Tanashahi…:ನನಗೆ ತಾಯಿಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲೂ ಪೆರೋಲ್ ನೀಡಿರಲಿಲ್ಲ…
ಕಾಂಗ್ರೆಸ್ ಟೀಕೆಗೆ ರಕ್ಷಣ ಸಚಿವ ರಾಜನಾಥ್ ಸಿಂಗ್ ಭಾವುಕ ಉತ್ತರ
Team Udayavani, Apr 11, 2024, 5:07 PM IST
ಹೊಸದಿಲ್ಲಿ: ”ನನ್ನ ತಾಯಿಯ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲೂ ಅನುಮತಿ ನೀಡಿರಲಿಲ್ಲ” ಎಂದು 1975ರಲ್ಲಿ ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯ ದಿನಗಳನ್ನು ನೆನಪಿಸಿ ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ANI ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ, ಸಿಂಗ್ ಭಾವುಕರಾಗಿ, ಆ ಸಮಯದಲ್ಲಿ ನಾನು ಜೈಲಿನಲ್ಲಿದ್ದೆ ನನ್ನ ತಾಯಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದರು. ನನಗೆ ಪೆರೋಲ್ ನೀಡದ ಕಾರಣ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಸಹ ಸಾಧ್ಯವಾಗಲಿಲ್ಲ. ಕಾಂಗ್ರೆಸ್ ನವರು ನಮ್ಮನ್ನು ಈಗ ಸರ್ವಾಧಿಕಾರಿಗಳು ಎಂದು ಕರೆಯುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.
ನನ್ನ ತಾಯಿ 27 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದರು. ಆಕೆಯ ಅಂತಿಮ ದಿನಗಳಲ್ಲಿ ನಾನು ಅವರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ. ತುರ್ತುಪರಿಸ್ಥಿತಿಯ ಮೂಲಕ ಸರ್ವಾಧಿಕಾರವನ್ನು ಹೇರಿದ ಜನರು ನಮ್ಮ ಮೇಲೆ ಸರ್ವಾಧಿಕಾರದ ಆರೋಪ ಮಾಡುತ್ತಿದ್ದಾರೆ. ಎಂದು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ಆರೋಪಗಳಿಗೆ ಪ್ರತಿಕ್ರಿಯಿಸಿದರು.
“ನನಗೆ 23 ವರ್ಷವಾಗಿದ್ದಾಗ ನಾನು 16 ತಿಂಗಳ ಕಾಲ ಜೈಲಿನಲ್ಲಿದ್ದೆ ಮತ್ತು ಎರಡೂವರೆ ತಿಂಗಳ ಕಾಲ ಏಕಾಂಗಿ ಬಂಧನದಲ್ಲಿದ್ದೆ ಎಂದು ಈ ಹಿಂದೆಯೂ ಸಿಂಗ್ ಹೇಳಿದ್ದರು.
1975 ರಿಂದ 1977 ರವರೆಗೆ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರ ಸಲಹೆಯ ಮೇರೆಗೆ ಅಂದಿನ ರಾಷ್ಟ್ರಪತಿ ಫಕ್ರುದ್ದೀನ್ ಅಲಿ ಅಹ್ಮದ್ ಅವರು ಭಾರತದಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದರು. ಪತ್ರಿಕಾ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿ ಮತ್ತು ಹಲವಾರು ವಿರೋಧ ಪಕ್ಷದ ನಾಯಕರನ್ನು ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Arrested: ಬಿಹಾರದ ಬೆಡ್‌ಶೀಟ್ ಗ್ಯಾಂಗ್‌ನ 8 ಮಂದಿ ಸೆರೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.