High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Team Udayavani, Apr 19, 2024, 11:03 PM IST
ಬೆಂಗಳೂರು: ರಾಜ್ಯದಲ್ಲಿ ಜಾರಿಗೆ ತಂದಿರುವ ಶಕ್ತಿ ಯೋಜನೆಯಿಂದ ಹಳ್ಳಿ ತಾಯಂದಿರು ದಾರಿ ತಪ್ಪುತ್ತಿದ್ದಾರೆ ಎಂಬ ಹೇಳಿಕೆ ವಿಚಾರವಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ರಾಜ್ಯ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ ನೀಡಿದೆ.
ಮಹಿಳಾ ಆಯೋಗದ ನೋಟಿಸ್ಗೆ ತಡೆ ನೀಡುವಂತೆ ಕೋರಿ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯು ನ್ಯಾ| ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು. ಸ್ವಲ್ಪ ಹೊತ್ತು ವಾದ ಆಲಿಸಿದ ನ್ಯಾಯಪೀಠ, ಮಹಿಳಾ ಆಯೋಗವು ಕಾರಣ ಕೇಳಿ ನೋಟಿಸ್ ನೀಡಿಲ್ಲ, ಸಮನ್ಸ್ ಕೊಟ್ಟಿಲ್ಲ. ನೇರವಾಗಿ ಸ್ಪಷ್ಟೀಕರಣ ಕೊಡಿ, ಇಲ್ಲವಾದರೆ ಆಯೋಗದ ಮುಂದೆ ಹಾಜ ರಾಗುವಂತೆ ನೋಟಿಸ್ ನೀಡಲಾಗಿದೆ.
ಮಹಿಳಾ ಆಯೋಗದ ಈ ಕ್ರಮ ವ್ಯಾಪ್ತಿ ಮೀರಿದಂತಿದೆ ಎಂದು ಅಭಿಪ್ರಾಯಪಟ್ಟಿತು. ಸ್ಪಷ್ಟನೆ ನೀಡಲು ಸೂಚಿಸಿ ಜಾರಿಗೊಳಿಸಿದ್ದ ನೋಟಿಸ್ಗೆ ತಡೆ ನೀಡಿದ ನ್ಯಾಯಪೀಠ, ಅರ್ಜಿ ಸಂಬಂಧ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ| ನಾಗಲಕ್ಷ್ಮೀ ಚೌಧರಿ ಅವರಿಗೆ ನೋಟಿಸ್ ಜಾರಿಗೊಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.