Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
ಮೂರು ತಿಂಗಳ ಹಿಂದೆಯೇ ಠಾಣೆ ಮೆಟ್ಟಿಲೇರಿದ್ದ...!!
Team Udayavani, Apr 20, 2024, 3:37 PM IST
ಬೆಳಗಾವಿ: ಹುಬ್ಬಳ್ಳಿಯ ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣವಾಗಿದ್ದು ತಂದೆ ಬಾವಾಸಾಹೇಬ್ ಕೊಂಡುನಾಯ್ಕ ಮೇಲೆಯೂ ಹಲ್ಲೆ ಮಾಡಿದ ವಿಚಾರ ಬೆಳಕಿಗೆ ಬಂದಿದೆ.
ಆಸ್ತಿ ವಿಚಾರಕ್ಕೆ ಮೂರು ತಿಂಗಳ ಹಿಂದೆ ತಂದೆಯ ಮೇಲೆಯೇ ಹಲ್ಲೆ ಮಾಡಿದ್ದು, ಮಗನ ಕೃತ್ಯದಿಂದ ನೊಂದಿದ್ದ ತಂದೆ ಸವದತ್ತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಮಗನಿಂದ ರಕ್ಷಣೆ ಕೊಡಿಸಿ ಎಂದು ಮನವಿ ಮಾಡಿದ್ದರು. ಬಳಿಕ ಫಯಾಜ್ನನ್ನು ಠಾಣೆಗೆ ಕರೆಯಿಸಿಕೊಂಡು ಪೊಲೀಸರು ಬುದ್ದಿವಾದ ಹೇಳಿ ಮುಚ್ಚಳಿಕೆ ಬರೆಯಿಸಿಕೊಂಡು, ಮತ್ತೆನಾದರೂ ತಂದೆ ಮೇಲೆ ಹಲ್ಲೆ ಮಾಡಿದರೆ ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿದ್ದರು.
ಮುನವಳ್ಳಿಯಲ್ಲಿ ಬಾವಾಸಾಹೇಬ ಖೊಂಡುನಾಯ್ಕ ಶಿಕ್ಷಕರಾಗಿದ್ದು, ತಾಯಿ ಶಿಂದೋಗಿಯಲ್ಲಿ ಶಿಕ್ಷಕಿಯಾಗಿದ್ದಾರೆ.
ಇದನ್ನೂ ಓದಿ: Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
ತಂದೆ-ತಾಯಿ ಜಗಳದ ನಡುವೆ ತಾಯಿ ಪರವಾಗಿ ನಿಂತು ಫಯಾಜ್ ಜಗಳವಾಡಿದ್ದ, ಗಂಡ ಹೆಂಡತಿ ಮಕ್ಕಳ ಜಗಳ ಎಂದು ಬುದ್ದಿವಾದ ಹೇಳಿ ಪೊಲೀಸರು ವಾಪಸ್ ಕಳುಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.