O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Team Udayavani, Apr 19, 2024, 11:10 AM IST
ಪಿ.ಆರ್.ಕೆ ಬ್ಯಾನರ್‌ನಡಿ ನಿರ್ಮಾಣವಾಗಿರುವ “ಓ2′ ಚಿತ್ರ ತೆರೆಗೆ ಬರಲು ಸಿದ್ಧವಾಗಿದ್ದು, ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇದು ಪುನೀತ್ ರಾಜಕುಮಾರ್ ಅವರು ಕೇಳಿ ಮೆಚ್ಚಿಕೊಂಡ ಕೊನೆಯ ಸಿನಿಮಾ ಕಥೆ.
ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕದ್ವಯರಾದ ರಾಘವ್ ನಾಯಕ್ ಹಾಗೂ ಪ್ರಶಾಂತ್, “ಮಾಯಾಬಜಾರ್ ಚಿತ್ರದ ರಾಧಾಕೃಷ್ಣ ಅವರ ಮೂಲಕ ನಮಗೆ ಪುನೀತ್ ರಾಜಕುಮಾರ್ ಅವರ ಪರಿಚಯವಾಯಿತು. ಈ ಚಿತ್ರದ ಕಥೆ ಕೇಳಿದ ಪುನೀತ್ ರಾಜಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜಕುಮಾರ್ ಅವರು ನಿರ್ಮಾಣಕ್ಕೆ ಮುಂದಾದರು. ಓ2 ಪ್ರಮುಖವಾಗಿ ಮೆಡಿಕಲ್ ಕುರಿತಾದ ಸಿನಿಮಾ. ಹೃದಯ ಸ್ತಂಭನವಾಗಿ ಸಾವಿನಂಚಿಗೆ ತಲುಪಿದ ವ್ಯಕ್ತಿಯನ್ನು ಓ2 ಡ್ರಗ್ ಮೂಲಕ ಬದುಕಿಸಬಹುದು. ಆ ಹೊಸ ಆವಿಷ್ಕಾರವನ್ನು ನಮ್ಮ ಚಿತ್ರದಲ್ಲಿ ನಾಯಕಿ ಶ್ರದ್ಧಾ (ಆಶಿಕಾ ರಂಗನಾಥ್) ಮಾಡುತ್ತಾರೆ. ಓ2 ಡ್ರಗ್ ಕುರಿತು ಸಂಶೋಧನೆ ನಡೆಸುವಾಗ ಆಕೆ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಾರೆ. ಇದಷ್ಟೇ ಅಲ್ಲದೆ ನಮ್ಮ ಚಿತ್ರದಲ್ಲಿ ಪ್ರೀತಿ, ಅನಿರೀಕ್ಷಿತ ತಿರುವುಗಳು ಹಾಗೂ ಮನರಂಜನೆ ಕೂಡ ಇದೆ. ಕನ್ನಡದಲ್ಲಿ ಈ ರೀತಿಯ ಕಥೆ ವಿರಳ ಎನ್ನಬಹುದು’ ಎಂದರು.
“ನಮ್ಮ ಇಡೀ ಕುಟುಂಬದವರು ರಾಜಕುಮಾರ್ ಅವರ ಕುಟುಂಬದ ಅಪ್ಪಟ ಅಭಿಮಾನಿಗಳು. ಅಂತಹುದರಲ್ಲಿ ನನಗೆ ಪುನೀತ್ ರಾಜಕುಮಾರ್‌ಅವರ ನಿರ್ಮಾಣದ ಚಿತ್ರದಲ್ಲಿ ನಟಿಸುವ ಆವಕಾಶ ಸಿಕ್ಕಾಗ ತುಂಬಾ ಸಂತೋಷವಾಯಿತು. ನನ್ನದು ಈ ಚಿತ್ರದಲ್ಲಿ ಎನ್‌ಆರ್‌ಐ ವೈದ್ಯನ ಪಾತ್ರ’ ಎಂದು ನಾಯಕ ಪ್ರವೀಣ್ ತೇಜ್ ತಿಳಿಸಿದರು.
ನಾಯಕಿ ಆಶಿಕಾ ರಂಗನಾಥ್ ಮಾತನಾಡಿ, “ಶ್ರದ್ದಾ ನನ್ನ ಪಾತ್ರದ ಹೆಸರು. ನಾನು ಕೂಡ ಈ ಚಿತ್ರದಲ್ಲಿ ವೈದ್ಯೆ. ಪಿ.ಆರ್.ಕೆ ಪ್ರೊಡಕ್ಷನ್ಸ್ ಸಂಸ್ಥೆಯ ಚಿತ್ರದಲ್ಲಿ ನಟಿಸಿರುವುದು ಖುಷಿಯಾಗಿದೆ’ ಎನ್ನುತ್ತಾರೆ ನಟಿ ಆಶಿಕಾ ರಂಗನಾಥ್.
ಚಿತ್ರಕ್ಕೆ ನವೀನ್ ಕುಮಾರ್ ಅವರ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನವಿದೆ. ಆಶಿಕಾ ರಂಗನಾಥ್, ಪ್ರವೀಣ್ ತೇಜ್, ರಾಘವ್ ನಾಯಕ್, ಸಿರಿ ರವಿಕುಮಾರ್, ಪ್ರಕಾಶ್ ಬೆಳವಾಡಿ, ಪುನೀತ್ ಬಾ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.