Baba Ramdev: ಪತಂಜಲಿ ಜಾಹೀರಾತು ವಿವಾದ-ಕೇಂದ್ರ & ರಾಮ್ ದೇವ್ ಗೆ ಸುಪ್ರೀಂ ತರಾಟೆ
ಒಂದು ಬಾರಿಯಾದರೂ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಬೇಕು
Team Udayavani, Apr 10, 2024, 2:23 PM IST
ನವದೆಹಲಿ: ಪತಂಜಲಿ ಉತ್ಪನ್ನಗಳ ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಬಾ ರಾಮ್ ದೇವ್ ಮತ್ತು ಬಾಲಕೃಷ್ಣ ಸಲ್ಲಿಸಿದ್ದ ಮತ್ತೊಂದು ಕ್ಷಮೆಯಾಚನೆ ಅಫಿದವಿತ್ ಅನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದ್ದು, ನಾವೇನು ಕುರುಡರಲ್ಲ, ಈ ವಿಚಾರದಲ್ಲಿ ನಾವು ಉದಾರವಾದಿಯಾಗಲು ಬಯಸುವುದಿಲ್ಲ ಎಂದು ತಿಳಿಸಿದ್ದು, ಕೇಂದ್ರ ಸರ್ಕಾರ ಸಲ್ಲಿಸಿದ್ದ ಪ್ರತಿಕ್ರಿಯೆ ಕುರಿತು ಅಸಮಾಧಾನವ್ಯಕ್ತಪಡಿಸಿದೆ.
ಇದನ್ನೂ ಓದಿ:Karnataka 2nd PUC Result 2024: ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದ ಎ.ವಿದ್ಯಾಲಕ್ಷ್ಮಿ
“ಕ್ಷಮಾಪಣೆ ಕಾಗದದ ಮೇಲಿದೆ, ಅವರ ಬೆನ್ನು ಗೋಡೆಗೆ ವಿರುದ್ಧವಾಗಿದೆ. ಇದನ್ನು ಸ್ವೀಕರಿಸಲು ನಾವು ಸಿದ್ಧರಿಲ್ಲ. ಇದು ಉದ್ದೇಶಪೂರ್ವಕ ಒಪ್ಪಂದದ ಉಲ್ಲಂಘನೆ ಎಂದು ಪರಿಗಣಿಸುವುದಾಗಿ” ಸುಪ್ರೀಂಪೀಠದ ಜಸ್ಟೀಸ್ ಹಿಮಾ ಕೊಹ್ಲಿ ಮತ್ತು ಜಸ್ಟೀಸ್ ಎ.ಅಮಾನುಲ್ಲಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ವಿಚಾರಣೆಯ ಆರಂಭದಿಂದಲೂ ರಾಮ್ ದೇವ್ ಮತ್ತು ಬಾಲಕೃಷ್ಣ ಕ್ಷಮಾಪಣೆಯನ್ನು ಮೊದಲು ಮಾಧ್ಯಮಗಳಿಗೆ ಕಳುಹಿಸುತ್ತಿರುವುದನ್ನು ಪೀಠ ಗಮನಿಸಿದೆ. ವಿಷಯ ಕೋರ್ಟ್ ನಲ್ಲಿ ಇರುವಾಗಲೇ ಅಫಿಡವಿತ್ ಸಲ್ಲಿಸದೇ, ಮೊದಲು ಮಾಧ್ಯಮಗಳಿಗೆ ಕ್ಷಮಾಪಣೆ ಪತ್ರ ಕಳುಹಿಸುತ್ತಾರೆ. ಇದೊಂದು ಪ್ರಚಾರದ ಗೀಳು ಎಂದು ಜಸ್ಟೀಸ್ ಕೊಹ್ಲಿ ಅಸಮಾಧಾನವ್ಯಕ್ತಪಡಿಸಿದ್ದಾರೆ.
ಪತಂಜಲಿ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಮುಕುಲ್ ರೋಹ್ಟಗಿ, ರಿಜಿಸ್ಟ್ರಿ ಪರವಾಗಿ ಮಾತನಾಡಲು ಸಾಧ್ಯವಿಲ್ಲ, ಈಗಾಗಲೇ ಕ್ಷಮಾಪಣೆಯನ್ನು ಸಲ್ಲಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಉತ್ತರಾಖಂಡ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪೀಠ, ಲೈಸೆನ್ಸ್ ನೀಡಿದ ಇನ್ಸ್ ಪೆಕ್ಟರ್ ವಿರುದ್ಧ ಯಾಕೆ ಕ್ರಮ ತೆಗೆದುಕೊಳ್ಳಲಿಲ್ಲ, ಒಂದು ಬಾರಿಯಾದರೂ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.