Congress ಸರಕಾರ ಪತನ ಹಗಲು ಕನಸು: ಎಚ್‌ಡಿಡಿ, ಎಚ್‌ಡಿಕೆ ಗೆ ಸಿಎಂ ಟಾಂಗ್‌

Team Udayavani, Apr 21, 2024, 1:04 AM IST

siddanna-2

ಕೆ.ಆರ್‌.ನಗರ: ಲೋಕಸಭಾ ಚುನಾವಣೆ ಮುಗಿದ ಅನಂತರ ರಾಜ್ಯ ಸರಕಾರ ಪತನವಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌. ಡಿ.ಕುಮಾರಸ್ವಾಮಿ ಹಗಲು ಕನಸು ಕಾಣುತ್ತಿದ್ದು, ಅದು ಈಡೇ ರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪಟ್ಟಣದ ಪುರಸಭೆ ಬಯಲು ರಂಗ ಮಂದಿರದ ಆವರಣದಲ್ಲಿ ಶನಿವಾರ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್‌ ಚಂದ್ರು) ಪರ ನಡೆದ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಪಕ್ಷದಿಂದ 136 ಮಂದಿ ಶಾಸಕರು ಆಯ್ಕೆಯಾಗಿದ್ದು, ನಮ್ಮೆಲ್ಲರ ಒಗ್ಗಟ್ಟು ಮತ್ತು ರಾಜ್ಯದ ಜನತೆಯ ಆಶೀರ್ವಾದ ಇರುವವರೆಗೂ ನಮ್ಮನ್ನು ಯಾರು ಏನು ಮಾಡಲು ಸಾಧ್ಯವಿಲ್ಲ ಎಂದರು.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬದವರಿಗೆ ನನ್ನನ್ನೂ ಸೇರಿದಂತೆ ಒಕ್ಕಲಿಗರನ್ನು ಕಂಡರೆ ಆಗುವುದಿಲ್ಲ. ಅದರಲ್ಲಿಯೂ ಒಕ್ಕಲಿಗ ಸಮಾಜದವರು ಅಧಿಕಾರದಲ್ಲಿದ್ದರೆ ಹೊಟ್ಟೆ ಉರಿದುಕೊಂಡು, ಬಾಯಿ ಬಡಿದುಕೊಳ್ಳುತ್ತಾರೆ ಎಂದು ವ್ಯಂಗ್ಯವಾಡಿದರು. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನವರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಲ್ಲ ಕಡೆಯು ತಮ್ಮ ಕುಟುಂಬದವರನ್ನೇ ಕಣಕ್ಕಿಳಿಸಿದ್ದು, ಕೋಲಾರ ಲೋಕಸಭಾ ಕ್ಷೇತ್ರ ಮೀಸಲಾಗದಿದ್ದರೆ ಅಲ್ಲಿಯೂ ತಮ್ಮವರನ್ನೇ ನಿಲ್ಲಿಸುತ್ತಿದ್ದರು. ಅಧಿಕಾರದ ಆಸೆಗಾಗಿ ತಮ್ಮ ಅಳಿಯನಿಗೂ ಬಿಜೆಪಿಯಿಂದ ಟಿಕೆಟ್‌ ಕೊಡಿಸಿದ್ದಾರೆ ಎಂದರು.

ಅಳುವುದಕ್ಕೆ ಸಭೆ
ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ಕೊನೆಯ ದಿನ ಕಣ್ಣೀರು ಹಾಕುವ ಮೂಲಕ ಅಳುವುದಕ್ಕೆ ಸಭೆ ಇಟ್ಟುಕೊಂಡಿದ್ದಾರೆ. ಅಳುವುದು ಅವರ ಕೊನೆಯ ಅಸ್ತ್ರವಾಗಿದ್ದು, ಅದನ್ನು ಯಾರೂ ನಂಬಬೇಡಿ. ಕೋಮುವಾದಿ ಪಕ್ಷದ ಜತೆ ಸೇರಿರುವ ನೀವು (ಜೆಡಿಎಸ್‌) ಜಾತ್ಯತೀತರಲ್ಲ.
ಸಿದ್ದರಾಮಯ್ಯ ಮುಖ್ಯಮಂತ್ರಿ

ಟಾಪ್ ನ್ಯೂಸ್

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.