Conflict: ರಾಜ್ಯದಲ್ಲೂ ರಾಜ್ಯಪಾಲ- ಸರಕಾರ ಸಂಘರ್ಷ ಆರಂಭ?

ಲಾಭದಾಯಕ ಹುದ್ದೆ ವಿನಾಯಿತಿ ಮಸೂದೆ ಸರಕಾರಕ್ಕೆ ವಾಪಸ್‌/ ದೇಶಪಾಂಡೆ, ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಹುದ್ದೆ ಅತಂತ್ರ

Team Udayavani, Apr 13, 2024, 11:30 AM IST

13

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಬಿಸಿ ಏರುತ್ತಿರುವ ಸಂದರ್ಭದಲ್ಲೇ ರಾಜಭವನ ಹಾಗೂ ಮುಖ್ಯಮಂತ್ರಿ ಕಚೇರಿಯ ಮಧ್ಯೆ ಶೀತಲ ಸಮರ ಆರಂಭವಾಗಿದೆ. ಸಿಎಂ ಸಲಹೆಗಾರರ ನೇಮಕಕ್ಕೆ ಕಾನೂನು ತೊಡಕು ಉಂಟಾಗಬಾರದೆಂಬ ಉದ್ದೇಶದಿಂದ ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಿ ಅನುಮೋದನೆಗೆ ಕಳುಹಿಸಿದ್ದ “ಲಾಭದಾಯಕ ಹುದ್ದೆ ವಿನಾಯಿತಿ ಮಸೂದೆ’ಯನ್ನು ರಾಜ್ಯ ಪಾಲರು ವಾಪಸ್‌ ಕಳುಹಿಸಿದ್ದಾರೆ.

ರಾಜ್ಯದ ನೆರೆಯ ರಾಜ್ಯಗಳಾಗಿರುವ ತಮಿಳು ನಾಡು, ತೆಲಂಗಾಣ, ಕೇರಳಗಳಲ್ಲಿ ಮಸೂದೆ ಅಂಗೀಕಾರ ಸಹಿತ ಪ್ರಮುಖ ವಿಚಾರಗಳ ಬಗ್ಗೆ ರಾಜ್ಯಪಾಲರು ಮತ್ತು ಆಯಾ ಸರಕಾರಗಳ ನಡುವೆ ಸಂಘರ್ಷ ನಡೆಯುತ್ತಿರುವಂತೆಯೇ ರಾಜ್ಯದಲ್ಲಿ ಈ ಬೆಳವಣಿಗೆ ನಡೆದಿದೆ.

ಇದರಿಂದಾಗಿ ಸಿಎಂ ಸಿದ್ದರಾಮಯ್ಯನವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಸಲಹೆಗಾರ ಬಿ.ಆರ್‌. ಪಾಟೀಲ್‌ ಹಾಗೂ ಆಡಳಿತ ಸುಧಾ ರಣ ಆಯೋಗದ ಅಧ್ಯಕ್ಷ ಆರ್‌.ವಿ. ದೇಶಪಾಂಡೆ ಯವರ ನೇಮಕ ಪ್ರಕ್ರಿಯೆ ಅತಂತ್ರ ಸ್ಥಿತಿ ತಲುಪುವ ಸಾಧ್ಯತೆ ಇದೆ. ಧಾರ್ಮಿಕ ದತ್ತಿ ಮಸೂದೆಯ ಬಳಿಕ ಸರಕಾರದ ಮತ್ತೂಂದು ಮಹತ್ವದ ನಿರ್ಧಾರಕ್ಕೆ ರಾಜ್ಯಪಾಲರು “ಕೆಂಪು ದೀಪ’ ತೋರಿದ್ದಾರೆ.

ರಾಜ್ಯಪಾಲರ ಈ ನಡೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ಸಿಡಿಮಿಡಿ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಜತೆಗೆ ಈ ಬಗ್ಗೆ ಮಹತ್ವದ ಚರ್ಚೆಯೂ ನಡೆದಿದೆ. ರಾಜ್ಯಪಾಲರ ನಡೆ ಅಸಾಂವಿಧಾನಿಕ ಎಂದು ರಾಜಭವನಕ್ಕೆ ಪತ್ರ ಬರೆಯುವಂತೆ ಕಾನೂನು ಕಾರ್ಯದರ್ಶಿಗೆ ಸಿಎಂ ಕಚೇರಿಯಿಂದ ನಿರ್ದೇಶನ ನೀಡಲಾಗಿದೆ.

