Road Mishap: ಮಾನವೀಯತೆ ಮೆರೆದ ಶಿರ್ವ ಎಸ್‌ಎಲ್‌ಆರ್‌ಎಂ ಘಟಕದ ಸಿಬಂದಿ
Team Udayavani, Apr 12, 2024, 3:02 PM IST
ಶಿರ್ವ: ಶಿರ್ವ ಗ್ರಾ.ಪಂ.ನ ಮಟ್ಟಾರು ಎಸ್‌ಎಲ್‌ಆರ್‌ಎಂ ಘಟಕದ ಬಳಿ ನಾಯಿಯೊಂದು ಅಡ್ಡಬಂದು ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮಹಿಳೆಯರಿಬ್ಬರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಶಿರ್ವ ಎಸ್‌ಎಲ್‌ಆರ್‌ಎಂ ಘಟಕದ ಸಿಬಂದಿ ಸ್ವಚ್ಚವಾಹಿನಿ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಕಾಪು ಖಾಸಗಿ ಕಾಲೇಜಿನ ಉಪನ್ಯಾಸಕಿಯರಾದ ಜಯಲಕ್ಷ್ಮೀ ಮತ್ತು ವಿನುತಾ ಕಾರ್ಕಳದಿಂದ ಕಾಪುವಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಮಟ್ಟಾರು ಎಸ್‌ಎಲ್‌ಆರ್‌ಎಂ ಘಟಕದ ಬಳಿ ನಾಯಿ ಅಡ್ಡ ಬಂದು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಏಳಲೂ ಆಗದೆ, ಮಾತನಾಡಲೂ ಆಗದ ಸ್ಥಿತಿಯಲ್ಲಿದ್ದರು.
ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲು ಯಾವುದೇ ವಾಹನ ಸಿಗದ ಕಾರಣ ಮಟ್ಟಾರು ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬಂದಿ ಧಾವಿಸಿ ಗಾಯಾಳುಗಳನ್ನು ಘಟಕದ ಸ್ವಚ್ಛ ವಾಹಿನಿ ವಾಹನದಲ್ಲಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.
ಓರ್ವ ಮಹಿಳೆಗೆ ತಲೆಗೆ ಗಂಭೀರ ಗಾಯವಾಗಿದ್ದು,ಮತ್ತೋರ್ವ ಮಹಿಳೆಗೆ ಕಾಲಿಗೆ ತೀವ್ರ ತರಹದ ಗಾಯವಾಗಿರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಒಬ್ಬರನ್ನು ಬಂಟಕಲ್ಲು ನಾಗರಿಕ ಸೇವಾ ಸಮಿತಿಯ ಅಂಬುಲೆನ್ಸ್‌ನಲ್ಲಿ ಮತ್ತೂಬ್ಬರನ್ನು 108 ಅಂಬುಲೆನ್ಸ್‌ನಲ್ಲಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಎಸ್‌ಎಲ್‌ಆರ್‌ಎಂ ಘಟಕದ ಸಿಬಂದಿ ದಾಖಲಿಸಿ ಗಾಯಾಳುಗಳ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ಘಟಕದ ಸಿಬಂದಿಗಳ ಮಾನವೀಯ ಸ್ಪಂದನೆಗೆ ನಾಗರಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.