Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಸ್ತುವಾರಿಗಳ ಸಭೆ
Team Udayavani, Apr 15, 2024, 4:05 PM IST
ಉಡುಪಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ. ಜನರ ಬದುಕನ್ನು ಕಟ್ಟುವುದರೊಂದಿಗೆ ಶಾಂತಿ, ಸಾಮರಸ್ಯದಿಂದ ಸುಭದ್ರ ಆಡಳಿತ ನೀಡಿದ ಕಾಂಗ್ರೆಸ್‌ನ ಕೈ ಹಿಡಿಯಲಿದ್ದಾರೆ.
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಅನಿವಾಸಿ ಭಾರತೀಯರ ಕುಂದುಕೊರತೆಗಳ ಪರಿಹಾರಕ್ಕಾಗಿ ಪ್ರತ್ಯೇಕ ಸಚಿವಾಲಯ ರಚಿಸಲಾಗುವುದು. ಹಾಗೆಯೇ ರಾಜ್ಯದಲ್ಲಿ ಜನತೆಗೆ ನೀಡಿದ ಜನಪರ ಯೋಜನೆಗಳಿಂದ ಮತದಾರರಲ್ಲಿ ಕೃತಜ್ಞತಾ ಭಾವ ಇದ್ದು ಅವರ ಆಶೀರ್ವಾದದಿಂದ ರಾಜ್ಯದಲ್ಲಿ 20 ಸ್ಥಾನ ಗೆಲ್ಲುವುದು ಖಚಿತ .
ಕಾಂಗ್ರೆಸ್ ಪಕ್ಷದ ಬಗ್ಗೆ ಇರುವ ಮತದಾರರ ಒಲವನ್ನು ಮತವಾಗಿ ಪರಿವರ್ತಿಸಲು ಪಕ್ಷದ ಚುನಾವಣಾ ಉಸ್ತುವಾರಿಗಳು ಬದ್ಧತೆಯಿಂದ ಶ್ರಮಿಸಬೇಕೆಂದು ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ ಹೇಳಿದರು.
ಅನ್ನ,ಆಶ್ರಯ,ಅಕ್ಷರ, ಆರೋಗ್ಯ, ಅಭಿವೃದ್ಧಿಯ ವಿಚಾರಗಳಿಗೆ ಹೆಚ್ಚಿನ ಒತ್ತುಕೊಟ್ಟು ಭವ್ಯ ಭಾರತವನ್ನು ವಿಶ್ವದ ಬಲಿಷ್ಠ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲುವಂತೆ ಮಾಡಿದ ಕೀರ್ತಿ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಸಲ್ಲಬೇಕೆಂದರು.
ಅವರು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಪಕ್ಷದ ಚುನಾವಣಾ ಉಸ್ತುವಾರಿಗಳು ,ನಗರಸಭಾ ಸದಸ್ಥರು ಹಾಗೂ ನಗರಸಭೆಗೆ ಸ್ಪರ್ಧಿಸಿದ ಪಕ್ಷದ ಮುಂದಾಳುಗಳಿಗಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು.
ಕೆ.ಪಿ.ಸಿ.ಸಿ ಉಪಾಧ್ಯಕ್ಷ ಎಂ.ಎ ಗಫೂರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಕೆ.ಪಿ.ಸಿ.ಸಿ ವೀಕ್ಷಕ ನವೀನ್ ಶೆಟ್ಟಿ, ಪಕ್ಷದ ಚುನಾವಣಾ ಉಸ್ತುವಾರಿಗಳು, ನಗರಸಭಾ ಸದಸ್ಯರು ಹಾಗೂ ಪಕ್ಷದ ವಿವಿಧ ಮುಂದಾಳುಗಳು ಭಾಗವಹಿಸಿದ್ದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸತೀಶ್ ಕೊಡವೂರು ಸ್ವಾಗತಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಮಂಚಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.