Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Team Udayavani, Apr 18, 2024, 4:42 PM IST
ಬೆಂಗಳೂರು: ಕಲಬುರಗಿಯಲ್ಲಿ 39 ಕೋಟಿ ವೆಚ್ಚದಲ್ಲಿ ಅಗ್ರಿಕಲ್ಚರ್ ಹಬ್ ಮಾಡುವುದಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ತಿಳಿಸುವ ಮೂಲಕ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆಯವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ನಿಯೋಗ ಒತ್ತಾಯಿಸಿದೆ. ಈ ಕುರಿತು ಇಂದು ನಿಯೋಗವು ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಭೇಟಿ ನೀಡಿ ದೂರು ನೀಡಿದೆ.
ಮತದಾರರಿಗೆ ಬೆದರಿಕೆ ಹಾಕಿ ಕಾಂಗ್ರೆಸ್ ಅಭ್ಯರ್ಥಿಗೆ ಮತದಾನ ಮಾಡುವಂತೆ ಹೇಳುತ್ತಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಇನ್ನೊಂದು ದೂರು ಕೊಡಲಾಗಿದೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಕಾಂಗ್ರೆಸ್ ನ ಸ್ಟಾರ್ ಪ್ರಚಾರಕ ಪಟ್ಟಿಯಿಂದ ಅವರ ಹೆಸರನ್ನು ತೆಗೆಯುವಂತೆ ಸೂಚಿಸಲು ಆಗ್ರಹಿಸಲಾಯಿತು.
ಕುಣಿಗಲ್ ತಾಲ್ಲೂಕಿನ ಚಿಕ್ಕಅರ್ಜೇನಹಳ್ಳಿ ಗ್ರಾಮದ ಪ್ರೇಮ್ ಕುಮಾರ್ ತೋಟಕ್ಕೆ ರಾಜಕೀಯ ವೈಷಮ್ಯದ ಕಾರಣಕ್ಕೆ ಬೆಂಕಿ ಹಚ್ಚಲಾಗಿದೆ. ಈ ಘಟನೆಗೆ ಕಾರಣಕರ್ತರಾದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ನೊಂದಿರುವ ಪ್ರೇಮ್ ಕುಮಾರ್ ಅವರಿಗೆ ಭದ್ರತೆ ಕೊಡಬೇಕು. ಸುಳ್ಳು ಹೇಳಿಕೆಗೆ ಸಹಿ ಹಾಕಿಸಿಕೊಂಡ ಪೊಲೀಸ್ ಅಧಿಕಾರಿಗಳು, ಪೊಲೀಸರನ್ನು ಅಮಾನತುಪಡಿಸಲು ಒತ್ತಾಯಿಸಿ ದೂರು ಕೊಡಲಾಯಿತು.
ಕುಣಿಗಲ್ ವಿಧಾನಸಭಾ ಕ್ಷೇತ್ರದ ಎಲ್ಲ ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಪರಿಗಣಿಸಬೇಕು. ಬೆಂಗಳೂರು ಗ್ರಾಮಾಂತರ ಮತ ಕ್ಷೇತ್ರಕ್ಕೆ ಅರೆ ಸೇನಾಪಡೆಯನ್ನು ನಿಯೋಜಿಸಬೇಕು ಎಂದು ಒತ್ತಾಯಿಸಲಾಯಿತು.
ಮನವಿ ಸಲ್ಲಿಸುವ ನಿಯೋಗದಲ್ಲಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥನಾರಾಯಣ್, ರಾಜ್ಯ ವಕ್ತಾರ ಮೋಹನ್ ವಿಶ್ವ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್, ಸದಸ್ಯ ಯಶವಂತ್ ಮತ್ತು ಪಕ್ಷದ ಪ್ರಮುಖರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.