ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ


Team Udayavani, Apr 16, 2024, 4:05 PM IST

2-

ಉಡುಪಿ: ಪಕ್ಷದ ಸಂಸದರ ವಿರುದ್ಧವೇ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿಬಿಟ್ಟಿದ್ದ ಕಾರಣಕ್ಕಾಗಿ ಪೊಲೀಸ್ ಪ್ರಕರಣವನ್ನು ಎದುರಿಸಿದ್ದ ಬಿಜೆಪಿ ಮುಖಂಡರಿಂದ ಕಾಂಗ್ರೆಸ್ ನೈತಿಕತೆ ಪಾಠವನ್ನು ಕಲಿಯಬೇಕಾಗಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ಪಕ್ಷದ ಚುನಾವಣಾ ಅಭಿಯಾನ ಪ್ರಮುಖರ ಪ್ರಗತಿ ಪರಿಶೀಲನಾ ಸಭೆಯ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕಾಂಗ್ರೆಸ್ ವಿರುದ್ಧ ಮಾಡಿರುವ ಟೀಕೆಗೆ ಅವರು ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಪಕ್ಷದ ಶಿಸ್ತಿನ ಪಾಠ ಹೇಳುವ ಈ ಮೇಸ್ಟ್ರು ಕುಂದಾಪುರದಲ್ಲಿ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಭಾಗವಹಿಸಿದ್ದ ಸಾವಿರಾರು ಜನರಿದ್ದ ಸಭೆಯಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ವಿರುದ್ಧ ತನ್ನ ಬೆರಳೆಣಿಕೆಯ ಬೆಂಬಲಿಗರೊಂದಿಗೆ ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ಫ್ಲೆಕ್ಸ್, ಬ್ಯಾನರ್ ಹಿಡಿದು ಘೋಷಣೆ ಕೂಗಿ ನಂತರ ಪೋಲಿಸರಿಂದ ಹೊರ ನೂಕಿಸಿಕೊಂಡ ಘಟನೆ ಸ್ವಘೋಷಿತ ಶಿಸ್ತಿನ ಪಕ್ಷಕ್ಕೆ ಶೋಭೆಯಲ್ಲ ಎನ್ನುವುದನ್ನು ಮರೆತಂತಿದೆ. ಪಕ್ಷದಲ್ಲಿ ಇದ್ದಾಗಲೇ ಪಕ್ಷದ ಅಧಿಕೃತ ಅಭ್ಯರ್ಥಿ ಹಾಲಾಡಿಯವರ ಪರವಾಗಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳದೆ ಕಾಟಾಚಾರಕ್ಕೆ ಮಾತ್ರ ಅಕ್ಕ-ಪಕ್ಕದ ಕ್ಷೇತ್ರದ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ನಾಯಕರುಗಳೇ ಇಂದು ಪಕ್ಷ ನಿಷ್ಠೆಯ ಬಗ್ಗೆ ಬೇರೆಯವರಿಗೆ ಬೋಧನೆ ಮಾಡುತ್ತಿರುವುದು ವಿಪರ್ಯಾಸವಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೇವಲ ಒಂದು ವರ್ಷದೊಳಗೆ‌ ಸಚಿವೆ ಹೆಬ್ಬಾಳ್ಕರ್ ಅವರು ಎಷ್ಟು ಬಾರಿ ಜಿಲ್ಲೆಗೆ ಬಂದಿದ್ದಾರೆ, ಎಷ್ಟು ಸಭೆಗಳನ್ನು ನಡೆಸಿದ್ದಾರೆ ಎನ್ನುವ ಹಾಗೂ ಕಳೆದ 10 ವರ್ಷಗಳಿಂದ ಸಂಸದೆಯಾಗಿ, ಕೇಂದ್ರ ಸಚಿವೆಯಾಗಿ ಶೋಭಾ ಕರಂದ್ಲಾಜೆ ಅವರು ಎಷ್ಟು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ ಹಾಗೂ ಎಷ್ಟು ಸಭೆ ನಡೆಸಿದ್ದಾರೆ ಎನ್ನುವ ಮಾಹಿತಿಯನ್ನು ಪಡೆದುಕೊಂಡು ಸಾರ್ವಜನಿಕ ವೇದಿಕೆಗೆ ಬಿಜೆಪಿ ಅಧ್ಯಕ್ಷರು ಚರ್ಚೆಗೆ ಬರಲಿ. ಆಗ ತಿಳಿಯುತ್ತದೆ ಯಾವ ಪಕ್ಷದ ಜನಪ್ರತಿನಿಧಿಗಳ ವಿರುದ್ಧ ಮತದಾರರು ಆಕ್ರೋಶ ಹೇಗೆ ಇರುತ್ತದೆ ಎಂದು ಹೇಳಿರುವ ಕಿಣಿ , ಗಾಜಿನ ಮನೆಯಲ್ಲಿ ಕುಳಿತು ಇನ್ನೊಬ್ಬರ ಕಡೆ ಕಲ್ಲು ಎಸೆಯುವ ಪ್ರವೃತ್ತಿ ಬದಲಾಯಿಸಿಕೊಳ್ಳುವುದು ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.

