Inspector: ರೌಡಿಶೀಟರ್‌ನಿಂದ ಲಂಚ ಪಡೆದ ಇನ್ಸ್‌ಪೆಕ್ಟರ್ ಸಸ್ಪೆಂಡ್
Team Udayavani, Apr 21, 2024, 10:32 AM IST
ಬೆಂಗಳೂರು: ರೌಡಿಶೀಟರ್‌ನಿಂದ ಲಂಚ ಪಡೆದಿದ್ದ ಆರೋಪದಡಿ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ರೌಡಿ ನಿಗ್ರಹ ಪಡೆಯ ಇನ್‌ಸ್ಪೆಕ್ಟರ್ ಜ್ಯೋತಿರ್ಲಿಂಗ ಹೊನಕಟ್ಟಿ ಅವರನ್ನು ಅಮಾನತುಗೊಳಿಸಿ ನಗರದ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶ ಹೊರಡಿಸಿ ದ್ದಾರೆ.
ಮಾರತ್ತಹಳ್ಳಿ ಠಾಣೆಯ ರೌಡಿ ಶೀಟರ್ ರೋಹಿತ್‌ನಿಂದ ಜ್ಯೋತಿ ರ್ಲಿಂಗ ಹಣ ಪಡೆದಿದ್ದರು. ಈ ಬಗ್ಗೆ ಸಾರ್ವಜನಿಕರೊಬ್ಬರು ಮೇಲ ಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಿಸಿಬಿ ಎಸಿಪಿ ದರ್ಜೆ ಅಧಿಕಾರಿ ಜ್ಯೋತಿರ್ಲಿಂಗ ವಿರುದ್ಧ ಇಲಾಖಾ ತನಿಖೆ ನಡೆಸಿ ಆಯುಕ್ತರಿಗೆ ವರದಿ ನೀಡಿದ್ದರು.
ಚುನಾವಣೆ ಹಿನ್ನೆಲೆಯಲ್ಲಿ ಸಿಸಿಬಿಯ ರೌಡಿ ನಿಗ್ರಹದಳದ ಇನ್‌ಸ್ಪೆಕ್ಟರ್ ಜ್ಯೋತಿರ್ಲಿಂಗಗೂ ರೌಡಿಗಳ ಮೇಲೆ ನಿಗಾ ವಹಿಸುವಂತೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದರು. ತಪಾಸಣೆ ನೆಪದಲ್ಲಿ ರೌಡಿಶೀಟರ್ ರೋಹಿತ್‌ನನ್ನು ವಿಚಾರಣೆ ನಡೆಸಿದ್ದ ಜ್ಯೋತಿರ್ಲಿಂಗ, ಯುಪಿಐ ಮೂಲಕ ಹಣ ಪಡೆದುಕೊಂಡಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.