Divorce; ಶೀಘ್ರದಲ್ಲೇ ಧನುಷ್-ಐಶ್ವರ್ಯಾ ವಿಚ್ಛೇದನ ಪ್ರಕರಣದ ವಿಚಾರಣೆ
Team Udayavani, Apr 8, 2024, 11:26 PM IST
ಚೆನ್ನೈ: ನಟ-ನಿರ್ದೇಶಕ ಧನುಷ್ ಮತ್ತು ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್ ಇತ್ತೀಚೆಗೆ ಚೆನ್ನೈ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ – ಸೆಕ್ಷನ್ 13 ಬಿ ಅಡಿಯಲ್ಲಿ ಅವರು ಅರ್ಜಿ ಸಲ್ಲಿಸಿದ್ದಾರೆ ಎಂದು ದಂಪತಿಗಳ ನಿಕಟ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ.
2022ರ ಜನವರಿಯಲ್ಲಿ ಇಬ್ಬರೂ ಬೇರೆಯಾಗುವ ನಿರ್ಧಾರವನ್ನು ಪ್ರಕಟಿಸಿದ್ದರು. ಆ ಸಮಯದಲ್ಲಿ ಅವರ ಘೋಷಣೆಯು ಅವರ ಅಭಿಮಾನಿಗಳಿಗೆ ಭಾರಿ ಆಘಾತವನ್ನುಂಟುಮಾಡಿತ್ತು.
ಒಂದೂವರೆ ವರ್ಷದ ನಂತರ ಇಬ್ಬರೂ ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಶೀಘ್ರದಲ್ಲೇ ಅವರ ಪ್ರಕರಣದ ವಿಚಾರಣೆ ನಡೆಯಲಿದೆ. ಕಳೆದ ಎರಡು ವರ್ಷಗಳಿಂದ ಇಬ್ಬರೂ ಬೇರೆ ಬೇರೆಯಾಗಿ ವಾಸವಾಗಿದ್ದರು.
2022 ಜನವರಿ 17, ರಂದು, ಧನುಷ್ ಬೇರೆ ಬೇರೆಯಾಗುವುದನ್ನು ಎಕ್ಸ್ ನಲ್ಲಿ ಘೋಷಿಸಿದ್ದರು. 18 ವರ್ಷಗಳ ದಾಂಪತ್ಯ ಜೀವನದ ನಂತರ ಇಬ್ಬರೂ ದೂರವಾಗಿದ್ದರು.
ಧನುಷ್ ಮತ್ತು ಐಶ್ವರ್ಯ ಅವರು ಕ್ರಮವಾಗಿ 21 ಮತ್ತು 23 ವರ್ಷದವರಾಗಿದ್ದಾಗ 2004 ರಲ್ಲಿ ಅದ್ಧೂರಿ ಸಮಾರಂಭದಲ್ಲಿ ವಿವಾಹವಾಗಿದ್ದರು. ಯಾತ್ರಾ ಮತ್ತು ಲಿಂಗ ಎಂಬ ಇಬ್ಬರು ಗಂಡುಮಕ್ಕಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಡಾಕು ಮಹಾರಾಜ್ʼ ರಿಲೀಸ್ ವೇಳೆ ಮೇಕೆ ಬಲಿ ಕೊಟ್ಟು ಸಂಭ್ರಮ; ಬಾಲಯ್ಯ ಫ್ಯಾನ್ಸ್ ವಿರುದ್ಧ FIR
Tollywood: ‘ಗೇಮ್ ಚೇಂಜರ್ʼ ಚಿತ್ರವನ್ನು ಕೇಬಲ್ ವಾಹಿನಿಯಲ್ಲಿ ಪ್ರಸಾರ ಮಾಡಿದಾತ ಅರೆಸ್ಟ್
ಥಿಯೇಟರ್ನಲ್ಲಿ ಇರುವಾಗಲೇ ಟಿವಿಯಲ್ಲಿ ಪ್ರಸಾರ ಕಂಡ ʼಗೇಮ್ ಚೇಜರ್ʼ: ಚಿತ್ರತಂಡ ಶಾಕ್
ಐದನೇ ಬಾರಿ ಜತೆಯಾದ ಧನುಷ್ – ವೆಟ್ರಿಮಾರನ್; ತೆರೆಮೇಲೆ ʼಕೆಜಿಎಫ್ʼ ರಿಯಲ್ ಕಹಾನಿ?
ಅಧಿಕೃತವಾಗಿ ಅನೌನ್ಸ್ ಆಯಿತು ʼಜೈಲರ್ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ
MUST WATCH
ಹೊಸ ಸೇರ್ಪಡೆ
ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.