Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ


Team Udayavani, Apr 12, 2024, 5:41 PM IST

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

ದೇವನಹಳ್ಳಿ: ಭಾರತ ಹವಾಮಾನ ಇಲಾಖೆಯು (ಐಎಂಡಿ)ಯು ಪ್ರಸಕ್ತ ವರ್ಷದಲ್ಲಿ ಅತೀ ಹೆಚ್ಚು ತಾಪಮಾನ ಕುರಿತು ಹೊರಡಿಸಿದ ಮುನ್ಸೂಚನೆ ಅನ್ವಯ ದೇಶದ ಹೆಚ್ಚಿನ ಭಾಗ ಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನವನ್ನು ಸೂಚಿಸುತ್ತದೆ.

ಪ್ರಸ್ತುತ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿಗಳಷ್ಟು ಅಧಿಕ ತಾಪಮಾನ ದಾಖ ಲಾಗುತ್ತಿದ್ದು, ಇದು ಮಾನವ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಭಾರತೀಯ ಹವಾಮಾನ ಇಲಾಖೆ 2024ರ ಏಪ್ರಿಲ್‌ 1ರಂದು ಬಿಡುಗಡೆ ಮಾಡಲಾದ ಹವಾಮಾನ ಸಂಭವನೀಯತೆಯ ಮುನ್ನೋಟವನ್ನು ಆಧರಿಸಿ, ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್‌ ಮಾಹೆ ಯಿಂದ ಮೇ- 2024ರ ಅವಧಿಯಲ್ಲಿ ಮುಂಬರುವ ಬಿಸಿ ವಾತಾವರಣವು ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾಗಿ ಇರುತ್ತದೆ ಎಂದು ಸೂಚಿಸಿರುತ್ತದೆ. ತಾಪ ಮಾನದ ಮುನ್ಸೂಚನೆಯ ಹೆಚ್ಚಳವು ರಾಜ್ಯ ದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳು ಮೀರುವ ಸಾಧ್ಯತೆಯಿದೆ.

ಹೆಚ್ಚು ನೀರು ಕುಡಿಯುವುದು: ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿ ಯಲ್ಲಿ (ಮಧ್ಯಾಹ್ನ 12 ರಿಂದ 3ರವರೆಗೆ) ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು. ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿ ಯುವುದು. ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿಬಟ್ಟೆಗಳನ್ನು ಧರಿಸುವುದು.

ತಣ್ಣೀರು ಸ್ನಾನ ಮಾಡುವುದು ಒಳ್ಳೆಯದು: ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ / ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸುವುದು. ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು (ಮಧ್ಯಾಹ್ನ 12ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು) ತಪ್ಪಿಸುವುದು. ಪ್ರಯಾಣಿಸುವಾಗ ನೀರನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗುವುದು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್‌ ತಂಪು ಪಾನೀಯಗಳನ್ನು ತಪ್ಪಿಸುವುದು. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸುವುದು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡದಿ ರುವುದು. ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ ತಕ್ಷಣ ವೈದ್ಯರನ್ನು ಭೇಟಿ ಮಾಡುವುದು.

ತಂಪು ಪಾನೀಯ ಬಳಸುವುದು: ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಬಳಸುವುದು. ಸಾಕುಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸುವುದು. ಮನೆಯನ್ನು ತಂಪಾಗಿರಿಸಲು ಪರದೆಗಳು, ತಣ್ಣೀರು ಸ್ನಾನ ಮಾಡು ವುದು. ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ / ಟೋಪಿ ಅಥವಾ ಕ್ಯಾಪ್‌ ಒಳಗೊಂಡಿರುವ ಅತೀ ಹೆಚ್ಚು ತಾಪಮಾನವನ್ನು ತಡೆಗಟ್ಟುವ ಕಿಟ್‌ಅನ್ನು ಒಯ್ಯಲು ನಾಗರಿಕರನ್ನು ಪ್ರೋತ್ಸಾಹಿಸುವುದು. ಅತೀ ಹೆಚ್ಚು ತಾಪಮಾನದಿಂದ ಆರೋಗ್ಯದ ಮೇಲಾಗುವ ಪರಿಣಾಮಗಳು ಹಾಗೂ ಗುರುತಿಸುವಿಕೆ ಅತೀ ಹೆಚ್ಚು ತಾಪಮಾನದಿಂದ ಸಾಮಾನ್ಯವಾಗಿ ನಿರ್ಜಲೀಕರಣ, ಶಾಖ ಸೆಳೆತ, ಶಾಖದ ಬಳಲಿಕೆ ಮತ್ತು / ಅಥವಾ ಶಾಖದ ಅಘಾತದಂತಹ ಆರೋಗ್ಯದ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇದ್ದು, ಅವುಗಳ ರೋಗ ಲಕ್ಷಣಗಳು

