Koppal ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ
Team Udayavani, Apr 15, 2024, 11:49 PM IST
ಕೊಪ್ಪಳ: ಕೊಪ್ಪಳ ಬಿಜೆಪಿ ಟಿಕೆಟ್ ವಂಚಿತ ಸಂಸದ ಸಂಗಣ್ಣ ಕರಡಿ ಮನೆಗೆ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಸೋಮ ವಾರ ಸಂಜೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ.
ಸಂಸದರ ಜತೆ ಸವದಿ ಸ್ವಲ್ಪ ಹೊತ್ತು ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ. ಸಂಗಣ್ಣ ಕರಡಿಗೆ ಟಿಕೆಟ್ ಕೈ ತಪ್ಪಿದ ಬಳಿಕ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಹೀಗಾಗಿ ಕಾಂಗ್ರೆಸ್‌ನತ್ತ ಮುಖ ಮಾಡುತ್ತಿದ್ದಾರೆ ಎನ್ನುವ ಚರ್ಚೆ ನಡೆದಿರುವ ಬೆನ್ನಲ್ಲೇ ಸವದಿ ಭೇಟಿ ಮಹತ್ವ ಪಡೆದುಕೊಂಡಿದೆ. ಈ ಹಿಂದೆ ಸಂಗಣ್ಣ ಜೆಡಿಎಸ್‌ನಲ್ಲಿದ್ದಾಗ ಸವದಿಯೇ ಅವರನ್ನು ಬಿಜೆಪಿಗೆ ಕರೆ ತಂದಿದ್ದರು. ಈಗ ಸಂಗಣ್ಣರನ್ನು ಕಾಂಗ್ರೆಸ್‌ಗೆ ತರಲು ಸವದಿ ಪ್ರಯತ್ನಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಸಂಗಣ್ಣ ಮಾತ್ರ, ಸವದಿ ನನ್ನ ಆತ್ಮೀಯ ಸಹೋದರ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕೊಪ್ಪಳ ಬಿಜೆಪಿ ಸಂಸದ ಸಂಗಣ್ಣ ಕರಡಿ ಅವರನ್ನು ಕಾಂಗ್ರೆಸ್‌ಗೆ ಆಹ್ವಾನಿಸಿರುವುದು ನಿಜ. ಅವರು ಪಕ್ಷಕ್ಕೆ ಬರಬಹುದು.
-ರಾಘವೇಂದ್ರ ಹಿಟ್ನಾಳ್, ಕೊಪ್ಪಳ ಶಾಸಕ
ಸಂಸದ ಕರಡಿ ಸಂಗಣ್ಣ ಅವರು ಎ.16ರಂದು ಕಾಂಗ್ರೆಸ್ ಸೇರಲಿರುವ ಮಾಹಿತಿ ಇದೆ. ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಬಳಿಕ ಪ್ರತಿಕ್ರಿಯಿಸುವೆ. ಅಲ್ಲಿಯವರೆಗೂ ಏನೂ ಹೇಳುವುದಿಲ್ಲ.
-ದೊಡ್ಡನಗೌಡ ಪಾಟೀಲ್, ಶಾಸಕ, ಕುಷ್ಟಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
MUST WATCH
ಹೊಸ ಸೇರ್ಪಡೆ
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.