Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ


Team Udayavani, Apr 20, 2024, 11:27 AM IST

6-jp-hegde

ಹಿರಿಯಡ್ಕ: ದೇಶದಲ್ಲಿ ತಾಂಡವವಾಡುತ್ತಿರುವ ನಿರುದ್ಯೋಗ ಸಮಸ್ಯೆಯಿಂದಾಗಿ ಯುವಕರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಹರಸಾಹಸಪಡುತ್ತಿದ್ದಾರೆ ಎಂದು ಉಡುಪಿ -ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅಭಿಪ್ರಾಯಪಟ್ಟರು.

ಹಿರಿಯಡ್ಕ ಪ್ರದೇಶದ ವಿವಿಧ ಕೈಗಾರಿಕಾ ಘಟಕಗಳಿಗೆ ಮತ ಯಾಚನೆಗಾಗಿ ಭೇಟಿ ನೀಡಿದ ವೇಳೆ ಅವರು ಈ ವಿಷಯ ಪ್ರಸ್ತಾಪಿಸಿದರು.

ಹೊಸ ಉದ್ದಿಮೆಗಳನ್ನು ಹುಟ್ಟುಹಾಕಿ ಯುವ ಸಮುದಾಯಕ್ಕೆ ಜೀವನ ಭದ್ರತೆ ಕಲ್ಪಿಸಬೇಕಾದ ಕೇಂದ್ರ ಸರ್ಕಾರ ಇದ್ದ ಉದ್ದಿಮೆಗಳನ್ನು ಮುಚ್ಚುವ ಹಾಗೂ ಖಾಸಗೀಕರಣ ಮಾಡಲು ಉತ್ಸಾಹ ತೋರುತ್ತಿದೆ. ಇದರಿಂದ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ಜನರ ಕೆಲಸ ಮಾಡಲು ನನಗೆ ಅವಕಾಶ ದೊರಕಿದ್ದಲ್ಲಿ, ಉಭಯ ಜಿಲ್ಲೆಗಳಲ್ಲಿ ಉದ್ಯೋಗಾವಕಾಶಕ್ಕಾಗಿ ಕೈಗಾರಿಕೋದ್ಯಮದ ಆರಂಭಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದರು.

ಈ ಕ್ಷೇತ್ರದ ಜನಪ್ರತಿನಿಧಿಯಾಗಿ ನಾನು ಆಯ್ಕೆಯಾದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಯೋಜನೆಯ ನೀಲ ನಕಾಶೆ ಮಾಡಲಾಗಿದೆ.

ಉದ್ದಿಮೆಗಳಿಗೆ ಪ್ರೋತ್ಸಾಹ ನೀಡುವುದರಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಉದ್ದಿಮೆಗಳಿಗೆ ಸರ್ಕಾರದಿಂದ ಯಾವ ರೀತಿಯ ಸೌಲಭ್ಯಗಳನ್ನು ಕಲ್ಪಿಸಬಹುದು ಎನ್ನುವುದನ್ನು ಜನಪ್ರತಿನಿಧಿ ಅರಿತಿರಬೇಕು. ಅವುಗಳನ್ನು ಪಡೆದುಕೊಳ್ಳಲು ಉದ್ದಿಮೆಗಳ ಮಾಲೀಕರೊಂದಿಗೆ ಚರ್ಚಿಸಬೇಕು. ಉದ್ದಿಮೆಗಳ ಅಭಿವೃದ್ಧಿಗೆ ಪೂರಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಎಲ್ಲರಿಗೂ ಸಮಾನವಾಗಿ ಸೌಲಭ್ಯಗಳು ದೊರಕುತ್ತಿತ್ತು. ಆದರೆ ಪ್ರಸ್ತುತ ಇರುವ ಬಿಜೆಪಿ ನೇತೃತ್ವದ ಸರ್ಕಾರದಿಂದ ಕೇವಲ ಬೃಹತ್‌ ಉದ್ದಿಮೆಗಳಿಗೆ ಮಾತ್ರ ಸೌಲಭ್ಯಗಳು ದೊರೆಯುತ್ತಿರುವುದು  ಬೇಸರದ ಸಂಗತಿ ಎಂದರು.

