![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 15, 2024, 9:35 AM IST
ಜಗಳೂರು: ಜಗಳೂರು ವಿಧಾನಸಭಾ ಕ್ಷೇತ್ರ ನಂಜುಂಡಪ್ಪ ವರದಿ ಅನ್ವಯ ಅತಿ ಹಿಂದುಳಿದ ತಾಲೂಕು ಎಂದು ಗುರುತಿಸಲ್ಪಟ್ಟಿದೆ. ಕ್ಷೇತ್ರವನ್ನು ಬರಪೀಡಿತ ಹಣೆಪಟ್ಟಿಯಿಂದ ಹೊರತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿದರು.
ಭಾನುವಾರ ಜಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುಣಬಗಟ್ಟೆ, ಕಮ್ಮತ್ತಹಳ್ಳಿ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಸಿದ ಅವರು, ಜಗಳೂರು ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಹಣೆಪಟ್ಟಿಯಿಂದ ಹೊರತರಲು ಪೂರಕವಾಗಿ ಕ್ಷೇತ್ರಕ್ಕೆ ವಿಶೇಷ ಯೋಜನೆಗಳನ್ನು ತರುವ ಉದ್ದೇಶ ಇದೆ ಎಂದರು.
ಜಗಳೂರು ವಿಧಾನಸಭಾ ಕ್ಷೇತ್ರ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಅತಿ ಹೆಚ್ಚಿನ ಅನುದಾನದಲ್ಲಿ ರಸ್ತೆ, ಚರಂಡಿಗಳು ಸುಧಾರಣೆ
ಕಂಡಿವೆ. ಕ್ಷೇತ್ರದಲ್ಲಿ ಅಂತರ್ಜಲ ಮಟ್ಟ ಗಣನೀಯ ಪ್ರಮಾಣದಲ್ಲಿ ಕುಸಿದಿದ್ದು, ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಕೆರೆ-ಕಟ್ಟೆಗಳನ್ನು ತುಂಬಿಸುವ
ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿರುವುದನ್ನು ಮುಂದುವರಿಸಿಕೊಂಡು ಹೋಗುವ ಸಂಕಲ್ಪ ನನ್ನದಾಗಿದ್ದು, ಭದ್ರಾ ಮೇಲ್ದಂಡೆ ಯೋಜನೆಯಿಂದ ಕ್ಷೇತ್ರಕ್ಕೆ ಸಾಕಷ್ಟು ಅನುಕೂಲ ಆಗಲಿದೆ. ಕೇಂದ್ರ ಸರ್ಕಾರ 5300 ಕೋಟಿ ಅನುದಾನ ನೀಡಿದೆ ಎಂದರು.
ಕಳೆದ ಚುನಾವಣೆಗಳಲ್ಲಿ ಹರಪನಹಳ್ಳಿ ತಾಲೂಕಿನ ಈ 7 ಗ್ರಾಮ ಪಂಚಾಯತಿಗಳು ಬಿಜೆಪಿಗೆ ಹೆಚ್ಚಿನ ಮತ ನೀಡಿ ಆಶೀರ್ವಾದ ಮಾಡಿವೆ. ಈ ಬಾರಿಯೂ
ಕೂಡ ಅತಿ ಹೆಚ್ಚಿನ ಮತಗಳನ್ನು ನನಗೆ ನೀಡುವುದರ ಮುಖಾಂತರ ಆಶೀರ್ವಾದ ಮಾಡಬೇಕು. ಪ್ರತಿಯೊಬ್ಬ ಕಾರ್ಯಕರ್ತರೂ ಕೂಡ ನಾನೇ ಅಭ್ಯರ್ಥಿ ಎನ್ನುವ ರೀತಿಯಲ್ಲಿ ಕೆಲಸ ಮಾಡಬೇಕು.
