Bigg Boss OTT ಸೀಸನ್ -3 ಅನೌನ್ಸ್: ಈ ಬಾರಿ ಮತ್ತೆ ಸಲ್ಮಾನ್ ಖಾನ್ ನಿರೂಪಣೆ
Team Udayavani, Apr 16, 2024, 4:54 PM IST
ಮುಂಬಯಿ: ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕಾರ್ಯಕ್ರಮದ ಓಟಿಟಿ ವರ್ಸನ್ ಆರಂಭವಾಗುತ್ತದೆ ಎನ್ನುವ ಮಾತುಗಳು ಕಳೆದ ಕೆಲ ದಿನಗಳಿಂದ ಹರಿದಾಡುತ್ತಿದೆ. ಇದೀಗ ಈ ಬಗ್ಗೆ ಹೊಸ ಅಪ್ಡೇಟ್ ವೊಂದು ಹೊರಬಿದ್ದಿದೆ.
ಹಿಂದಿ ಬಿಗ್ ಬಾಸ್ ಓಟಿಟಿ ಸೀಸನ್ -3 ಆರಂಭಗೊಳ್ಳುವುದು ಖಚಿತವಾಗಿದೆ. ಆಯೋಜಕರು ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತವಾಗಿ ಬಿಗ್ ಬಾಸ್ ಓಟಿಟಿ -3 ಆರಂಭಗೊಳ್ಳುವ ಬಗ್ಗೆ ಹೇಳಿದೆ.
“ನೀವು ಬಿಗ್ ಬಾಸ್ ಓಟಿಟಿಯಲ್ಲಿ ಯಾರನ್ನು ನೋಡಲು ಬಯಸುತ್ತೀರಿ” ಎಂದು ಪ್ರಶ್ನೆಯೊಂದನ್ನು ಕೇಳಲಾಗಿದೆ. ಇದಕ್ಕೆ ಸಾವಿರಾರು ಬಳಕೆದಾರರು ಕಮೆಂಟ್ ಮಾಡಿದ್ದಾರೆ. ಬಹುತೇಕರು ರೋಡೀಸ್ ಖ್ಯಾತಿಯ ಸಿವೆಟ್ ತೋಮರ್ ಹಾಗೂ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕಾಮಿರಾ ಅವರ ಹೆಸರನ್ನು ಕಮೆಂಟ್ ಮಾಡಿದ್ದಾರೆ.
ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಗುಂಡಿನ ದಾಳಿ ನಡೆದ ಬಳಿಕ ಈ ಬಿಗ್ ಬಾಸ್ ಓಟಿಟಿ -3 ಪೋಸ್ಟರ್ ರಿಲೀಸ್ ಆಗಿದ್ದು, ಕಾರ್ಯಕ್ರಮವನ್ನು ಸಲ್ಮಾನ್ ಖಾನ್ ಅವರೇ ನಡೆಸಿಕೊಳ್ಳಲಿದ್ದಾರೆ ಎನ್ನವುದು ಬಹುತೇಕ ಅಧಿಕೃತವಾಗಿದೆ.
ಬಿಗ್ ಬಾಸ್ ಓಟಿಟಿಯ ಮೊದಲ ಸೀಸನ್ ನ್ನು ಕರಣ್ ಜೋಹರ್ ನಡೆಸಿಕೊಟ್ಟಿದ್ದರು. ಇದರಲ್ಲಿ ದಿವ್ಯಾ ಅಗರ್ವಾಲ್ ವಿಜೇತರಾಗಿ ಹೊರಹೊಮ್ಮಿದ್ದರು. ಓಟಿಟಿಯ ಎರಡನೇ ಸೀಸನ್ ನ್ನು ಸಲ್ಮಾನ್ ಖಾನ್ ನಡೆಸಿಕೊಟ್ಟಿದ್ದರು. ಈ ಕಾರ್ಯಕ್ರಮದಲ್ಲಿ ಮುನಾವರ್ ಫಾರೂಕಿ ವಿಜೇತರಾಗಿದ್ದರು.
ಈ ಬಾರಿಯ ಓಟಿಟಿ ಸೀಸನ್ ನಲ್ಲಿ ಸ್ಪರ್ಧಿಗಳಾಗಿ ಅನೇಕರ ಹೆಸರು ಕೇಳಿ ಬರುತ್ತಿದೆ. ನಟಿ ಅಂಕಿತಾ ಲೋಖಂಡೆ ಅವರ ಪತಿ ವಿಕ್ಕಿ ಜೈನ್ ಅವರು ಕೂಡ ಸ್ಪರ್ಧಿಯಾಗಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಇನ್ನು ಮುನಾವರ್ ಫಾರೂಕಿ ಅವರ ಆಪ್ತ ಸ್ನೇಹಿತ ಕೂಡ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ ಆದರೆ ಇದು ಅಧಿಕೃತವಾಗಿಲ್ಲ.
ಇನ್ನು ಕಾರ್ಯಕ್ರಮ ಯಾವಾಗ ಆರಂಭಗೊಳ್ಳಲಿದೆ ಎನ್ನುವ ಬಗ್ಗೆ ಮಾಹಿತಿ ಇನ್ನು ಹೊರಬಿದ್ದಿಲ್ಲ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು
BBK11: ಚೈತ್ರಾಳನ್ನು ದೂಡಿದ ರಜತ್.. ಮೈ ಮುಟ್ಟಿದ್ದಕ್ಕೆ ಫೈಯರ್ ಬ್ರ್ಯಾಂಡ್ ಗರಂ
ಸಾಕಿದ ನಾಯಿಗಾಗಿ ಬಾಯ್ ಫ್ರೆಂಡ್ ಜತೆ ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.