LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Team Udayavani, Apr 15, 2024, 4:27 PM IST
ಹಾವೇರಿ: ಈ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನೊಂದಿಗೆ ಕೇಂದ್ರ ಸರ್ಕಾರ ಹಾಗೂ ನಮ್ಮ ಅವಧಿಯ ಸಾಧನೆಗಳನ್ನು ಜನರಿಗೆ ತಿಳಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಇವತ್ತು ಒಳ್ಳೆಯ ಮುಹೂರ್ತವಿದೆ. ಎರಡು ಸೆಟ್ ನಾಮಪತ್ರ ಸಲ್ಲಿಸಿದ್ದೇನೆ. ಎಪ್ರಿಲ್ 19ರಂದು ಬೃಹತ್ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸುವೆ. ಅವತ್ತು ನಮ್ಮ ನಾಯಕರಾದ ಯಡಿಯೂರಪ್ಪ, ಬೈರತಿ ಬಸವರಾಜ ಸೇರಿ ಹಲವು ನಾಯಕರು ಬರುತ್ತಾರೆ. ಇವತ್ತು ಶುಭ ಘಳಿಗೆಯಲ್ಲಿ ನಾಮಪತ್ರ ಸಲ್ಲಿಸಿರುವೆ. ಅತಿ ಹೆಚ್ಚು ಮತಗಳ ಅಂತರಗಳಲ್ಲಿ ಗೆಲ್ಲುವ ಆತ್ಮವಿಶ್ವಾಸ ಇದೆ ಎಂದು ಹೇಳಿದರು.
ಕಾಂಗ್ರೆಸ್ ನವರು ಕೇಂದ್ರದಲ್ಲಿ ಬಹುಮತ ಬರುತ್ತೇವೆ ಎಂದು ನೀಡುವ ಹೇಳಿಕೆಗಳೆಲ್ಲಾ ಹಾಸ್ಯಾಸ್ಪದ. ಬಹುಮತಕ್ಕೆ 272 ಸ್ಥಾನ ಬೇಕು. ಅಷ್ಟು ಸ್ಥಾನಗಳಿಗೆ ನಿಲ್ಲುವ ಶಕ್ತಿ ಇಲ್ಲದವರು ಊರೆಲ್ಲ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.
ಕ್ಷೇತ್ರದಲ್ಲಿ ನೀರಾವರಿ ಸಾಧನೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತುಂಗಾ ಮೇಲ್ದಂಡೆ ಯೋಜನೆಯಲ್ಲಿ ಒಂದು ಲಕ್ಷ ಎಕರೆ ನೀರಾವರಿ ಮಾಡಿರುವುದು ಸಾಮಾನ್ಯ ಮಾತಲ್ಲ. ಇದರಿಂದ ಹಾನಗಲ್, ಹಿರೆಕೆರೂರು, ರಾಣೆಬೆನ್ನೂರು ತಾಲೂಕುಗಳಲ್ಲಿ ನೀರಾವರಿಯಾಗಿದೆ. ಈ ಕೆಲಸ ಸಾಧ್ಯವಿಲ್ಲ ಎಂದು ಹೇಳಿದ್ದರು. ಅದನ್ನು ಮಾಡಿ ತೋರಿಸಿದ್ದೇನೆ. ಶಿಗ್ಗಾವಿ ಕ್ಷೇತ್ರ ಬಿಟ್ಟು ಎಂಟು ಏತ ನೀರಾವರಿ ಯೋಜನೆ ಮಾಡಿದ್ದೇನೆ ಎಂದರು.
ಈ ಚುನಾವಣೆಯಲ್ಲಿ ಬಿಜೆಪಿಯವರು ಕೇವಲ ಪ್ರಧಾನಿ ನರೇಂದ್ರ ಮೋದಿ ಹೆಸರು ಹೇಳುತ್ತಿದ್ದಾರೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಅವರು, ಇದು ಲೋಕಸಭಾ ಚುನಾವಣೆ, ರಾಷ್ಟ್ರದ ಚುನಾವಣೆ. ಮೋದಿಯವರ ಹೆಸರು ಹೇಳಲೇಬೇಕು, ಹೇಳುತ್ತೇವೆ. ಅದರ ಜೊತೆಗೆ ನಾವು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಸೇರಿಸಿ ಮತ ಕೇಳುತ್ತೇವೆ ಎಂದರು.
ಇದೇ ವೇಳೆ, ಪ್ರಧಾನಿ ಮೋದಿ ಪ್ರಚಾರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎ. 25 ಅಥವಾ 26ರ ನಂತರ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪ್ರವಾಸ ಮಾಡಲಿದ್ದು, ಎರಡು ಅಥವಾ ಮೂರು ಲೋಕಸಭೆಗೆ ಒಂದು ಕ್ಲಸ್ಟರ್ ಮಾಡಿದ್ದಾರೆ ಎಂದರು.
ನಟ ಪ್ರಕಾಶ್ ರೈ ಪ್ರಧಾನಿ ಮೋದಿ ಕುರಿತು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪ್ರಕಾಶ ರೈ ಯಾವಾಗ ಫೇಸ್ ರೀಡರ್ ಆದರು. ಮೋದಿಯವರು ವಿಶ್ವದ ನಾಯಕ ಅವರು ನೋಡುವ ದೃಷ್ಟಿಕೋನ ಹಾಗಿದೆ ಎಂದು ಹೇಳಿದರು.
ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾಜಿ ಸಚಿವ ಬಿ.ಸಿ.ಪಾಟೀಲ್, ಶಾಸಕ ಡಾ. ಚಂದ್ರು ಲಮಾಣಿ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಅರುಣ್ ಕುಮಾರ್ ಪೂಜಾರಿ, ಶಿವರಾಜ ಸಜ್ಜನ್ ಹಾಗೂ ಬಿಜೆಪಿ ಮುಖಂಡ ಶಂಕರಣ್ಣ ಮಾಂತನವರ ಇದ್ದರು.
ತಂದೆ ತಾಯಿ ಸಮಾಧಿಗೆ ನಮನ
ಬಸವರಾಜ ಬೊಮ್ಮಾಯಿಯವರು ಇಂದು ನಾಮಪತ್ರ ಸಲ್ಲಿಕೆಗೂ ಮೊದಲು ಹುಬ್ಬಳ್ಳಿಯ ರಾಯಾಪುರ ಬಳಿ ಇರುವ ಅವರ ತಂದೆ ತಾಯಿಯ ಗದ್ದುಗೆಗೆ ತೆರಳಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದುಕೊಂಡರು. ಇದೇ ಸಮಯದಲ್ಲಿ ತಮ್ಮ ಮೊಮ್ಮಗನ ಜೊತೆಗೆ ವಿಡಿಯೊ ಕಾಲ್ ಮೂಲಕ ಮಾತನಾಡಿ, ನಂತರ ನಾಮಪತ್ರ ಸಲ್ಲಿಸಲು ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.