Money seized: ಕಾರಲ್ಲಿ ಸಾಗಿಸುತ್ತಿದ್ದ 2 ಕೋಟಿ ನಗದು ಜಪ್ತಿ; ಪ್ರಕರಣ ದಾಖಲು
Team Udayavani, Apr 21, 2024, 10:41 AM IST
ಬೆಂಗಳೂರು: ಬಿನ್ನಿಪೇಟೆಯ ಟ್ಯಾಂಕ್ ಬಂಡ್ ರಸ್ತೆಯ ಇಟಿಎ ಮಾಲ್ ಬಳಿ ಕಾರೊಂದರಲ್ಲಿ ಸಾಗಿಸುತ್ತಿದ್ದ 2 ಕೋಟಿ ರೂ. ನಗದನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಶನಿವಾರ ಸಂಜೆ 4 ಗಂಟೆಯಲ್ಲಿ ವೆಂಕಟೇಶ್ ಎಂಬುವವರಿಗೆ ಸೇರಿದ ಕಾರಿನಲ್ಲಿ ಹಣ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಸಿಕ್ಕ ಮಾಹಿತಿ ಮೇರೆಗೆ ಚುನಾವಣಾಧಿಕಾರಿಗಳು ಕಾರನ್ನು ತಡೆದು ಪರಿಶೀಲಿಸಿದಾಗ 2 ಕೋಟಿ ರೂ. ನಗದು ಹಣ ಪತ್ತೆಯಾಗಿದೆ.
ಇನ್ನು ಕಾರಿನಲ್ಲಿ ಸಿಕ್ಕ ಹಣ ಬಿಜೆಪಿ ಸೇರಿದ್ದು ಎನ್ನಲಾಗಿದೆ. ಮಲ್ಲೇಶ್ವರದ ಕೋದಂಡರಾಮಪುರ ಕೆನರಾ ಬ್ಯಾಂಕ್ ಶಾಖೆಯಲ್ಲಿ ಮಾ.27ರಂದು ಈ ಹಣ ಡ್ರಾ ಮಾಡಲಾಗಿತ್ತು. ಚುನಾವಣಾಧಿಕಾರಿಗಳಿಂದ ದೂರು ಸ್ವೀಕರಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಕಾಟನ್‌ಪೇಟೆ ಠಾಣೆ ಪೊಲೀಸರು ತಿಳಿಸಿದ್ದಾರೆ. ಈ ಹಣದ ಮೂಲ ಕೆದಕಲು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಪ್ರಕರಣ ವರ್ಗಾವಣೆ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.