Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
Team Udayavani, Apr 16, 2024, 9:14 AM IST
ಮುಂಬಯಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಗುಂಡಿನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಅಪರಾಧ ವಿಭಾಗ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಸೋಮವಾರ (ಏ.15 ರಂದು) ಗುಜರಾತ್ನ ಭುಜ್ ನಲ್ಲಿ ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಮಸಿಹಿ ಮೂಲದ ವಿಕ್ಕಿ ಸಾಹಬ್ ಗುಪ್ತಾ (24) ಮತ್ತು ಸಾಗರ್ ಶ್ರೀಜೋಗೇಂದ್ರ ಪಾಲ್ (21) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಮಂಗಳವಾರ ಬೆಳಿಗ್ಗೆ ಮುಂಬೈಗೆ ಕರೆತರಲಾಗುವುದು ಎಂದು ಮೂಲಗಳು ಹೇಳಿರುವುದಾಗಿ ವರದಿಯಾಗಿದೆ.
ಏನಿದು ಘಟನೆ?:
ಭಾನುವಾರ ಮುಂಜಾನೆ 5 ಗಂಟೆ ಸುಮಾರಿಗೆ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್ಮೆಂಟ್ನ ಹೊರಗೆ ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ನಾಲ್ಕು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದರು. ಗುಂಡಿನ ದಾಳಿ ನಡೆದಾಗ ಸಲ್ಮಾನ್ ಖಾನ್ ಅವರು ಮನೆಯಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಯಾರೂ ಗಾಯಗೊಂಡಿರಲಿಲ್ಲ.
ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯಿ ಅವರು ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ಘಟನೆಯ ಹೊಣೆಯನ್ನು ಹೊತ್ತುಕೊಂಡಿರುವುದಾಗಿ ಹೇಳಿದ್ದಾರೆ.
ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ವಾಂಟೆಡ್ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಹಲವಾರು ಬೆದರಿಕೆಯನ್ನು ಹಾಕಿದ್ದಾರೆ. ಮೂಲಗಳ ಪ್ರಕಾರ ನಟನನ್ನು ಕೊಲ್ಲಲು ಬಿಷ್ಣೋಯಿ ಮತ್ತು ಬ್ರಾರ್ ತಮ್ಮ ಶೂಟರ್ಗಳನ್ನು ಮುಂಬೈಗೆ ಕಳುಹಿಸಿದ್ದರು ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ಆರಂಭಿಕ ದಿನಗಳಲ್ಲಿ ನಿರ್ಮಾಪಕರೊಬ್ಬರಿಂದ ಕಿರುಕುಳ: ಶಿಲ್ಪಾ ಶಿಂಧೆ
Mumbai: ನಟ ಸಲ್ಮಾನ್ ಖಾನ್ ಪಕ್ಕೆಲುಬಿನ ಎರಡು ಮೂಳೆಗಳು ಮುರಿತ
Urfi Javed: ಎಷ್ಟು ಜನರ ಜೊತೆ ಮಲಗಿದ್ದೀಯಾ? ಉರ್ಫಿಗೆ ಮುಜುಗರ ತಂದ ಬಾಲಕನ ಪ್ರಶ್ನೆ
Taxpayers: ಶಾರುಖ್ ಟು ಕೊಹ್ಲಿ- ಇಲ್ಲಿದೆ ಗರಿಷ್ಠ ತೆರಿಗೆ ಪಾವತಿಸಿದ ಸೆಲೆಬ್ರಿಟಿಗಳ ಪಟ್ಟಿ
Fahadh Faasil: ಬಾಲಿವುಡ್ ಗೆ ಫಾಹದ್ ಎಂಟ್ರಿ; ಖ್ಯಾತ ನಿರ್ದೇಶಕನ ಜತೆ ಸಿನಿಮಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.