Awareness: ಯಕ್ಷಗಾನ ಕಲೆಯ ಮೂಲಕ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳಿಂದ ಮತ ಜಾಗೃತಿ
ಅಧಿಕಾರಿಗಳಿಂದಲೇ ಯಕ್ಷಗಾನ ವೇಷ ಧರಿಸಿ ಮತದಾನ ಜಾಗೃತಿ...
Team Udayavani, Apr 8, 2024, 12:41 PM IST
ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮತಜಾಗೃತಿಗಾಗಿ ಸ್ವೀಪ್ ಸಮಿತಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ರಾಜ್ಯದಲ್ಲೆ ವಿಶೇಷ ಎಂಬಂತೆ ಜಿಲ್ಲೆಯ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳು ಯಕ್ಷಗಾನ ವೇಷಧರಿಸಿ ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸಿ ಗಮನ ಸೆಳೆದಿದ್ದಾರೆ.
ಕರಾವಳಿ ಪ್ರಸಿದ್ದ ಜಾನಪದ ಕಲೆ ಯಕ್ಷಗಾನ ಎಲ್ಲರಿಗೂ ಅಚ್ಚುಮೆಚ್ಚು. ಈ ಕಲೆಯ ಮೂಲಕ ಈಗಾಗಲೆ ಮತದಾನದ ಜಾಗೃತಿ ಬಗ್ಗೆ ಹಲವು ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಭಾರಿ ಸ್ವತಃ ಅಧಿಕಾರಿಗಳೇ ಈ ರೀತಿ ಯಕ್ಷಗಾನ ಕಲೆಯ ವೇಷ ಧರಿಸಿ ಮತದಾನ ಜಾಗೃತಿ ಮೂಡಿಸಿರುವುದು ಇದೆ ಮೊದಲು.
ಉಡುಪಿ ಜಿ. ಪಂ. ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತರಾದ ರಶ್ಮಿ, ಕರಾವಳಿ ಕಾವಲು ಪಡೆ ಪೊಲಿಸ್ ಅಧೀಕ್ಷಕ ಮಿಥುನ್ ಅವರು ಬಡಗುತಿಟ್ಟು ಯಕ್ಷಗಾನ ಶೈಲಿ ವೇಷಭೂಷಣ ಧರಿಸಿ ಜಿಲ್ಲೆ ಯ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಶೇ.100 ಮತದಾನಕ್ಕೆ ಮತದಾನದ ಮಹತ್ವವನ್ನು ಸಾರಿ ಎಲ್ಲರೂ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಂಡು ಮತದಾನ ಮಾಡುವಂತೆ ಕರೆ ನೀಡಿದ್ದಾರೆ.
ಇದನ್ನೂ ಓದಿ: Shirva: ಕುತ್ಯಾರು ಕೇಂಜ ಪರಿಸರದಲ್ಲಿ ಚಿರತೆ ಹಾವಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.