Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ
Team Udayavani, Apr 18, 2024, 11:18 PM IST
ಜೈಪುರ: ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಮೇಣದ ಪ್ರತಿಮೆಯನ್ನು ಜೈಪುರದ ವ್ಯಾಕ್ಸ್ ಮ್ಯೂಸಿಯಂನಲ್ಲಿ ಅನಾ ವರಣ ಗೊಳಿಸಲಾಯಿತು. ಗುರುವಾರ ವಿಶ್ವ ಪರಂಪರೆಯ ದಿನವಾಗಿದ್ದು ಈ ಹಿನ್ನೆಲೆಯಲ್ಲಿ ಕೊಹ್ಲಿ ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ.
ಕಳೆದ ಒಂದು ವರ್ಷದಿಂದ ಕೊಹ್ಲಿ ಅವರ ಪ್ರತಿಮೆಯನ್ನು ಮಾಡಲು ಇಲ್ಲಿಗೆ ಬರುತ್ತಿರುವ ಪ್ರವಾಸಿಗರು ಅದರಲ್ಲಿಯೂ ವಿಶೇಷವಾಗಿ ಮಕ್ಕಳು ಮತ್ತು ಯುವಕರು ಭಾರೀ ಬೇಡಿಕೆ ಇಟ್ಟಿದ್ದರು ಎಂದು ಮ್ಯೂಸಿಯಂನ ಸಂಸ್ಥಾಪಕ ನಿರ್ದೇಶಕ ಅನೂಪ್ ಶ್ರೀವಾಸ್ತವ ಹೇಳಿದ್ದಾರೆ. ನಹರ್‌ಗಢ ಕೋಟೆ ಆವರಣದಲ್ಲಿರುವ ಮ್ಯೂಸಿಯಂಯಲ್ಲಿ ಈಗಾಗಲೇ ಕ್ರಿಕೆಟಿಗರಾದ ಸಚಿನ್ ತೆಂಡುಲ್ಕರ್ ಮತ್ತು ಎಂ.ಎಸ್. ಧೋನಿ ಅವರ ಸಹಿತ 44 ಮಂದಿಯ ಮೇಣದ ಪ್ರತಿಮೆಗಳಿವೆ. 35 ಕೆ.ಜಿ. ತೂಕದ ಕೊಹ್ಲಿ ಅವರ ಪ್ರತಿಮೆಯನ್ನು ಸುಮಾರು ಎರಡು ತಿಂಗಳಲ್ಲಿ ಕೆತ್ತಲಾಗಿದೆ.
ಈ ಮ್ಯೂಸಿಯಂನಲ್ಲಿ ಮಹಾತ್ಮಾ ಗಾಂಧಿ, ಜವಾಹರ್‌ಲಾರ್ ನೆಹರೂ, ಎಪಿಜೆ ಅಬ್ದುಲ್ ಕಲಾಂ, ಸುಭಾಷ್‌ಚಂದ್ರ ಬೋಸ್, ಭಗತ್ ಸಿಂಗ್, ಕಲ್ಪನಾ ಚಾವ್ಲಾ, ಅಮಿತಾಭ್ ಬಚ್ಚನ್ ಮತ್ತು ಮದರ್ ತೆರೇಸಾ ಅವರ ಪ್ರತಿಮೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Syed Modi International: ಫೇವರಿಟ್ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ
Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ
ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.