D. K. Shivakumar: ಆಮಿಷ; ಡಿಕೆಶಿ ವಿರುದ್ಧ ಎಫ್ಐಆರ್
Team Udayavani, Apr 21, 2024, 10:35 AM IST
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.
ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಅಪಾರ್ಟ್‌ಮೆಂಟ್‌ಗಳ ಸಮುಚ್ಚಯಕ್ಕೆ ಡಿ.ಕೆ.ಸುರೇಶ್ ಪರ ಪ್ರಚಾರಕ್ಕೆ ತೆರಳಿದಾಗ ಶಿವಕುಮಾರ್, ಈ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ 2,510 ಮನೆಗಳಿದ್ದು, 6,424 ಮತದಾರರಿದ್ದಾರೆ. ನಿಮಗೆ ಹಕ್ಕುಪತ್ರ ಹಸ್ತಾಂತರವಾಗಿಲ್ಲ, ಕಾವೇರಿ ನೀರು ಸಂಪರ್ಕ ಸಿಕ್ಕಿಲ್ಲ. ಎರಡನ್ನೂ ನಾನು ನಿಮಗೆ ಕೊಡುತ್ತೇನೆ. ನೀವು ನನಗೆ ಏನು ಕೊಡುತ್ತೀರಿ? ನಿಮ್ಮ ಅಕ್ಕ-ಪಕ್ಕದ 2-3 ಬೂತ್‌ಗಳಲ್ಲಿ ನಮ್ಮ ಪರ ಮತಗಳಿವೆ. ಉಳಿದಿರುವುದು ನಿಮ್ಮ ಬೂತ್ ಮಾತ್ರ. ಈಗ ಹೇಳಿ ಹಕ್ಕು ಪತ್ರ ಹಾಗೂ ಕಾವೇರಿ ನೀರು ಬೇಕಾ? ಬೇಡವಾ?’ ಎಂಬುದಾಗಿ ಶಿವಕುಮಾರ್ ಮತದಾರರನ್ನು ಬೆದರಿಸಿದ್ದರೆಂಬ ಆರೋಪ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ದೂರು ನೀಡಿದ್ದಾರೆ. ಈ ಸಂಬಂಧ ಎಫ್ಐಆರ್ ದಾಖಲಿಸಿ ಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಮತ್ತೂಂದೆಡೆ ಡಿ.ಕೆ.ಶಿವಕುಮಾರ್ ಮತದಾರರಿಗೆ ಬೆದರಿಕೆಯೊಡ್ಡಿದ್ದ ವಿಡಿ ಯೋವನ್ನು ಬಿಜೆಪಿ ಮುಖಂಡರು, ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಿ ದ್ದರು. ಜತೆಗೆ, ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಇದೇ ದೂರು ಆಧರಿಸಿ ಮಾಹಿತಿ ಸಂಗ್ರಹಿಸಿಶಿವಕುವರ್ ವಿರುದ್ಧ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.