Lok Sabha Election: ಅಮೇಥಿಯಿಂದ ಚುನಾವಣೆಗೆ ಸ್ಪರ್ಧಿಸುತ್ತಾರಾ ರಾಹುಲ್? ಹೇಳಿದ್ದೇನು
Team Udayavani, Apr 17, 2024, 11:45 AM IST
ನವದೆಹಲಿ: ಬಿಜೆಪಿ ನಾಯಕಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ಯುಪಿಯ ಅಮೇಥಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಬುಧವಾರ ಈ ಕುರಿತು ಮಾಹಿತಿ ನೀಡಿದ ಅವರು ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದನ್ನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡ್ ಮತ್ತು ಯುಪಿಯ ಅಮೇಥಿಯಿಂದ ಸ್ಪರ್ಧಿಸಿದ್ದರು, ಆದರೆ ಅವರು ಸ್ಮೃತಿ ಇರಾನಿ ವಿರುದ್ಧ ಸೋಲು ಕಂಡಿದ್ದರು. ಆದರೆ ಈ ಬಾರಿ ರಾಹುಲ್ ಗಾಂಧಿ ವಯನಾಡ್ ನಿಂದ ಸ್ಪರ್ಧಿಸುವುದಾಗಿ ಹೇಳಿದ್ದರು ಅದರಂತೆ ಈ ಬಾರಿಯೂ ಕಾಂಗ್ರೆಸ್ ವಯನಾಡಿನಿಂದ ರಾಹುಲ್ ಗಾಂಧಿ ಅವರನ್ನು ಕಣಕ್ಕಿಳಿಸಿದೆ, ಆದರೆ ಇಲ್ಲಿಯವರೆಗೆ ಅಮೇಥಿಯಲ್ಲಿ ಕಾಂಗ್ರೆಸ್ ಯಾವ ಅಭ್ಯರ್ಥಿಯನ್ನೂ ಕಣಕ್ಕೆ ಇಳಿಸದೆ ಗೌಪ್ಯತೆ ಮೆರೆದಿದೆ.
ವಾಸ್ತವವಾಗಿ, 2019 ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರ ಸೋಲಿನ ಮೊದಲು ಅಮೇಥಿ ಕ್ಷೇತ್ರವನ್ನು ಕಾಂಗ್ರೆಸ್ ಭದ್ರಕೋಟೆ ಎಂದು ಪರಿಗಣಿಸಲಾಗಿತ್ತು. ಏಕೆಂದರೆ 2004, 2009 ಮತ್ತು 2014ರಲ್ಲಿ ಈ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಗೆದ್ದಿದ್ದರು.
ರಾಯ್ ಬರೇಲಿ ಮತ್ತು ಅಮೇಥಿಯಿಂದ ಯಾರು ಸ್ಪರ್ಧಿಸಲಿದ್ದಾರೆ?
ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಅಡಿಯಲ್ಲಿ, ಯುಪಿಯ 80 ಸ್ಥಾನಗಳಲ್ಲಿ ಕಾಂಗ್ರೆಸ್‌ಗೆ 17 ಸ್ಥಾನಗಳನ್ನು ನೀಡಲಾಗಿದೆ. ಇದರಲ್ಲಿ ರಾಯ್ ಬರೇಲಿ ಮತ್ತು ಅಮೇಥಿ ಸ್ಥಾನಗಳನ್ನು ಸಹ ಹೊಂದಿದೆ, ಆದರೆ ಕಾಂಗ್ರೆಸ್ ಈ ಎರಡೂ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳಿಗೆ ಹೆಸರು ಘೋಷಣೆ ಮಾಡಲಿಲ್ಲ. ಮತ್ತೊಂದೆಡೆ, ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿಗೆ ಕಾಂಗ್ರೆಸ್ ಟಿಕೆಟ್ ನೀಡಬಹುದು ಎಂಬ ಊಹಾಪೋಹಗಳು ರಾಜಕೀಯ ವಲಯಗಳಲ್ಲಿ ಹರಿದಾಡುತ್ತಿದೆ. ಹಾಗೆಯೇ ರಾಹುಲ್ ಗಾಂಧಿ ಅವರನ್ನು ಅಮೇಥಿಯಿಂದ ಕಣಕ್ಕಿಳಿಸುವ ಯೋಜನೆ ನಡೆಯುತ್ತಿದೆ ಎಂದು ಊಹಾಪೋಹಗಳು ಹರಿದಾಡುತ್ತಿವೆ ಏನೇ ಆದರೂ ಇದರ ಸ್ಪಷ್ಟ ಚಿತ್ರಣ ಇನ್ನಷ್ಟೇ ಗೊತ್ತಾಗಬೇಕಿದೆ.
ಇದನ್ನೂ ಓದಿ: Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.