ಬಡವರ ಸಾಲ ಮನ್ನಾ ಮಾಡಿದರೆ, ಜೀವನ ಕಟ್ಟಿಕೊಳ್ಳಲು ಸಹಾಯ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು  ಟೀಕಿಸುವವರು, ಶ್ರೀಮಂತರ ಕೋಟ್ಯಂತರ ರೂಪಾಯಿ ಸಾಲ ಮನ್ನಾ ಮಾಡಿರುವ ಕೇಂದ್ರ ಸರ್ಕಾರದ ಬಗ್ಗೆ ಮಾತನಾಡುವುದಿಲ್ಲ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡಲಾಗುವುದು ಎಂದು ಹೇಳಿಕೊಂಡು ಗೆದ್ದು ಅಧಿಕಾರಕ್ಕೆ ಬಂದವರು, ಕಳೆದ ಹತ್ತು ವರ್ಷಗಳಲ್ಲಿ ನುಡಿದಂತೆ ನಡೆದಿದ್ದರೆ, ಈವರೆಗೆ ದೇಶದಲ್ಲಿ 20 ಕೋಟಿ ಯುವ ಸಮುದಾಯಕ್ಕೆ ಉದ್ಯೋಗ ಸಿಕ್ಕಿರುತ್ತಿತ್ತು. ವೈಯಕ್ತಿಕವಾಗಿ ಸಾಲ ಮಾಡಿ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಉಳಿವಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೆ. ಆದರೆ ಈಗಿನ ಕಾರ್ಖಾನೆ ಪರಿಸ್ಥಿತಿ ನೋಡಿದರೆ ಬೇಸರವಾಗುತ್ತದೆ. ಅಲ್ಲಿಯ ಗುಜರಿಯನ್ನೂ ಬಿಡದೆ ನಾಶ ಮಾಡಿದರು. ಮುಂದೆ ಅವಕಾಶ ದೊರಕಿದ್ದಲ್ಲಿ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಜಾಗದಲ್ಲಿ ಸಣ್ಣ ಕೈಗಾರಿಕೆಗಳಿಗೆ ಕೈಗಾರಿಕಾ ವಸಾಹತು ಅಭಿವೃದ್ಧಿಗೆ ಪ್ರಯತ್ನ ಮಾಡಲಾಗುವುದು ಎಂದು ಜಯಪ್ರಕಾಶ್‌ ಹೆಗ್ಡೆ ನುಡಿದರು.

ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್‌ ಕುಮಾರ್‌ ಸೊರಕೆ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗಾಗಿ ಎಡೆಬಿಡದೆ ಹೋರಾಟ ಮಾಡುವ ಉತ್ತಮ ಅಭ್ಯರ್ಥಿಯಾದ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ಕಾಂಗ್ರೆಸ್‌ ಪಕ್ಷ ಆಯ್ಕೆ ಮಾಡಿದೆ. ಜನಪರ ಯೋಜನೆಗಳನ್ನು ರೂಪಿಸಿ ಅದನ್ನು ಅನುಷ್ಠಾನಕ್ಕೆ ತರುವಲ್ಲಿ ಹೆಗ್ಡೆ ಶ್ರಮಿಸುತ್ತಾರೆ ಅವರು ಮತ ಕೇಳುವಾಗ ಧರ್ಮ, ಜಾತಿಗಳ ಬಗ್ಗೆ ಮಾತನಾಡದೆ ತನ್ನ ಅಧಿಕಾರದ ಹಾಗೂ ಅಧಿಕಾರ ಇಲ್ಲದ ದಿನಗಳ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು, ಮುಂದೆ ನಾನೇನು ಮಾಡುತ್ತೇನೆ ಎನ್ನುವುದನ್ನು ತಿಳಿಸಿ ಮತ ಯಾಚಿಸುತ್ತಿದ್ದಾರೆ. ಪ್ರಜಾಪ್ರಭುತ್ವದ ಉಳಿವಿಗಾಗಿ ನಾವು ಜಯಪ್ರಕಾಶ್‌ ಹೆಗ್ಡೆ ಅವರನ್ನು ಗೆಲ್ಲಿಸಬೇಕಾದ ಅನಿವಾರ್ಯತೆ ಇದೆ ಎಂದರು.

ಟಾಪ್ ನ್ಯೂಸ್

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.