ಆದರೆ ರಾಜ್ಯಪಾಲರ ಕಾರ್ಯದರ್ಶಿಯನ್ನು ಖುದ್ದು ಭೇಟಿ ಮಾಡಿದ ಬಳಿಕವೇ ಮುಂದಿನ ನಿರ್ಧಾರ ತೆಗೆದುಕೊಳ್ಳುವಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಸವರಾಜ ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಹಾಗೂ ಆರ್‌.ವಿ. ದೇಶಪಾಂಡೆಯವರ ನೇಮಕಕ್ಕೆ ರಾಜ್ಯಪಾಲರು ಆಕ್ಷೇಪ ಎತ್ತಬಹುದೆಂಬ ಕಾರಣಕ್ಕೆ ರಾಜ್ಯ ಸರಕಾರ ಈ ತಿದ್ದುಪಡಿ ಮಸೂದೆ ತಂದಿತ್ತು. ಈ ಹಿಂದೆ ಸಿಎಂ ಕಾನೂನು ಸಲಹೆಗಾರರ ಹುದ್ದೆಗೆ ಶಾಸಕ ಪೊನ್ನಣ್ಣ ಅವರನ್ನು ನೇಮಕ ಮಾಡಿದಾಗ ರಾಜ್ಯಪಾಲರಿಂದ ಯಾವುದೇ ಆಕ್ಷೇಪ ವ್ಯಕ್ತವಾಗಿರಲಿಲ್ಲ. ಆದರೆ ಬೇಕಾಬಿಟ್ಟಿಯಾಗಿ ಸಚಿವ ಸಂಪುಟ ಸ್ಥಾನಮಾನ ನೀಡುತ್ತಿರುವ ಪ್ರಕ್ರಿಯೆ ಬಗ್ಗೆ ರಾಜಭವನ ಮುನಿಸಿಕೊಂಡಿದೆ ಎನ್ನಲಾಗುತ್ತಿದೆ.

ಚುನಾವಣೆಯ ಹೊಸ್ತಿಲಲ್ಲಿ ರಾಜ್ಯಪಾಲರು ಈ ನಿರ್ಧಾರ ತೆಗೆದುಕೊಂಡಿರುವುದು ತೀವ್ರ ರಾಜಕೀಯ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ. ಕೇಂದ್ರದ ವಿರುದ್ಧ ಈಗಾಗಲೇ ತಿರುಗಿ ಬಿದ್ದಿರುವ ಸಿದ್ದರಾಮಯ್ಯ ಸರಕಾರ ಈ ವಿಚಾರವನ್ನು ಸರಳವಾಗಿ ಸ್ವೀಕರಿಸುವ ಸಾಧ್ಯತೆ ಕಡಿಮೆ. ಇದು ಮತ್ತೂಂದು ಸಾಂವಿಧಾನಿಕ ಬಿಕ್ಕಟ್ಟಿನ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಟಾಪ್ ನ್ಯೂಸ್

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

1-weqewewqe

Yakshagana;ಇನ್ನೂ ನೂರಾರು ಸುಶ್ರಾವ್ಯ ರಾಗಗಳ ಅಳವಡಿಕೆ ಸಾಧ್ಯ: ವಿದ್ವಾನ್‌ ಗಣಪತಿ ಭಟ್‌

Comet

Comet of the Century: ಅಕ್ಟೋಬರ್‌ನಲ್ಲಿ ಧೂಮಕೇತುಗಳ ಮೆರವಣಿಗೆ

isreal

Coastal People in Israel: ಸದ್ಯ ಸುರಕ್ಷಿತ, ಆದರೂ ಆದರೆ ಭವಿಷ್ಯವೇನು ಎಂಬ ಆತಂಕ

Udupi-DC-Meeting

Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

Bela1

Wild Elephant: ಧರ್ಮಸ್ಥಳ, ಚಾರ್ಮಾಡಿಯಲ್ಲಿ ಕಾಡಾನೆಗಳ ಹಾವಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kb

Land; ಬಗರ್‌ ಹುಕುಂ ಅರ್ಜಿ: ಎರಡು ತಿಂಗಳು ಗಡುವು

Kharge (2)

Karnataka Politics; ದಲಿತ ಸಿಎಂ ಚರ್ಚೆಗೆ ಮತ್ತೆ ರೆಕ್ಕೆಪುಕ್ಕ

1-vara

Dowry; ವರದಕ್ಷಿಣೆ ಕಿರುಕುಳ: ಕುಂದಾಪುರ ಮೂಲದ ಮಹಿಳಾ ಟೆಕಿ ಆತ್ಮಹ *ತ್ಯೆ

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

1-weqewewqe

Yakshagana;ಇನ್ನೂ ನೂರಾರು ಸುಶ್ರಾವ್ಯ ರಾಗಗಳ ಅಳವಡಿಕೆ ಸಾಧ್ಯ: ವಿದ್ವಾನ್‌ ಗಣಪತಿ ಭಟ್‌

Comet

Comet of the Century: ಅಕ್ಟೋಬರ್‌ನಲ್ಲಿ ಧೂಮಕೇತುಗಳ ಮೆರವಣಿಗೆ

isreal

Coastal People in Israel: ಸದ್ಯ ಸುರಕ್ಷಿತ, ಆದರೂ ಆದರೆ ಭವಿಷ್ಯವೇನು ಎಂಬ ಆತಂಕ

Udupi-DC-Meeting

Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.