Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್
Team Udayavani, Apr 16, 2024, 11:27 AM IST
ಬೆಂಗಳೂರು: ಡಾಲಿ ಧನಂಜಯ ಅಭಿನಯದ ಬಹು ನಿರೀಕ್ಷಿತ ʼಉತ್ತರಕಾಂಡʼ ಚಿತ್ರತಂಡಕ್ಕೆ ಹೊಸ ಸದಸ್ಯೆಯ ಸೇರ್ಪಡೆಯಾಗಿದೆ.
ಕೆಆರ್ಜಿ ಬ್ಯಾನರ್ ನಲ್ಲಿ ಬರುತ್ತಿರುವ ʼಉತ್ತರಕಾಂಡʼ ಸಿನಿಮಾ ತಂಡಕ್ಕೆ ಕಳೆದ ಕೆಲ ದಿನಗಳ ಹಿಂದೆ ಮೋಹಕ ತಾರೆ ರಮ್ಯಾ ಶಾಕ್ ನೀಡಿದ್ದರು. ʼಉತ್ತರಕಾಂಡʼ ಮೂಲಕ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಬಹು ಸಮಯದ ಬಳಿಕ ಬಣ್ಣದ ಲೋಕಕ್ಕೆ ನಟಿಯಾಗಿ ಕಂಬ್ಯಾಕ್ ಮಾಡುತ್ತಾರೆ ಎನ್ನಲಾಗುತ್ತಿತ್ತು. ಮುಹೂರ್ತದಲ್ಲೂ ಭಾಗಿಯಾಗಿದ್ದ ಚಿತ್ರದಿಂದ ಹಿಂದೆ ಸರಿದಿದ್ದು ಅಪಾರ ಅಭಿಮಾನಿಗಳಿಗೆ ನಿರಾಸೆಯಾಗಿದೆ.
“ಡೇಟ್ಸ್ ಇಲ್ಲದ ಕಾರಣ ನಾನು ‘ಉತ್ತರಕಾಂಡ’ ಚಿತ್ರದಲ್ಲಿ ಕೆಲಸ ಮಾಡುತ್ತಿಲ್ಲ. (ಸಿನಿಮಾ ಹಾಗೂ ರಾಜಕೀಯದ ಕೆಲಸಗಳನ್ನು ನಾನು ಸದ್ಯಕ್ಕೆ ನಿಲ್ಲಿಸಿದ್ದೇನೆ) ಚಿತ್ರತಂಡಕ್ಕೆ ಶುಭವಾಗಲಿ” ಎಂದು ಹಾರೈಸಿದ್ದರು.
ರಮ್ಯಾ ಅವರ ಬದಲಿಗೆ ಯಾರು ಬರುತ್ತಾರೆ ಎನ್ನುವ ಕುತೂಹಲವಿತ್ತು. ಇದೀಗ ಚಿತ್ರತಂಡಕ್ಕೆ ಈ ಕುತೂಹಲಕ್ಕೆ ತೆರೆ ಎಳೆದಿದೆ. ಇತ್ತೀಚೆಗೆ ʼಟೋಬಿʼ, ʼಸಪ್ತ ಸಾಗರದಾಚೆ ಎಲ್ಲೂ(ಸೈಡ್ -ಬಿ) ಸಿನಿಮಾದಲ್ಲಿ ನಟಿಸಿ ಗಮನ ಸೆಳೆದಿರುವ ಚೈತ್ರಾ ಜೆ ಆಚಾರ್ ʼಉತ್ತರಕಾಂಡʼ ತಂಡ ಸೇರಿಕೊಂಡಿದ್ದಾರೆ.
ರೋಹಿತ್ ಪದಕಿ ನಿರ್ದೇಶನದ ʼಉತ್ತರಕಾಂಡʼ ಸಿನಿಮಾದಲ್ಲಿ ಚೈತ್ರಾ ಜೆ ಆಚಾರ್ ʼಲಚ್ಚಿʼ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಾತ್ರದ ಪೋಸ್ಟರ್ ನ್ನು ಚಿತ್ರತಂಡ ರಿಲೀಸ್ ಮಾಡಿದೆ.
ರಗಡ್ ಲುಕ್ ವುಳ್ಳ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದು, ರಕ್ತದ ಕಲೆಯನ್ನು ಅವರ ಮೈ ಮೇಲಿರುವುದು ಪೋಸ್ಟರ್ ನಲ್ಲಿ ಗೋಚರವಾಗಿದೆ.
ಉತ್ತರ ಕರ್ನಾಟಕದಲ್ಲಿ ಚಿತ್ರದ ಚಿತ್ರೀಕರಣ ಆರಂಭಗೊಂಡಿದೆ ಎನ್ನಲಾಗಿದೆ.
This time it’s “ಲಚ್ಚಿ “ it is♥️🧿. ಆಟ ಶುರು ಮಾಡೋನಂತ್ ಏನಂತೀರಿ?😉
Extremely excited to be a part of this amazing team @uttarakaanda @KRG_Studios @NimmaShivanna @Dhananjayaka @RohitPadaki @Karthik1423 @yogigraj @ItsAmitTrivedi @NarenDon @AdvaithaAmbara @Ani_Anirudh1 @KRG_Connects pic.twitter.com/4akKzoFhe8— Chaithra Achar (@Chaithra_Achar_) April 16, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Kannada Cinema: ಕ್ಲೈಮ್ಯಾಕ್ಸ್ ನತ್ತ ʼಕುಲದಲ್ಲಿ ಕೀಳ್ಯಾವುದೋʼ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.