Delhi Chief Secretary: ದೆಹಲಿ ಮುಖ್ಯ ಕಾರ್ಯದರ್ಶಿ ವಿರುದ್ಧ ಎಫ್‌ಐಆರ್
Team Udayavani, Apr 12, 2024, 9:11 AM IST
ನವದೆಹಲಿ: ಉತ್ತರಾಖಂಡದ ಅಲ್ಮೋರಾ ಪಟ್ಟಣದ ನ್ಯಾಯಾಲಯದ ಸೂಚನೆಯ ಮೇರೆಗೆ ದೆಹಲಿ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಮತ್ತು ಅವರ ಅಧೀನ ವೈವಿವಿಜೆ ರಾಜಶೇಖರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಮಾರ್ಚ್ 2 ರಂದು, ನ್ಯಾಯಾಲಯವು ಅಧಿಕಾರಿಗಳ ವಿರುದ್ಧ ಎನ್‌ಜಿಒ, ಪ್ಲೆಸೆಂಟ್ ವ್ಯಾಲಿ ಫೌಂಡೇಶನ್ ನೀಡಿದ ದೂರಿನ ಆಧಾರದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಕಂದಾಯ ಪೊಲೀಸರಿಗೆ ಸೂಚಿಸಿತು.
ಫೆಬ್ರವರಿ 14ರಂದು ದಡಕಡ ಗ್ರಾಮದಲ್ಲಿ ಎನ್‌ಜಿಒ ನಡೆಸುತ್ತಿರುವ ಶಾಲೆಗೆ ಅಧಿಕಾರಿಗಳು ನಾಲ್ವರನ್ನು ಹಗರಣವೊಂದಕ್ಕೆ ಸಂಬಂಧಿಸಿದ ಕಡತ ಪರಿಶೀಲನೆ ಹೆಸರಿನಲ್ಲಿ ದಾಳಿಗೆ ಕಳುಹಿಸಿದ್ದು, ಕಡತಗಳನ್ನು ಕೊಂಡೊಯ್ದು ನಾಪತ್ತೆ ಮಾಡಿದ್ದಾರೆ ಎಂದು ಪ್ಲೆಸೆಂಟ್ ವ್ಯಾಲಿ ಫೌಂಡೇಶನ್ ಆರೋಪಿಸಿದೆ. ಅಲ್ಲದೆ ನಾಲ್ವರು ಅಧಿಕಾರಿಗಳು ಕಚೇರಿ ಕೊಠಡಿಯನ್ನು ಧ್ವಂಸಗೊಳಿಸಿದ್ದು ಜೊತೆಗೆ ಪೆನ್ ಡ್ರೈವ್ ಸೇರಿದಂತೆ ಹಲವು ಕಡತಗಳನ್ನು ಕೊಂಡೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ. ಡೇಟಾ, ಡಾಕ್ಯುಮೆಂಟ್‌ಗಳು ಮತ್ತು ಪೆನ್ ಡ್ರೈವ್‌ಗಳು ಕುಮಾರ್ ಮತ್ತು ರಾಜಶೇಖರ್ ಅವರು “ವಂಚನೆಗಳಲ್ಲಿ” ಭಾಗವಹಿಸಿದ ಪುರಾವೆಗಳನ್ನು ಒಳಗೊಂಡಿವೆ ಎಂದು ಪಿಟಿಐ ವರದಿ ಮಾಡಿದೆ.
ವಿಜಿಲೆನ್ಸ್ ಇಲಾಖೆ ಮತ್ತು ಇತರ ವೇದಿಕೆಗಳಲ್ಲಿ ತಮ್ಮ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಆರೋಪಗಳನ್ನು ಕೈಬಿಡದಿದ್ದರೆ ಪ್ಲೆಸೆಂಟ್ ವ್ಯಾಲಿ ಫೌಂಡೇಶನ್ ನ ಅಧಿಕಾರಿಗಳನ್ನು ಬಂಧಿಸುವ ಬೆದರಿಕೆಗಳನ್ನು ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಜೊತೆಗೆ ಅಧಿಕಾರಿಗಳು ತಂದಿರುವ ದಾಖಲೆ ಪತ್ರಗಳಿಗೆ ಸಹಿ ಹಾಕುವಂತೆ ತಮ್ಮನ್ನು ಬಲವಂತಪಡಿಸಿದ್ದಾರೆ ಇದಕ್ಕೆ ಒಪ್ಪದಿದ್ದಾಗ ಕಚೇರಿಯಲ್ಲಿದ್ದ 63,000 ರೂಪಾಯಿ ನಗದು ಜಪ್ತಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: Nagarahole: ವನ್ಯಪ್ರಾಣಿಗಳ ಬೇಟೆಗೆ ಹೊಂಚು ಹಾಕುತ್ತಿದ್ದ ಇಬ್ಬರ ಬಂಧನ, ಮೂವರು ಪರಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.