![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Apr 17, 2024, 1:00 PM IST
ಶಿವಮೊಗ್ಗ: ಈಶ್ವರಪ್ಪ ಅವರು ಹಿರಿಯ ನಾಯಕರಿದ್ದಾರೆ. ಅವರು ಏನೇ ಹೇಳಿದರೂ ಅದು ನನಗೆ ಆಶೀರ್ವಾದ ಇದ್ದಂಗೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದರಿಗೆ ಭಯ ಉಂಟಾಗಿದೆ ಎಂಬ ಈಶ್ವರಪ್ಪರ ಹೇಳಿಕೆ ಕುರಿತಾಗಿ ಈ ಪ್ರತಿಕ್ರಿಯೆ ನೀಡಿದರು. ದೊಡ್ಡವರ ಬಗ್ಗೆ ದೊಡ್ಡವರು ಮಾತನಾಡುತ್ತಾರೆ. ಹಿರಿಯರಾದ ಈಶ್ವರಪ್ಪ ಏನು ಹೇಳಿದರೂ ಅದನ್ನು ನಾನು ಹಾರೈಕೆ ಎಂದುಕೊಳ್ಳುವೆ. ಚುನಾವಣೆ ಎಂದ ಮೇಲೆ ಭಯ- ಭಕ್ತಿ ಎಲ್ಲವೂ ಇದ್ದೇ ಇರುತ್ತದೆ. ಅವುಗಳನ್ನಿಟ್ಟುಕೊಂಡೇ ನಾವು ಚುನಾವಣೆ ನಡೆಸುತ್ತೇವೆ ಎಂದರು.
ಶಿವಮೊಗ್ಗ ಜಿಲ್ಲೆಯ ಶರಾವತಿ, ಕಾರ್ಖಾನೆ ಮುಚ್ಚಿರುವುದು, ಅರಣ್ಯ ಸಂಬಂಧಿ ಸಮಸ್ಯೆಗಳಿಗೆ ಕಾಂಗ್ರೆಸ್ ಮತ್ತು ಸ್ಥಳೀಯ ನಾಯಕರೇ ಕಾರಣ ಆಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ಬಿಜೆಪಿಗೆ ಕೇಳಿದ ಎಲ್ಲಾ ಪ್ರಶ್ನೆಗಳನ್ನು ಕಾಂಗ್ರೆಸ್ ನಾಯಕರಿಗೇ ಕೇಳಿಕೊಳ್ಳಬೇಕು. ಇಲ್ಲಿನ ಸಮಸ್ಯೆಗಳಿಗೆ ಮೂಲ ಕಾಂಗ್ರೆಸ್ ಆಗಿದೆ ಎಂದು ಅವರು ಹೇಳಿದರು.
ನಾಮಪತ್ರ ಸಲ್ಲಿಕೆಗೆ ಎಚ್‌ಡಿಕೆ: ಏ.18 ರಂದು ಬೆಳಗ್ಗೆ 11.30ಕ್ಕೆ ನಾಮಪತ್ರ ಸಲ್ಲಿಸುವೆ. ರಾಮಣ್ಣ ಶ್ರೇಷ್ಠಿ ಪಾರ್ಕಿನಿಂದ ಮೆರವಣಿಗೆ ಹೊರಟು ನಂತರ ನಾಮಪತ್ರ ಸಲ್ಲಿಸಲಾಗುವುದು. ಅಂದು ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಲಿದ್ದಾರೆ. ಅಂದಿನಿಂದ ಅಧಿಕೃತವಾಗಿ ಚುನಾವಣೆ ಕಣ ರಂಗೇರಲಿದೆ. ನಮ್ಮ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಕೆಲಸ ಮಾಡಲಿದ್ದಾರೆ. ನಮ್ಮ ಪಕ್ಷಕ್ಕೆ ಬೂತ್ ಮಟ್ಟದ ಅಧ್ಯಕ್ಷರು, ಕಾರ್ಯದರ್ಶಿಗಳೇ ಸ್ಟಾರ್ ಕ್ಯಾಂಪೇನರ್‌ಗಳಾಗಿದ್ದಾರೆ. ಅವರೇ ನಮಗೆ ವಿಶ್ವಾಸ ಎಂದು ರಾಘವೇಂದ್ರ ಹೇಳಿದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.