ಒಂದೊಂದು ಮತ ದೇಶವನ್ನು ಎಲ್ಲ ದೃಷ್ಟಿಯಿಂದ ಬಲಪಡಿಸಲಿದೆ. ಮಕ್ಕಳ ಎಲ್ಲರ ಭವಿಷ್ಯ ಉಜ್ವಲಗೊಳಿಸಲಿದೆ ಎಂದರು. ಇಡೀ ವಿಶ್ವವೇ ನರೇಂದ್ರ ಮೋದಿ ಅವರೇ ಭಾರತದ ಪ್ರಧಾನಮಂತ್ರಿ ಆಗಬೇಕು ಎಂದು ಎದುರು ನೋಡುತ್ತಿದೆ. ಪ್ರತಿಯೊಬ್ಬ ಭಾರತೀಯನು ಮೂರನೇ ಬಾರಿಗೆ ಮೋದಿ ಅವರೇ ಪ್ರಧಾನಿ
ಆಗಬೇಕು ಎಂಬ ಸಂಕಲ್ಪ ಮಾಡಿದ್ದಾರೆ. ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾದ ನನಗೆ ನೀವು ಹೆಚ್ಚಿನ ಮತ ಕೊಟ್ಟು ಗೆಲ್ಲಿಸಿ, ಭಾತರದ
ಅತ್ಯುತ್ತಮ ನಾಯಕರ ಆಯ್ಕೆಯಲ್ಲಿ ಪಾಲುದಾರರಾಗಬೇಕು. ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ದಿನ ನೀವು ನಾನು ಆಯ್ಕೆ ಮಾಡಿದ ಪ್ರಧಾನಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳಬಹುದು ಎಂದರು.
ಮಾಜಿ ಶಾಸಕ ಎಚ್.ಪಿ. ರಾಜೇಶ್ ಮಾತನಾಡಿ, ಈ ಲೋಕಸಭಾ ಚುನಾವಣೆ ಭಾರತದ ದಿಕ್ಸೂಚಿ ಚುನಾವಣೆ. ದೇಶದ ಹಿತದೃಷ್ಟಿಯಿಂದ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಬೇಕಿರುವ ಹೊಣೆಗಾರಿಕೆ ನಮ್ಮ ಮೇಲಿದೆ.
ಗಾಯತ್ರಿ ಸಿದ್ದೇಶ್ವರ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ ದೆಹಲಿಗೆ ಕಳುಹಿಸಿದರೆ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ
ಪ್ರಧಾನಿಯಾಗುತ್ತಾರೆ. ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಮತ ಹಾಕಿಸಬೇಕು ಎಂದು ಕೋರಿದರು.
ಮಾಜಿ ಶಾಸಕ ಎಸ್.ವಿ. ರಾಮಚಂದ್ರ ಮಾತನಾಡಿ, “ಆಡು ಮುಟ್ಟದ ಸೊಪ್ಪಿಲ್ಲ’ ಎಂಬ ಮಾತಿನಂತೆ ಸಿದ್ದೇಶಣ್ಣ ತಲುಪದ, ನೋಡದ ಹಳ್ಳಿಗಳಲ್ಲಿಲ್ಲ. ಇಡೀ
ಕ್ಷೇತ್ರದ ಎಲ್ಲ ಹಳ್ಳಿಗಳಿಗೆ ಸಿದ್ದೇಶಣ್ಣ ಸಂಚಾರ ಮಾಡಿ ಜನ ಸಂಪಾದನೆ ಮಾಡಿದ್ದಾರೆ. ಸಿದ್ದೇಶಣ್ಣ ನಾಲ್ಕು ಬಾರಿ, ಅವರ ತಂದೆ ಜಿ. ಮಲ್ಲಿಕಾರ್ಜುನಪ್ಪ ಅವರು 2
ಬಾರಿ ಒಟ್ಟು 6 ಬಾರಿ ಸಂಸದರಾಗಿದ್ದಾರೆ. ಈಗ 7ನೇ ಬಾರಿಗೆ ಗಾಯತ್ರಿ ಸಿದ್ದೇಶ್ವರ ಅವರು ಸಂಸದರಾಗುವುದು ನಿಶ್ಚಿತ. ಅವರ ಕುಟುಂಬ ಗೆಲ್ಲುವುದಕ್ಕೆ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳೇ ಶ್ರೀರಕ್ಷೆ. ಕಾರ್ಯಕರ್ತರು, ಮೋದಿ ಅಭಿಮಾನಿಗಳು, ಹಿತೈ ಷಿಗಳು ಎಲ್ಲರೂ ಗಾಯಿತ್ರಿ ಸಿದ್ದೇಶ್ವರ್ ಅವರಿಗೆ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸಬೇಕು ಎಂದು ಕರೆ ನೀಡಿದರು.
