರು ಯಾರು ಎಂಬುದನ್ನು ಮೋದಿ ಬಹಿರಂಗ ಪಡಿಸಿಲ್ಲ.
ಜೂ.4ರ ಬಳಿಕ ಮೋದಿಗೆ ದೀರ್ಘ ರಜೆಯೇ ಜನರ ಗ್ಯಾರಂಟಿ: ಕಾಂಗ್ರೆಸ್
ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪುರಾವೆ ಇಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಜೂ.4ರ ಬಳಿಕ ಮೋದಿ ಅವರು ದೀರ್ಘ ರಜೆಯ ಮೇಲೆ ತೆರಳಬೇಕಾಗುತ್ತದೆ. ಇದು ದೇಶದ ಜನರು ಕೊಡುವ ಗ್ಯಾರಂಟಿ ಎಂದು ಕಾಂಗ್ರೆಸ್ ಹೇಳಿದೆ. ರವಿವಾರ ಮಾತನಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಪ್ರಧಾನಿ ಮೋದಿ ಅವರ ಸುಳ್ಳುಗಳಿಂದ ದೇಶದ ಜನರು ಸುಸ್ತಾಗಿದ್ದಾರೆ. ಜೂ.4ರ ಬಳಿಕ ಅವರು ದೀರ್ಘ ರಜೆಯ ಮೇಲೆ ತೆರಳಬೇಕಾಗಿದೆ. ಇದು ದೇಶದ ಜನರು ಕೊಡುತ್ತಿರುವ ಗ್ಯಾರಂಟಿಯಾಗಿದೆ. ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳು 10 ವರ್ಷದ ಬಳಿಕ ಜನರಲ್ಲಿ ಹೊಸ ವಿಶ್ವಾಸವನ್ನು ಮೂಡಿಸಿವೆ ಎಂದು ಹೇಳಿದ್ದಾರೆ. ಚುನಾವಣ ರ್ಯಾಲಿಗಳಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ಅವರು ತೀವ್ರ ವಾಗ್ಧಾಳಿ ನಡೆಸಿದ ಬೆನ್ನಲ್ಲೇ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.