ಶಾಖ ಸೆಳೆತಗಳು: ಊತ ಮತ್ತು ಮೂರ್ಛೆ, ಸಾಮಾನ್ಯವಾಗಿ 39 ಓ ಇ ಅಂದರೆ 102 ಓಊ ಗಿಂತ ಕಡಿಮೆ ಜ್ವರದಿಂದ ಕೂಡಿರುತ್ತದೆ. ಆಯಾಸ, ದೌರ್ಬಲ್ಯ, ತಲೆ ತಿರುಗುವಿಕೆ, ತಲೆ ನೋವು, ವಾಕರಿಕೆ, ವಾಂತಿ, ಸ್ನಾಯು ಸೆಳೆತ ಮತ್ತು ಬೆವರುವುದು. ದೇಹದ ಉಷ್ಣತೆಯು 40ಓ ಇ ಅಂದರೆ 104ಓ ಊ ಅಥವಾ ಅದಕ್ಕಿಂತ ಹೆಚ್ಚಾಗುವುದು ಹಾಗೂ ಉಸಿರಾಟದಲ್ಲಿ ವ್ಯತ್ಯಯ ಮತ್ತು ಪ್ರಜ್ಞೆ ತಪ್ಪುವುದು. ಅತೀ ಹೆಚ್ಚು ತಾಪಮಾನ ಕ್ಕೆ ಸಂಬಂಧಿತ ಕಾಯಿಲೆಗೆ ಪ್ರಥಮ ಚಿಕಿತ್ಸೆ ಅತೀ ಹೆಚ್ಚು ತಾಪಮಾನದಿಂದ ತುತ್ತಾದ ವ್ಯಕ್ತಿಯನ್ನು ನೆರಳಿನ ಅಡಿಯಲ್ಲಿ ತಂಪಾದ ಸ್ಥಳಕ್ಕೆ ಸ್ಥಳಾಂತರಿ ಸು ವುದು. ಒದ್ದೆಯಾದ ಬಟ್ಟೆಯಿಂದ ಮೈ ಒರಸುವುದು / ತಂಪಾದ ಒದ್ದೆ ಬಟ್ಟೆಯನ್ನು ಹಾಕು ವುದು ಹಾಗೂ ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕುವುದು. ನೀರು ಅಥವಾ ಪುನರ್ಜಲೀಕರಣ ಪಾನೀಯಗಳಾದ ಓಆರ್‌ಎಸ್‌, ನಿಂಬೆ ಪಾನಕ ನೀಡು ವುದು. (ವ್ಯಕ್ತಿ ಇನ್ನೂ ಪ್ರಜ್ಞೆ ಹೊಂದಿದ್ದರೆ) ವ್ಯಕ್ತಿಗೆ ತಂಪಾದ ಗಾಳಿಯ ವ್ಯವಸ್ಥೆ ಮಾಡುವುದು. ಉತ್ತಮ ಗಾಳಿಗಾಗಿ ಬಟ್ಟೆಗಳನ್ನು ಸಡಿಲಗೊಳಿಸುವುದು. ರೋಗ ಲಕ್ಷಣಗಳು ಉಲ್ಬಣಗೊಂಡರೆ ಅಥವಾ ದೀರ್ಘ‌ ಕಾಲದವರೆಗೆ ಇದ್ದರೆ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಕೂಡಲೇ ಸಂಪರ್ಕಿಸುವುದು. ಮದ್ಯಪಾನ, ಕಾಫಿ, ಶೇಖರಿಸಿದ ಪಾನೀಯವನ್ನು ನೀಡಬಾರದು.

