Mangaluru ರಾಜೇಶ್ ಕೋಟ್ಯಾನ್ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಕೋಮುದ್ವೇಷದಿಂದ ಕೋಟೆಪುರದಲ್ಲಿ ನಡೆದಿದ್ದ ಹತ್ಯೆ
Team Udayavani, Apr 21, 2024, 7:20 AM IST
ಮಂಗಳೂರು: ಉಳ್ಳಾಲ ಕೋಟೆಪುರದಲ್ಲಿ 2016ರ ಎ. 12ರ ಮುಂಜಾನೆ ಕೋಮುದ್ವೇಷದಿಂದ ನಡೆದಿದ ರಾಜೇಶ್ ಕೋಟ್ಯಾನ್ ಆಲಿಯಾಸ್ ರಾಜ (44) ಕೊಲೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್.ಎಸ್. ಅವರು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಉಳ್ಳಾಲ ಕೋಡಿ ರೋಡ್‌ನ ಮೊಹಮ್ಮದ್ ಆಸೀಫ್ ಆಲಿಯಾಸ್ ಆಚಿ (31), ಮುಕ್ಕಚೇರಿಯ ಮೊಹಮ್ಮದ್ ಸುಹೈಲ್ ಆಲಿಯಾಸ್ ಸುಹೈಲ್ (28), ಕೋಡಿ ಮಸೀದಿ ಬಳಿಯ ಅಬ್ದುಲ್ ಮುತಾಲಿಪ್ ಆಲಿಯಾಸ್ ಮುತ್ತು (28) ಮತ್ತು ಉಳ್ಳಾಲ ಉಳಿಯ ರಸ್ತೆಯ ಅಬ್ದುಲ್ ಅಸ್ವೀರ್ ಆಲಿಯಾಸ್ ಅಚ್ಚು (27) ಜೀವಾವಧಿ ಶಿಕ್ಷೆಗೊಳಗಾದವರು.
ಮೊಹಮ್ಮದ್ ಆಸಿಫ್ ಚಾಲಕ, ಮೊಹಮ್ಮದ್ ಸುಹೈಲ್ ಲೋಡರ್, ಅಬ್ದುಲ್ ಮುತಾಲಿಪ್ ಕೂಲಿ ಕೆಲಸ, ಅಬ್ದುಲ್ ಅಸ್ವೀರ್ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ಪ್ರಕರಣದಲ್ಲಿ ಇತರ ಇಬ್ಬರು ಕಾನೂನಿನ ಸಂಘರ್ಷಕ್ಕೊಳಗಾದ ಬಾಲಕರಾಗಿದ್ದು, ಇವರ ವಿಚಾರಣೆ ಬಾಲ ನ್ಯಾಯ ಮಂಡಳಿಯಲ್ಲಿ ಬಾಕಿ ಇದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಎ. 20ರಂದು ನಾಲ್ವರು ಆರೋಪಿಗಳಿಗೆ ಭಾರತೀಯ ದಂಡ ಸಂಹಿತೆ ಕಲಂ 302ರಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು ತಲಾ 25,000 ರೂ. ದಂಡ, ದಂಡ ಪಾವತಿಸಲು ವಿಫಲರಾದಲ್ಲಿ ಹೆಚ್ಚುವರಿ 1 ವರ್ಷ ಸಜೆ, ಕಲಂ 201ರಡಿಯಲ್ಲಿ 1 ವರ್ಷ ಸಜೆ ಮತ್ತು ತಲಾ 5,000 ರೂ. ದಂಡ, ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿ 3 ತಿಂಗಳ ಸಾದಾ ಸಜೆ, ಕಲಂ 143ರಡಿ 6 ತಿಂಗಳ ಸಾದಾ ಸಜೆ, ಕಲಂ 148ರಡಿಯಲ್ಲಿ 1 ವರ್ಷ ಸಜೆ, ಕಲಂ 153(ಎ) ಅಡಿಯಲ್ಲಿ 1 ವರ್ಷ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.
ಹಾಗೆಯೇ ಆರೋಪಿಗಳಿಂದ ವಸೂಲಾದ ದಂಡದ ಮೊತ್ತ 1.20 ಲ.ರೂ.ಗಳನ್ನು ಮೃತ ರಾಜೇಶ್ ಕೋಟ್ಯಾನ್ ಅವರ ಪತ್ನಿಗೆ ನೀಡುವಂತೆ ಹಾಗೂ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸಂತ್ರಸ್ತರ ಪರಿಹಾರ ಯೋಜನೆ ಅಡಿಯಲ್ಲಿ ರಾಜೇಶ್ ಕೋಟ್ಯಾನ್ ಅವರ ಪತ್ನಿಗೆ ಪರಿಹಾರ ನೀಡಬೇಕೆಂದು ನಿರ್ದೇಶನ ನೀಡಿದ್ದಾರೆ. ಈ ಪ್ರಕರಣದಲ್ಲಿ ಸರಕಾರದ ಪರ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ಅವರು ಸಾಕ್ಷಿಗಳನ್ನು ವಿಚಾರಣೆ ಮಾಡಿ ವಾದ ಮಂಡಿಸಿದ್ದರು.
ಕೋಮುದ್ವೇಷದ ಕಾರಣದಿಂದ ನಡೆದ ಕೊಲೆ
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೊಗವೀರಪಟ್ಣದ ಹಿಂದೂ ಮತ್ತು ಮುಸ್ಲಿಮರ ನಡುವೆ ಹಲವು ಸಮಯದಿಂದ ಕೋಮುಸಂಘರ್ಷ ನಡೆಯುತ್ತಿತ್ತು. ಆರೋಪಿಗಳು ಒಂಟಿಯಾಗಿ ಬರುವ ಮೊಗವೀರಪಟ್ಣದ ಹಿಂದೂವೊಬ್ಬನನ್ನು ಕೊಲೆ ಮಾಡಬೇಕೆಂದು ನಿರ್ಧರಿಸಿ ಸಂಚು ರೂಪಿಸಿದ್ದರು. ಅದರಂತೆ 2016 ಎ. 12ರ ಮುಂಜಾವ ಕೋಟೆಪುರ ರಸ್ತೆಯಲ್ಲಿ ಮೀನುಗಾರಿಕೆ ಕೆಲಸಕ್ಕೆಂದು ನಡೆದುಕೊಂಡು ಹೋಗುತ್ತಿದ್ದ ರಾಜೇಶ್ ಕೋಟ್ಯಾನ್ ಅವರ ಮೇಲೆ ಮರದ ದೊಣ್ಣೆಗಳಿಂದ ಹೊಡೆದು ಅನಂತರ ಅವರ ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದರು. ಈ ಬಗ್ಗೆ ಉಳ್ಳಾಲ ಠಾಣೆಯ ಪೊಲೀಸ್ ನಿರೀಕ್ಷಕ ಅಶೋಕ್ ಅವರು ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಫೋರೆನ್ಸಿಕ್ ವಿಭಾಗದ ವೈದ್ಯಾಧಿಕಾರಿ ಡಾ| ಮಹಾಬಲೇಶ್ ಶೆಟ್ಟಿ ಮತ್ತು ತಂಡದವರು ಘಟನ ಸ್ಥಳ ತಪಾಸಣೆ ನಡೆಸಿ ತಪಾಸಣ ವರದಿ ಮತ್ತು ಶವಪರೀಕ್ಷಾ ವರದಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.