Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Team Udayavani, Apr 20, 2024, 11:57 PM IST

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

ಹಾವೇರಿ: ಲೋಕಸಭೆ ಚುನಾವಣೆ 2024ರ ನಾಮಪತ್ರದಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬರು ಸೂಚಕರ ನಕಲಿ ಸಹಿ ಮಾಡಿ ಪ್ರಮಾಣಪತ್ರ ಸಲ್ಲಿಸಿರುವ ಬಗ್ಗೆ ಜಿಲ್ಲಾ ಚುನಾವಣಾ ಧಿಕಾರಿ ರಘುನಂದನ ಮೂರ್ತಿ ಅವರು ಹಾವೇರಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹಾನಗಲ್ಲ ತಾಲೂಕಿನ ಬಮ್ಮನಹಳ್ಳಿಯ ಸಿದ್ದಪ್ಪ ಕಲ್ಲಪ್ಪ ಪೂಜಾರ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರದೊಂದಿಗೆ ಸುಳ್ಳು ಸೂಚಕರ ಪ್ರಮಾಣಪತ್ರ ಸಲ್ಲಿಸಿದ್ದು, ನಾಮಪತ್ರ ಪರಿಶೀಲನೆ ವೇಳೆ ನಕಲಿ ಸಹಿ ಎಂಬುದು ಸಾಬೀತಾದ ಹಿನ್ನೆಲೆಯಲ್ಲಿ ನಾಮಪತ್ರವನ್ನೂ ತಿರಸ್ಕೃರಿಸಲಾಗಿದೆ.

ನಾಮಪತ್ರ ಪರಿಶೀಲನೆ ಮಾಡಿದಾಗ ಸೂಚಕರ ವಿವರ ಮತ್ತು ಅವರ ಸಹಿಯ ಬಗ್ಗೆ ಸಂಶಯ ಮೂಡಿತು. ಆಗ ಸೂಚಕರ ಸಹಿ ಖಚಿತಪಡಿಸಿಕೊಳ್ಳಲು, ಅವರ ಮನೆಗೆ ಹೋಗಿ ಪರಿಶೀಲನೆ ಮಾಡುವಂತೆ ಹಾನಗಲ್ಲ ತಾಲೂಕಿನ ತಹಶೀಲ್ದಾರ್‌ ಆರ್‌.ಎನ್‌. ಕೊರವರ ಮತ್ತು ಹಾನಗಲ್ಲ ಪೊಲೀಸ್‌ ಠಾಣೆಯ ಸಿಪಿಐ ವೀರೇಶ ಅವರಿಗೆ ಜಿಲ್ಲಾ ಚುನಾವಣಾಧಿ ಕಾರಿ ಸೂಚನೆ ನೀಡಿದ್ದರು.

ಅಭ್ಯರ್ಥಿ ಸಹಿ ಮಾಡಿಸಿದ ನಮೂನೆ ಕ್ರಮ ಸಂಖ್ಯೆ 2, 3, 4, 5, 6, 8ನೇ ಸೂಚಕರನ್ನು ಖುದ್ದಾಗಿ ಭೇಟಿ ಮಾಡಿ ವಿಚಾರಿಸಿದಾಗ “ನಾವು ಸಹಿ ಮಾಡಿಲ್ಲ. ಇವು ನಮ್ಮ ಸಹಿಗಳಲ್ಲ’ ಎಂದು ತಿಳಿಸಿ, ನಿಜವಾದ ಸಹಿಗಳನ್ನು ತಂಡದ ಅಧಿ ಕಾರಿಗಳ ಮುಂದೆ ಮಾಡಿಕೊಟ್ಟಿದ್ದಾರೆ. ಇದು ಚುನಾವಣ ನಿಯಮದ ಸ್ಪಷ್ಟ ಉಲ್ಲಂಘನೆ ಎಂದು ಕಂಡುಬಂದ ಹಿನ್ನೆಲೆಯಲ್ಲಿ ಸಿದ್ದಪ್ಪ ಪೂಜಾರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಮಾಹಿತಿ ನೀಡಿದ್ದಾರೆ.

ಆಯೋಗದ ಮಾರ್ಗಸೂಚಿಯಂತೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು 10 ಜನ ಸೂಚಕರು ಬೇಕು. ಈ ಕ್ಷೇತ್ರದವರಾಗಿರಬೇಕು. ನಾಮಪತ್ರದಲ್ಲಿ ಸೂಚಕರ ಮತದಾರ ಪಟ್ಟಿಯ ಭಾಗಸಂಖ್ಯೆ, ಕ್ರಮಸಂಖ್ಯೆ ಕ್ರಮಬದ್ಧವಾಗಿ ನಮೂದಿಸಿ ಖುದ್ದಾಗಿ ಸೂಚಕರೇ ಸಹಿ ಮಾಡಿರಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ‌ಕಲಿಸಿ: ಚೌಡಯ್ಯ ಸ್ವಾಮೀಜಿ

ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ‌ಕಲಿಸಿ: ಚೌಡಯ್ಯ ಸ್ವಾಮೀಜಿ

ಮಕ್ಕಳನ್ನು ಮೊಬೈಲ್‌ನಿಂದ ದೂರವಿಡಬಲ್ಲ ದು ಕ್ರೀಡೆ-ಮಮತಾ ಆರೆಗೊಪ್ಪ

pramod muthalik

Haveri; ಮುಸ್ಲಿಮರನ್ನು ಬಹಿಷ್ಕರಿಸಿ, ಅವರ ಜತೆ ಯಾವುದೇ ವ್ಯವಹಾರ ಮಾಡಬೇಡಿ: ಮುತಾಲಿಕ್‌ ಕಿಡಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.