ಬಿಜೆಪಿ ಯುವ ಮುಖಂಡರಾದ ಜಿ.ಎಸ್. ಅನಿತ್ ಕುಮಾರ್, ಬಳ್ಳಾರಿ ಸಂಸದ ಅರಸಿಕೆರೆ ದೇವೇಂದ್ರಪ್ಪ, ಅಣ್ಣಪ್ಪ, ಪಲ್ಲಾಗಟ್ಟೆ ಮಹೇಶ್, ಕೆಂಚಮನಹಳ್ಳಿ
ಮಂಜಣ್ಣ, ಬಿದರಕೆರೆ ರವಿಕುಮಾರ್, ಅರಸೀಕೆರೆ ದ್ಯಾಮೇಗೌಡ್ರು, ಇಂದಿರಾ ರಾಮಚಂದ್ರಪ್ಪ, ಸೊಕ್ಕೆ ನಾಗರಾಜ್, ಮಂಜುನಾಥ್, ಫಣಿಯಾಪುರ
ಲಿಂಗರಾಜ್, ಜಂಬನಗೌಡ ಹಾಗೂ ಜೆಡಿಎಸ್ ಪಕ್ಷದ ಮುಖಂಡರು, ಬಿಜೆಪಿ ಮಂಡಲದ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಬೂತ್ ಮಟ್ಟದ ಅಧ್ಯಕ್ಷರು,
ಗ್ರಾಮದ ಬಿಜೆಪಿ ಮುಖಂಡರು ಸೇರಿದಂತೆ ಜಗಳೂರು ವಿಧಾನ ಸಭಾ ಕ್ಷೇತ್ರದ ಮುಖಂಡರು ಇದ್ದರು.
ಬರೀ ಮಾತನಾಡೊಲ್ಲ-ಕೆಲಸ ಮಾಡಿ ತೋರಿಸುವೆ
ನಾನು ಕೇವಲ ಮಾತನಾಡುವುದಿಲ್ಲ, ಅಭಿವೃದ್ಧಿ ಕೆಲಸ ಮಾಡಿ ತೋರಿಸುತ್ತೇನೆ. ಸದಾ ನಿಮ್ಮೊಂದಿಗೆ ಇರುವ ನಿಮ್ಮೊಂದಿಗೆ ಬೆರೆಯುವ, ನಿಮಗೆ ಸುಲಭವಾಗಿ ಸಿಗುವ ನನಗೆ ಮತ ನೀಡಬೇಕು. ಇದು ಜನರಿಗೆ ಸುಲಭವಾಗಿ ಸಿಗುವವರ ಮತ್ತು ಸುಲಭವಾಗಿ ಸಿಗದೇ ಇರುವವರ ನಡುವೆ ನಡೆಯುತ್ತಿರುವ ಚುನಾವಣೆ.
ಯಾರನ್ನು ಆಯ್ಕೆ ಮಾಡಬೇಕು ಎನ್ನುವ ನಿರ್ಧಾರ ನಿಮ್ಮದಾಗಿದೆ. ಮತ ನೀಡುವ ಮುನ್ನ ಹತ್ತು ಬಾರಿ ಯೋಚಿಸಿ ಮತದಾನ ಮಾಡಿ ಎಂದು ಗಾಯಿತ್ರಿ ಸಿದ್ಧೇಶ್ವರ್ ಮನವಿ ಮಾಡಿದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.