ಸುಳ್ಳಿನ ಫ್ಯಾಕ್ಟರಿ ಆಗಿರುವ ಬಿಜೆಪಿ ಪಕ್ಷದ ಯಾವ ಹೇಳಿಕೆ ಹಾಗೂ ಭರವಸೆಯ ಬಗ್ಗೆ ದೇಶವಾಸಿಗಳಿಗೆ ಯಾವುದೇ ದಾಖಲೆ ಅಗತ್ಯವಿಲ್ಲ. ಬುಲೆಟ್ ಟ್ರೈನ್, ಪೆಟ್ರೋಲ್ ದರ, ನೋಟ್ ಬ್ಯಾನ್, ಬ್ಯಾಂಕ್ ಅಕೌಂಟ್, ಸ್ವೀಸ್ ಬ್ಯಾಂಕ್ ಮುಂತಾದ ವಿಷಯಗಳ ಸುಳ್ಳಿನ ಕಂತೆಗಳೇ ಜನರ ಮನಸ್ಸಿನಲ್ಲಿ ದಾಖಲೆಗಳಾಗಿದೆ ಎನ್ನುವುದನ್ನು ಅಧ್ಯಕ್ಷರು ಗಮನಿಸಲಿ.

ಜನಪ್ರತಿನಿಧಿಗಳಾಗಿದ್ದಾಗ ಹಾಗೂ ಅಧಿಕಾರದಲ್ಲಿದ್ದಾಗ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡದೆ ಇದ್ದವರಿಗೆ ಮಾತ್ರ ಬೇರೆಯವರ ಹೆಸರಿನಲ್ಲಿ ಮತ ಕೇಳಬೇಕಾದ ಅನಿವಾರ್ಯತೆ ಬರುತ್ತದೆ. ಜಯಪ್ರಕಾಶ್ ಹೆಗ್ಡೆ ಅವರಿಗೆ ಈ ಅನಿವಾರ್ಯತೆ ಇಲ್ಲ. ಶಾಸಕ, ಸಚಿವ, ಸಂಸದ ಹಾಗೂ ಆಯೋಗದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅವರು ಮಾಡಿರುವ ಕೆಲಸಗಳು ಸಾಕಷ್ಟು ಇರೋದರಿಂದ ಈ ನೆಲೆಯಲ್ಲಿ ಮತದಾರರ ಬಳಿ ಹೋಗುತ್ತಿದ್ದಾರೆ. ಇದರಲ್ಲಿ ಏನು ತಪ್ಪಿದೆ ಎಂದು ಪ್ರಶ್ನಿಸಿರುವ ಅವರು ಬೇರೆಯವರನ್ನು ಕಾಮಾಲೆ ಕಣ್ಣಿನಿಂದ ನೋಡುವುದನ್ನು ಮೊದಲು ಬದಲಾಯಿಸಿಕೊಳ್ಳಲಿ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.