Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
ರೋದಿಸುತ್ತಿರುವ ತಾಯಿಯಾನೆ ದಾಳಿ ಮಾಡುವ ಆಂತಕ.. ಟ್ರಾಫಿಕ್ ಜಾಮ್
Team Udayavani, Apr 20, 2024, 4:59 PM IST
ಗುಂಡ್ಲುಪೇಟೆ (ಚಾಮರಾಜನಗರ): ಹುಲಿ ದಾಳಿ ನಡೆಸಿದ ಪರಿಣಾಮ ಆನೆ ಮರಿ ನಡು ರಸ್ತೆಯಲ್ಲೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಂಡೀಪುರ ಅಭಯಾರಣ್ಯದಲ್ಲಿ ನಡೆದಿದೆ.
ಬಂಡೀಪುರ-ಊಟಿ ರಾಷ್ಟ್ರೀಯ ಹೆದ್ದಾರಿ ಬದಿಯ ರಸ್ತೆ ಬದಿಯಲ್ಲಿ ಮರಿಯಾನೆ ಮೇವು ಮೆಯ್ಯುತ್ತಿದ್ದ ಸಂದರ್ಭ ಹುಲಿ ಏಕಾ ಏಕಿ ದಾಳಿ ನಡೆಸಿ ಕೊಂದು ಹಾಕಿದೆ. ಕೂಗಳತೆ ದೂರಲ್ಲಿದ್ದ ತಾಯಿಯಾನೆ ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಹುಲಿ ಓಡಿ ಹೋಗಿತ್ತು ಎನ್ನಲಾಗುತ್ತಿದೆ.
ಮರಿಯಾನೆ ಮೃತ ದೇಹದ ಮುಂದೆ ನಿಂತು ತಾಯಿಯಾನೆ ರೋದಿಸುತ್ತಿದೆ. ಇದರಿಂದ ಬಂಡೀಪುರ ಮಾರ್ಗವಾಗಿ ಸಂಚರಿಸುತ್ತಿದ್ದ ವಾಹನಗಳು ತಾಯಿಯಾನೆ ದಾಳಿ ಮಾಡಬಹುದು ಎಂಬ ಆಂತಕದಲ್ಲಿ ಸಂಚಾರ ಮಾಡದೆ ನಿಂತಲ್ಲೆ ನಿಂತಿವೆ. ಇದರಿಂದ ಟ್ರಾಫಿಕ್ ಜಾಮ್ ಆಗಿದ್ದು ಕಿ.ಮೀ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮೃತ ಕಾಡಾನೆಯನ್ನು ರಸ್ತೆಯಿಂದ ತೆರವು ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.