ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Team Udayavani, Apr 20, 2024, 2:54 PM IST
ನವದೆಹಲಿ: ಜನಪ್ರಿಯ ಫ್ಯಾಷನ್ ಪ್ರಭಾವಿ ಸುರಭಿ ಜೈನ್ (30) ನಿಧನ ಹೊಂದಿದ್ದಾರೆ. ಅವರ ನಿಧನದ ಸುದ್ದಿಯನ್ನು ಕುಟುಂಬಸ್ಥರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಫ್ಯಾಷನ್ ಇನ್ ಫ್ಲುಯೆನ್ಸರ್ ಸಾಮಾಜಿಕ ಜಾಲತಾಣದಲ್ಲಿ ಅಪಾರ ಹಿಂಬಾಲಕರನ್ನು ಹೊಂದಿದ್ದ ಸುರಭಿ ಜೈನ್ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಅಂಡಾಶಯದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು.
ಕ್ಯಾನ್ಸರ್ ಗೆ ಸಂಬಂಧಿಸಿದಂತೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಹಂಚಿಕೊಂಡು ಆರೋಗ್ಯದ ಬಗ್ಗೆ ಇತ್ತೀಚೆಗೆ ಅಪ್ಡೇಟ್ ನ್ನು ಹಂಚಿಕೊಂಡಿದ್ದರು. ಸುರಭಿ ಜೈನ್ ಎಂಟು ವಾರಗಳ ಹಿಂದೆ ಆಸ್ಪತ್ರೆಯಲ್ಲಿ ತನ್ನ ಚಿತ್ರವನ್ನು ಹಂಚಿಕೊಂಡಿದ್ದಳು.
ಗುರುವಾರ ಅವರು ನಿಧನರಾಗಿದ್ದು ಶುಕ್ರವಾರ(ಏ.19 ರಂದು) ಗಾಜಿಯಾಬಾದ್‌ನಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು ಎಂದು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಸುರಭಿ ಅವರಿಗೆ ಎರಡನೇ ಬಾರಿ ಕ್ಯಾನ್ಸರ್ ತಗುಲಿದ್ದು, ಈ ಹಿಂದೆ 27 ನೇ ವಯಸ್ಸಿನಲ್ಲಿ ಕ್ಯಾನ್ಸರ್ ಪತ್ತೆಯಾಗಿದ್ದು, ಅದಕ್ಕೆ ಅವರು ಶಸ್ತ್ರ ಚಿಕಿತ್ಸೆಯನ್ನು ಪಡೆದಿದ್ದರು.
ಅವರ ನಿಧನಕ್ಕೆ ನೆಟ್ಟಿಗರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.