Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Team Udayavani, Apr 19, 2024, 1:03 AM IST
ದಾವಣಗೆರೆ: ಯಡಿಯೂರಪ್ಪ ಬಳಿಕ ರಾಜ್ಯದ ಮುಖ್ಯ ಮಂತ್ರಿ ಆಗುವ ಎಲ್ಲ ಅರ್ಹತೆ ಗಳಿದ್ದರೂ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಅವಕಾಶ ವಂಚಿಸಲಾಯಿತು. ಪಂಚಮಸಾಲಿ ಸಮು ದಾಯದವರೆಂಬ ಕಾರಣಕ್ಕಾ ಗಿಯೇ ಅವರಿಗೆ ಅವಕಾಶ ನೀಡದೆ ಮಲತಾಯಿ ಧೋರಣೆ ತೋರಲಾ ಯಿತು ಎಂದು ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಆರೋಪಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಲಿಖಿತ ಹೇಳಿಕೆ ನೀಡಿರುವ ಅವರು, ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯವಾಗಿದೆ ಎನ್ನುವ ತಮ್ಮ ಧ್ವನಿಯ ಹಿಂದೆ ಯತ್ನಾಳ್ ಅವರೂ ಇದ್ದಾರೆ. ಯತ್ನಾಳ್ ನಮ್ಮ ಸಮುದಾಯದ ಮತ್ತು ಬಿಜೆಪಿಯ ಹಿರಿಯ ನಾಯಕರು. ಅಟಲ್ ಬಿಹಾರಿ ವಾಜಪೇಯಿ ಜತೆ ಸಂಪುಟ ಸಚಿವರಾಗಿದ್ದವರು. ಇಪ್ಪತ್ತು ವರ್ಷಗಳ ಹಿಂದೆಯೇ ಕೇಂದ್ರ ನಾಯಕರಾಗಿದ್ದವರು. ಇಂದು ಅವರು ತಾಲೂಕು ಮಟ್ಟದ ನಾಯಕರಾಗಿರುವುದು ನೋವಿನ ಸಂಗತಿ ಎಂದರು.
ಯತ್ನಾಳ್ ಟೀಕೆ ಮುಂದುವರಿಸಲಿ
ಬಾಗಲಕೋಟೆಯಲ್ಲಿ ಲಡ್ಡು ಮುತ್ಯಾ ಎಂಬ ಮಹಾನ್ ಸಂತರಿದ್ದರು. ಅವರ ವಿಶೇಷತೆಯೆಂದರೆ ಅವರು ಯಾರಿಗೆಲ್ಲ ಬಯ್ಯುತ್ತಿದ್ದರೋ, ಹೊಡೆಯುತ್ತಿದ್ದರೋ ಅವರಿಗೆಲ್ಲ ಒಳ್ಳೆಯದೇ ಆಗುತ್ತಿತ್ತು. ಅದೇ ರೀತಿ ಯತ್ನಾಳ್ ಮುತ್ಯಾ ಅವರು ಯಾರಿಗೆಲ್ಲ ಟೀಕೆ ಟಿಪ್ಪಣಿ ಮಾಡಿದ್ದಾರೋ ಅವರೆಲ್ಲರಿಗೂ ಒಳ್ಳೆಯದೇ ಆಗಿದೆ ಎಂದು ವಚನಾನಂದ ಶ್ರೀಗಳು ತಿಳಿಸಿದ್ದಾರೆ.
ಯಡಿಯೂರಪ್ಪ, ವಿಜಯೇಂದ್ರ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷವನ್ನು ಯತ್ನಾಳ್ ಹಿಗ್ಗಾಮುಗ್ಗಾ ಟೀಕಿಸಿದ್ದಾರೆ. ಎಲ್ಲರಿಗೂ ಒಳ್ಳೆಯ ಸ್ಥಾನಮಾನ ದೊರಕಿದೆ. ಆದ್ದರಿಂದ ಯತ್ನಾಳ್ ಇನ್ನೂ ಹೆಚ್ಚೆಚ್ಚು ಟೀಕೆ ಮಾಡಬೇಕು. ಅದರಿಂದ ನಮ್ಮ ಪೀಠ, ಸಮುದಾಯಕ್ಕೆ ಒಳ್ಳೆಯದಾಗುತ್ತದೆ ಎಂಬ ಭಾವನೆ ನಮ್ಮದಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ
Nyamathi: ಎಸ್‌ಬಿಐ ಬ್ಯಾಂಕ್ ನಿಂದ 12.95 ಕೋಟಿ ರೂ ಮೌಲ್ಯದ ಚಿನ್ನ ಕಳ್ಳತನ
Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್: ಮಹಾನಗರ ಪಾಲಿಕೆಯ ಹೊಸ ಕ್ರಮ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.