ಅತೀ ಹೆಚ್ಚು ತಾಪಮಾನವನ್ನು, ಅನಾರೋಗ್ಯವನ್ನು ತಡೆಗಟ್ಟಲು ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಬೇಕಾದ ನಿರ್ದಿಷ್ಟ ಕ್ರಮಗಳು: ಅತೀ ಹೆಚ್ಚು ತಾಪಮಾನಕ್ಕೆ ಸಂಬಂಧಿಸಿದಂತೆ IMD ಮತ್ತು KSNDMC ಯಿಂದ ನೀಡಿದ ಮುನ್ಸೂಚನೆ / ಎಚ್ಚರಿಕೆಗಳನ್ನು ಕಟ್ಟ ಕಡೆಯ ವ್ಯಕ್ತಿಗೆ ತಲುಪಿಸುವುದು. ಅತಿ ಹೆಚ್ಚು ತಾಪಮಾನದ ಪ್ರತಿಕೂಲ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅತೀ ಹೆಚ್ಚು ತಾಪಮಾನದ ಸಮಯದಲ್ಲಿ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆ ತಯಾರಿಸಿರುವ IEC ಸಕ್ರಿಯಗೊಳಿಸುವುದು. ನಗರ, ಪಟ್ಟಣ, ಕೊಳಚೆ ಪ್ರದೇಶಗಳು, ಅತೀ ಹೆಚ್ಚು ತಾಪಮಾನಕ್ಕೆ ತುತ್ತಾಗುವಂತಹ ಹಳ್ಳಿಗಳನ್ನು ಗುರುತಿಸಿ ಮತ್ತು ಕುಡಿಯುವ ನೀರಿನ ಸೌಲಭ್ಯಗಳ ಲಭ್ಯತೆ ಯನ್ನು ಖಚಿತಪಡಿಸಿಕೊಳ್ಳುವುದು. ಮಾರುಕಟ್ಟೆಗಳು, ಬಸ್‌ ನಿಲ್ದಾಣಗಳು / ಬಸ್‌ ಟರ್ಮಿನಲ್‌ಗ‌ಳು ಮತ್ತು ಜನರು ಸೇರುವ ಇತರ ಆಯಕಟ್ಟಿನ ಸ್ಥಳಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು ಹಾಗೂ ಸಾರ್ವ ಜನಿಕ ಸ್ಥಳಗಳಲ್ಲಿ ನೆರಳಿನ ಸೌಲಭ್ಯ ಕಲ್ಪಿಸುವುದು. ಪ್ರಾಣಿಗಳಲ್ಲಿ ಬಿಸಿಗಾಳಿಗೆ ಸಂಬಂಧಿತ ಕಾಯಿ ಲೆಯ ಚಿಕಿತ್ಸೆಗೆ ನಿಯಮಾನುಸಾರ ಸಂಬಂಧಿಸಿದ ಪಶು ವೈದ್ಯಕೀಯ ಔಷಧಗಳನ್ನು ಶೇಖರಣೆ ಮಾಡುವುದು. ವಾಹನ ಚಾಲಕರಿಗೆ ಅವಶ್ಯ ಕುಡಿಯುವ ನೀರನ್ನು ಒದಗಿಸುವುದು ಹಾಗೂ ರಾಜ್ಯದಲ್ಲಿ ಅತೀ ಹೆಚ್ಚು ತಾಪಮಾನದ ಪರಿಸ್ಥಿತಿಗಳ ಬಗ್ಗೆ ಪ್ರವಾಸಿಗರಿಗೆ ಸಲಹೆಗಳನ್ನು ಪ್ರಚಾರ ಮಾಡುವುದು.

