Congress ಕಾರ್ಯಕರ್ತರು ಕೋವಿ ಇಟ್ಟುಕೊಂಡು ಓಡಾಡುತ್ತಾರೆ: ಅಶೋಕ್
Team Udayavani, Apr 8, 2024, 11:40 PM IST
ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರು ಗನ್ ಇಟ್ಟುಕೊಂಡು ಓಡಾಡುವ ಮೂಲಕ ತಮ್ಮದು ಗೂಂಡಾ ರಾಜ್ಯ ಎಂದು ತೋರಿಸಿಕೊಂಡಿದ್ದಾರೆ. ಇಂತಹ ಘಟನೆಯಿಂದ ಪೊಲೀಸ್ ಇಲಾಖೆ ಬದುಕಿದ್ದೂ ಸತ್ತಂತಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಒಂದು ತಿಂಗಳು ಮುಂಚಿತವಾಗಿ ಗನ್ ವಾಪಸ್ ಕೊಡಬೇಕಾಗಿತ್ತು. ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ಮೇಲೆ ಒತ್ತಡ ಹಾಕಿ ಗನ್ ಜೇಬಿನಲ್ಲಿ ಇಟ್ಟುಕೊಂಡು ಓಡಾಡುತ್ತಿದ್ದಾರೆ. ಇದು ಕಾಂಗ್ರೆಸ್ ಕಾರ್ಯಕರ್ತರೇ ಮಾಡುತ್ತಿರುವ ರೌಡಿಸಂ. ಅಂಥವರು ಮುಖ್ಯಮಂತ್ರಿಗಳಿಗೆ ಹಾರ ಹಾಕುವ ಮೂಲಕ ನಾವು ಕಾನೂನು ಪಾಲನೆ ಮಾಡಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಇದೇ ಕಾಂಗ್ರೆಸ್ಸಿನ ಗೂಂಡಾ ರಾಜ್ಯ ಎಂದರು. ಈ ಕುರಿತು ಬಿಜೆಪಿ ಚುನಾವಣ ಆಯೋಗಕ್ಕೆ ದೂರು ನೀಡಲಿದೆ ಎಂದು ತಿಳಿಸಿದರು.
ಗನ್ ಇಟ್ಟುಕೊಂಡ ವ್ಯಕ್ತಿ ಸಿಎಂ ಅವರಿಗೆ ಮಾಲಾರ್ಪಣೆ ಮಾಡಿದ್ದನ್ನು ನಾನೂ ಮಾಧ್ಯಮಗಳಲ್ಲಿ ಗಮನಿಸಿದೆ. ಚುನಾವಣೆ ಸಂದರ್ಭದಲ್ಲಿ ಸಿಎಂ ಇರುವಾಗಲೇ ಈ ರೀತಿ ಭದ್ರತಾ ವೈಫಲ್ಯ ಆಗಬಾರದು. ಪೊಲೀಸರು ಹೊಣೆ ಹೊರಬೇಕು. ಎಚ್ಚರಿಕೆಯಿಂದ ಇರಬೇಕು. ಎನ್ಡಿಆರ್ಎಫ್ ನಿಧಿಗಾಗಿ ಸುಪ್ರೀಂ ಕೋರ್ಟ್ನಲ್ಲಿ ರಾಜ್ಯ ಸರಕಾರ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಕೇಂದ್ರ ಸರಕಾರ ಸ್ಪಷ್ಟನೆ ನೀಡಲಿದೆ.
-ಎಚ್.ಡಿ. ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Raichur: ಕಾಂಗ್ರೆಸ್ ಸರ್ಕಾರ ಬಂದಿರುವುದೇ ಅಲ್ಲಾಹುವಿನ ಕೃಪೆಯಿಂದ… ಚಕ್ರವರ್ತಿ ಸೂಲಿಬೆಲೆ
MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದ ರಾಜಕೀಯ ಪಿತೂರಿ: ಡಿಕೆಶಿ
Hubballi: ED ಬಿಜೆಪಿಯ ಅಂಗ ಸಂಸ್ಥೆಯೇ…? ಸಚಿವ ಎಚ್.ಕೆ.ಪಾಟೀಲ್ ಗರಂ
Republic Day Parade: ಗಣರಾಜ್ಯೋತ್ಸವ ಪರೇಡ್ ಗೆ ಚಾಮರಾಜನಗರದ ಕೃಷಿಕ ದಂಪತಿ
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.