Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Team Udayavani, Apr 20, 2024, 11:22 AM IST
ಹುಬ್ಬಳ್ಳಿ: ನೇಹಾಳ ಸಾವಿಗೆ ನಿಷ್ಪಕ್ಷಪಾತ, ನಿಖರವಾದ ತನಿಖೆ ನಡೆಸಿ ಸೂಕ್ತ ನ್ಯಾಯ ಒದಗಿಸಲಾಗುವುದು. ಇದರಲ್ಲಿ ಸಂಶಯಬೇಡ. ಸರ್ಕಾರ ಅವರ ಕುಟುಂಬದೊಂದಿಗೆ ಇರಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿದರು.
ಮೃತ ನೇಹಾ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಹೇಯ ಕೃತ್ಯ. ಇದನ್ನು ಎಲ್ಲ ಸಮಾಜಗಳು ತೀವ್ರವಾಗಿ ಖಂಡಿಸಲೇಬೇಕು. ಇದರಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ ಎಂದರು.
ರಾಜ್ಯದಲ್ಲಿ ಇಂತಹ ಘಟನೆಗಳು ಪದೇ ಪದೇ ಮರುಕಳಿಸುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಇದು ಸೂಕ್ಷ್ಮ ಸಂದರ್ಭ. ಹೀಗಾಗಿ ಜವಾಬ್ದಾರಿ ಸ್ಥಾನದಲ್ಲಿದ್ದು ಬೇರೆ ಕಡೆಗಳಲ್ಲಿ ಆಗಿರುವ ಘಟನೆಗಳನ್ನು ಈ ಘಟನೆಗೆ ಹೋಲಿಕೆ ಮಾಡಿ ಮಾತನಾಡುವುದು ಸರಿಯಲ್ಲ. ಸಮುದಾಯ ದೊಡ್ಡದಾಗಿದ್ದು, ಇಡೀ ಸಮಾಜ ಅವರೊಂದಿಗೆ ಇದೆ. ನಾನು ಕೂಡ ನೇಹಾಳ ಕುಟುಂಬದೊಂದಿಗೆ ಇದ್ದೇನೆ. ಕುಟುಂಬಕ್ಕೆ ಸಾಂತ್ವನ, ಸಮಾಧಾನ ಹೇಳಿದ್ದೇನೆ. ಆದರೂ ತೀರದಂತಹ ದುಃಖ ಕುಟುಂಬಕ್ಕಿದೆ ಎಂದರು.
ನೇಹಾ ಹತ್ಯೆ ಘಟನೆಯನ್ನು ರಾಜಕಾರಣ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಂತಹ ಘಟನೆಗಳಲ್ಲಿ ರಾಜಕಾರಣ ಬದಿಗಿಟ್ಟು, ಓರ್ವ ತಾಯಿಯಾಗಿ ಆ ಜೀವಕ್ಕೆ ನ್ಯಾಯ ಒದಗಿಸುವುದು ನನ್ನ ಆದ್ಯ ಕರ್ತವ್ಯ. ಇಂತಹ ಘಟನೆಗಳಲ್ಲಿ ರಾಜಕೀಯ ಕುರಿತು ಚರ್ಚೆ ಮಾಡಿದರೆ ತನಿಖೆಯ ಹಾದಿ ಬೇರೆ ಸ್ವರೂಪ ಪಡೆಯಲಿದೆ. ಹೀಗಾಗಿ ಹೆಚ್ಚು ಮಾತನಾಡುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.