ಧಾರ್ಮಿಕ ಸ್ಥಳಗಳಲ್ಲಿ ಯಾತ್ರಾರ್ಥಿಗಳಿಗೆ ಸುರಕ್ಷಿತ ಕುಡಿಯುವ ನೀರಿನ ಲಭ್ಯತೆ ಯನ್ನು ಖಚಿತಪಡಿಸಿಕೊಳ್ಳುವುದು ಪ್ರದೇಶಗಳನ್ನು ನಿರ್ಮಿಸುವುದು ತಾತ್ಕಾಲಿಕ ನೆರಳಿನ ಸಾಮೂಹಿಕ ಸಭೆಯ ಹೊರಾಂಗಣ ಸ್ಥಳಗಳಲ್ಲಿ ಜನರಿಗೆ ತಾತ್ಕಾಲಿಕ ನೆರಳಿನ ವ್ಯವಸ್ಥೆ ಇರು ವುದನ್ನು ಖಚಿತಪಡಿಸಿಕೊಳ್ಳಬೇಕು. ಸಾಕಷ್ಟು ಕುಡಿಯುವ ನೀರಿನ ಸೌಲಭ್ಯಗಳನ್ನು ಒದಗಿಸ ಬೇಕು, ಆಸನಗಳ ನಡುವೆ ಸಾಕಷ್ಟು ಸ್ಥಳಾವಕಾಶ ಇರಬೇಕು, ಸಾಕಷ್ಟು ಮತ್ತು ಇತರ ಔಷಧಿ ಗಳ ದಾಸ್ತಾನು ಮತ್ತು ವೈದ್ಯಕೀಯ ಸಿಬ್ಬಂದಿ ಇರಬೇಕು. ಅತೀ ಹೆಚ್ಚು ತಾಪಮಾನಕ್ಕೆ ತುತ್ತಾದ ವ್ಯಕ್ತಿಗೆ ಪ್ರತ್ಯೇಕ ವಿಶ್ರಾಂತಿ ಸ್ಥಳವನ್ನು ಖಚಿತಪಡಿಸಿಕೊಳ್ಳಬೇಕು. ಅನುಕೂಲಕರ ತಾಪಮಾನ ವನ್ನು ಖಚಿತಪಡಿಸಿಕೊಳ್ಳಲು ಮತ್ತು ಸ್ಥಳದಲ್ಲಿ ಸಾಕಷ್ಟು ಗಾಳಿ ಸಂಚಾರ ಇರುವುದನ್ನು ಖಚಿತ ಪಡಿಸಿಕೊಳ್ಳಲು ಸಾಕಷ್ಟು ಸಂಖ್ಯೆಯ ಫ್ಯಾನ್‌ ಇರಬೇಕು. ಸಾಧ್ಯವಾದಷ್ಟು ಮಟ್ಟಿಗೆ ಸಭೆ / ಸಮಾ ರಂಭಗಳನ್ನು ತಂಪಾದ ವಾತಾವರಣವಿರುವ ಅವಧಿಯಲ್ಲಿ (ಬೆಳಗ್ಗೆ ಅಥವಾ ಸಂಜೆ) ನಿಗದಿ ಪಡಿಸುವುದು. ಜಿಲ್ಲಾಧಿಕಾರಿಗಳು / ಜಿಲ್ಲಾ ವಿಪತ್ತು ನಿರ್ವಹಣಾ ಅಧಿ ಕಾರಿಗಳು ತಮ್ಮ ಜಿಲ್ಲೆಗೆ ಸಂಬಂಧಿಸಿದ ಅತೀ ಹೆಚ್ಚು ತಾಪಮಾನ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು.

ಹೆಚ್ಚು ತಾಪಮಾನ ಸಮಯದಲ್ಲಿ ಬೆಂಕಿಯ ತಡೆಗಟ್ಟುವಿಕೆ: ಆಸ್ಪತ್ರೆಗಳು, ಕೈಗಾರಿಕೆಗಳು, ಜನಸಂದಣಿ ಸ್ಥಳಗಳು ಇತ್ಯಾದಿಗಳಲ್ಲಿ ಅಗ್ನಿ ಸುರಕ್ಷತೆಯ ವಿವಿಧ ಅಂಶಗಳ ಮೇಲೆ ಆಗಾಗ್ಗೆ ತಪಾಸಣೆ ಕೈಗೊಳ್ಳುವುದು. ಅಗ್ನಿ ಸುರಕ್ಷತೆಗೆ ತರಬೇತಿಗಳನ್ನು ಕೈಗೊಳ್ಳುವುದು. ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ ಕಡ್ಡಾಯವಾಗಿ ನಡೆಸು ವುದು. ಅತೀ ಹೆಚ್ಚು ತಾಪಮಾನ ತಡೆಗಟ್ಟುವ ಕುರಿತಂತೆ ಇಲಾಖಾ ವಾರು ಕರ್ತವ್ಯ / ಜವಾ ಬ್ದಾರಿಗಳನ್ನು ಅತೀ ಹೆಚ್ಚು, ತಾಪಮಾನದ ಕ್ರಿಯಾ ಯೋಜನೆಗಳಲ್ಲಿ ನಿಗದಿಪಡಿಸಲಾಗಿರುತ್ತದೆ. ಮೇಲೆ ವಿವರಿಸಿರುವ ಸಲಹೆ ಸೂಚನೆಗಳೊಂದಿಗೆ ಕ್ರಿಯಾ ಯೋಜನೆಗಳಡಿಯಲ್ಲಿ ಇಲಾಖೆ ಗಳಿಗೆ ನಿಗದಿಪಡಿಸಿರುವಂತೆ ಜಿಲ್ಲಾಧಿಕಾರಿ ಕ್ರಮಗಳನ್ನು ಕೈಗೊಳ್ಳುವುದು.

ಎಸ್‌.ಮಹೇಶ್‌

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.