![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Apr 9, 2024, 8:30 AM IST
ಬೆಂಗಳೂರು: ಸಿಇಟಿ ಅರ್ಜಿ ಭರ್ತಿ ಮಾಡುವ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳನ್ನು ತಪ್ಪಾಗಿ ಆಯ್ಕೆ ಮಾಡಿಕೊಂಡಿರುವ ಕಲಬುರಗಿ ಜಿಲ್ಲೆಯ ಕೆಲವು ಅಭ್ಯರ್ಥಿಗಳು ತಾವು ಕಲಿತಿರುವ ಪಿಯು ಕಾಲೇಜಿನ ಪ್ರಾಂಶುಪಾಲರ ಮೂಲಕ ಎ.12ರೊಳಗೆ ಮನವಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೂಚಿಸಿದೆ.
ಕಲಬುರಗಿಯ ಕೆಲವು ಅಭ್ಯರ್ಥಿಗಳು ತಮಗೆ ಪರೀಕ್ಷಾ ಕೇಂದ್ರ ಕೋಲಾರ ಜಿಲ್ಲೆಯಲ್ಲಿ ಹಂಚಿಕೆಯಾಗಿದೆ ಎಂದು ಕೆಇಎಗೆ ಇ-ಮೇಲ್ ಮತ್ತು ದೂರವಾಣಿ ಮೂಲಕ ತಿಳಿಸಿರುವ ಕಾರಣ ಅವರ ಅರ್ಜಿಗಳನ್ನು ಪರಿಶೀಲಿಸಿದಾಗ ಅವರೇ ಎಡಿಟ್ ಸಂದರ್ಭದಲ್ಲಿ ಕೋಲಾರ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿರುವುದು ದೃಢಪಟ್ಟಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ತಿಳಿಸಿದ್ದಾರೆ.
ಯುಜಿ ನೀಟ್ ಅಭ್ಯರ್ಥಿಗಳಿಗೆ ಅನ್ವಯ ಆಗದು
ಯುಜಿ ನೀಟ್ ಪರೀಕ್ಷೆಯನ್ನು ಮಾತ್ರ ತೆಗೆದುಕೊಂಡಿರುವ ಅಭ್ಯರ್ಥಿಗಳಿಗೆ ಸಿಇಟಿ ಪ್ರವೇಶ ಪತ್ರ ಡೌನ್‌ಲೋಡ್ ಆಗುವುದಿಲ್ಲ. ಆದರೆ ಅಂತಹ ಅಭ್ಯರ್ಥಿಗಳಿಗೆ ವೈದ್ಯಕೀಯ/ದಂತ ವೈದ್ಯಕೀಯ ಮತ್ತು ಆಯುಷ್ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಇರುತ್ತದೆ ಎಂದು ರಮ್ಯಾ ತಿಳಿಸಿದ್ದಾರೆ.
ಎಕ್ಸಾಂ ಸೆಂಟರ್ ಬದಲಾವಣೆ
ಚಿತ್ರದುರ್ಗದ ಚಳ್ಳಕೆರೆ ಟೋಲ್‌ಗೇಟ್‌ನ ಎಸ್‌ಎಲ್‌ವಿ ಪಿಯು ಕಾಲೇಜ್‌ನಲ್ಲಿ ನಿಗದಿಪಡಿಸಲಾಗಿದ್ದ ಯುಜಿಸಿಇಟಿ-2024ಯನ್ನು ಚಿತ್ರದುರ್ಗದ ಬಸವೇಶ್ವರ ಟಾಕೀಸ್ ರೋಡ್‌ನ ಮಹೇಶ್ ಪಿಯು ಕಾಲೇಜಿಗೆ ವರ್ಗಾಯಿಸಲಾಗಿದೆ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.