Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ


Team Udayavani, Apr 20, 2024, 11:08 AM IST

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

ಧಾರವಾಡ: ನೇಹಾ ಹಿರೇಮಠ ಹತ್ಯೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ನೇಹಾ ಕೊಲೆ ಮಾಡಿದ ಫಯಾಜ್ ತಾಯಿ ಮಮ್ತಾಜ್ ಹೇಳಿದ್ದಾರೆ.

ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನನ್ನ‌ಮಗ ಫಯಾಜ್ ಮಾಡಿದ ಕೃತ್ಯಕ್ಕಾಗಿ ನಾನು ರಾಜ್ಯದ ಕ್ಷಮೆಯಾಚನೆ ಮಾಡುತ್ತೇನೆ. ಮೊದಲು ಅವನು ಬಹಳ ಓದಿನಲ್ಲಿ ಜಾಣನಿದ್ದ. ಅವಳೇ ಇವನಿಗೆ ಪ್ರಪೋಸ್ ಮಾಡಿದ್ದಳು.  ನನ್ನ ಬಳಿ ಅವನು ಹೇಳಿದಾಗ ನಾನು ಲವ್ ಬೇಡ ಅಂತ ಹೇಳಿದ್ದೆ ಎಂದಿದ್ದಾರೆ.

ಈ ಘಟನೆಯಿಂದ ಅವನಿಗೆ ತಕ್ಕ ಶಿಕ್ಷೆಯಾಗಬೇಕು. ಕೆಎಎಸ್ ಆಫೀಸರ್ ಆಗಬೇಕು ಎಂದು ನಾನು ಕನಸು ಕಂಡಿದ್ದೆ. ಆದರೆ ಈ ರೀತಿಯಾಗಿದ್ದು ನೋಡಿ ಬಹಳ ಸಂಕಟ ಆಗುತ್ತಿದೆ ಎಂದು ದುಃಖ ತೋಡಿಕೊಂಡಿದ್ದಾರೆ.

ನೇಹಾ ಸಹ ತುಂಬಾ ಒಳ್ಳೆಯ ಹುಡುಗಿ. ಅವರಿಬ್ಬರೂ ಮದುವೆ ಆಗಬೇಕು ಎಂದಿದ್ದರುರ. ಹಾಗಂತ ಸಡಿಲಿಕೆ ಬೇಡ ತಪ್ಪು ಮಾಡಿದವನಿಗೆ ಶಿಕ್ಷೆ ಆಗಬೇಕು. ನೂರಾರು ಮಕ್ಕಳಿಗೆ ನಾನು ಶಿಕ್ಷಣ ಕೊಡ್ತೀನಿ. ಆದರೆ ಇವನಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಫಯಾಜ್ ತಾಯಿ ಮಮ್ತಾಜ್ ಆಗ್ರಹಿಸಿದ್ದಾರೆ.

ಮಗನಿಗೆ ಅತ್ಯಂತ ಕಠಿನ ಶಿಕ್ಷೆ ಆಗಲಿ: ಹಂತಕನ ತಂದೆ

ನೇಹಾ ಹಿರೇಮಠಳನ್ನು ಕೊಂದ ನನ್ನ ಮಗನಿಗೆ ಅತ್ಯಂತ ಕಠಿನ ಶಿಕ್ಷೆ ಆಗಲಿ. ಆ ಶಿಕ್ಷೆಯನ್ನು ನೋಡಿ ಮುಂದೆ ಯಾರೂ ಇಂಥ ಕ್ರೂರ ಕೆಲಸಕ್ಕೆ ಕೈ ಹಾಕಬಾರದು ಎಂದು ಕೊಲೆ ಪ್ರಕರಣದ ಆರೋಪಿ ಫಯಾಜ್‌ನ ತಂದೆ, ಶಿಕ್ಷಕ ಬಾವಾಸಾಹೇಬ (ಭವಾನಿ) ಖೊಂಡುನಾಯ್ಕ ಹೇಳಿದರು.

ಶುಕ್ರವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾನೂನು ಯಾವ ಶಿಕ್ಷೆ ಕೊಟ್ಟರೂ ಸ್ವಾಗತಿಸುತ್ತೇನೆ. ನೇಹಾ ಕುಟುಂಬದವರು, ರಾಜ್ಯದ ಜನ ಹಾಗೂ ಮುನವಳ್ಳಿ ಜನತೆ ದಯವಿಟ್ಟು ನನ್ನನ್ನು ಕ್ಷಮಿಸಬೇಕು ಎಂದು ಮನವಿ ಮಾಡಿದರು.

ನಾವೆಲ್ಲರೂ ಹೆಣ್ಣು ಮಕ್ಕಳು ಎಂದರೆ ಪೂಜಿಸುತ್ತೇವೆ. ಹೆಣ್ಣು ಮಕ್ಕಳು ಎಂದರೆ ದೇವರೆಂದು ಭಾವಿಸುವ ದೇಶ ನಮ್ಮದು. ಯಾರಿಗಾದರೂ ಅನ್ಯಾಯ ಆದಲ್ಲಿ ಪ್ರತಿಭಟನೆ ಮಾಡುತ್ತಿರುವವರ ಹೋರಾಟಕ್ಕೆ ಜಯವಾಗಲಿ. ಕರ್ನಾಟಕ ಜನತೆಯಲ್ಲಿ ನಾನು ಕ್ಷಮೆ ಯಾಚಿಸುತ್ತೇನೆ. ಈ ಘಟನೆಯಿಂದ ಮುನವಳ್ಳಿ ಊರಿಗೆ ಕಪ್ಪು ಚುಕ್ಕೆ ಬಂದಿದೆ ಎಂದರು.

ರಾಜ್ಯದ ಜನತೆ ಹಾಗೂ ಮುನವಳ್ಳಿ ಯುವಕರು ಶಾಂತಿ ಕಾಪಾಡಬೇಕು. ಯಾವ ಹೆಣ್ಣು ಮಕ್ಕಳ ಮೇಲೆ ಯಾರೂ ಕಣ್ಣು ಹಾಕಬಾರದು. ನೇಹಾ ನನ್ನ ಮಗಳಿದ್ದ ಹಾಗೆ, ಅವರ ಮಗಳಿಗೆ ಆದ ಕೃತ್ಯ ನಮ್ಮ ಮಗಳ ಮೇಲೆಯೂ ಆಗಬಹುದು. ಪ್ರತಿಭಟನೆ ಮಾಡುವವರಿಗೆ ದೊಡ್ಡ ಸಲಾಂ ಎಂದರು.

ನೇಹಾ ಹಾಗೂ ಫಯಾಜ್‌ ರೀಲ್ಸ್‌ ವೈರಲ್‌ ಆಗಿರುವ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ಅವರಿಬ್ಬರ ಮಧ್ಯೆ ಪ್ರೀತಿ ಇತ್ತು. ಈ ನಿಮ್ಮ ಪ್ರೀತಿಗೆ “ಲವ್‌ ಜಿಹಾದ್‌’ ಬಣ್ಣ ಕಟ್ಟಿ ಟಾರ್ಗೆಟ್‌ ಮಾಡುತ್ತಾರೆ ಎಂದು ಮಗನಿಗೆ ಬುದ್ಧಿ ಹೇಳಿದ್ದೆ ಎಂದು ಹೇಳಿದರು.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

8

Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್‌-ಯುವಕನಿಗೆ ಮರುಜನ್ಮ

Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್‌-ಯುವಕನಿಗೆ ಮರುಜನ್ಮ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.