Kasaragod ಕಾಡಾನೆ ದಾಳಿಗೆ ತುತ್ತಾಗಿದ್ದ ನಕ್ಸಲ್ ಸುರೇಶ್ ಶರಣಾಗತಿ
Team Udayavani, Apr 9, 2024, 12:36 AM IST
ಕಾಸರಗೋಡು: ಕೇರಳ-ಕರ್ನಾಟಕ ಗಡಿ ಭಾಗದ ಕಾಡಿನಲ್ಲಿ ತನ್ನ ಸಹಚರರೊಂದಿಗೆ ಸಂಚರಿಸುತ್ತಿದ್ದಾಗ ಕಾಡಾನೆ ದಾಳಿಗೆ ತುತ್ತಾಗಿ ಗಾಯಗೊಂಡಿದ್ದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ನಕ್ಸಲ್ ಸುರೇಶ್ ಆಲಿಯಾಸ್ ಪ್ರದೀಪ್ ಕೇರಳದ ಕಣ್ಣೂರಿನಲ್ಲಿ ಪೊಲೀಸರಿಗೆ ಶರಣಾಗಿರು ವುದಾಗಿ ಹೇಳಿಕೆ ನೀಡಿದ್ದಾನೆ.
ಕಂಜಿರಕೊಳ್ಳಿ ಚಿತ್ತಾರಿ ಕಾಲನಿ ಪರಿಸರದಲ್ಲಿ ಫೆಬ್ರವರಿ 16ರಂದು ತೀವ್ರ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಸುರೇಶ್ನನ್ನು ಕಣ್ಣೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪೊಲೀಸರ ವಿಚಾರಣೆ ವೇಳೆ ಆತ ಮೋಸ್ಟ್ ವಾಂಟೆಡ್ ನಕ್ಸಲ್ ಎಂಬ ವಿಚಾರ ತಿಳಿದು ಬಂದಿತ್ತು. ಬಳಿಕ ಆತ ಪೊಲೀಸ್ ಕಸ್ಟಡಿಯಲ್ಲಿದ್ದುಕೊಂಡು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ.
ಪ್ರಸ್ತುತ ಚೇತರಿಸಿಕೊಂಡಿದ್ದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ದ್ದಾನೆ. ಕಳೆದ 23 ವರ್ಷಗಳಿಂದ ನಕ್ಸಲ್ ಚಳವಳಿಯಲ್ಲಿದ್ದೆ. ಈ ಹಿಂದೆಯೇ ಶರಣಾಗಬೇ ಕೆಂದುಕೊಂಡಿದ್ದೆ. ಆದರೆ ಕಾಲ ಕೂಡಿ ಬಂದಿರಲಿಲ್ಲ. ಮಾವೋ ವಾದಿಯಾಗಿ ಏನೂ ಮಾಡಲು ಆಗಿಲ್ಲ. ನಮ್ಮ ಸಂಗಾತಿಗಳಿಗೆ ಕೇರಳ, ಕರ್ನಾಟಕ, ತಮಿಳುನಾಡಿನಲ್ಲಿ ಬದಲಾವಣೆ ತರಲು ಸಾಧ್ಯವಾಗಲಿಲ್ಲ ಎಂದಿದ್ದಾನೆ.
ಸುರೇಶನ ಮೇಲೆ ಕರ್ನಾಟಕದಲ್ಲಿ ಒಟ್ಟು 26ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಆತನನ್ನು ಹಿಡಿದು ಕೊಟ್ಟವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಸರಕಾರ ಘೋಷಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.