Complaint: ಯತ್ನಾಳ್ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು ದೂರು
Team Udayavani, Apr 8, 2024, 12:33 PM IST
ಬೆಂಗಳೂರು: ಗಾಂಧಿನಗರ ಶಾಸಕ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಅವರ ಕುಟುಂಬದ ಸದಸ್ಯರನ್ನು “ದೇಶ ವಿರೋಧಿಗಳು’ ಎಂದು ನಿಂದಿಸಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ಸಂಜಯನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಂಜಯನಗರ ಠಾಣೆಗೆ ಭಾನುವಾರ ಸಂಜೆ ಖುದ್ದು ತೆರಳಿದ ಟಬು ರಾವ್ ಅವರು, ಏ.6ರಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು “ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ’ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ದೇಶ ವಿರೋಧಿ ಹೇಳಿಕೆ ನೀಡುವುದು ಅವರ ಚಟವಾಗಿದೆ’ ಈ ಮೂಲಕ ಸಚಿವರು ಹಾಗೂ ಅವರ ಕುಟುಂಬವನ್ನು ಅವಹೇಳನ ಮಾಡಿ ನಿಂದಿಸಿದ್ದಾರೆ. ಜತೆಗೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಹೀಗಾಗಿ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಟಬು ರಾವ್, ದಿನೇಶ್ ರಾಜಕೀಯದಲ್ಲಿ ಇದ್ದಾರೆ. ಅವರ ಬಗ್ಗೆ ಮಾತನಾಡಲಿ. ನಮ್ಮ ಬಗ್ಗೆ ಏಕೆ ಮಾತನಾಡಬೇಕು? ಎಂದು ಕಿಡಿಕಾರಿದರು.
ಇದೇ ವೇಳೆ ಕ್ರಿಮಿನಲ್ ಮಾನನಷ್ಟ ಮೊಕ್ಕದಮೆ ಹೂಡುತ್ತೇನೆ ಎಂದು ಟಬು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.