ಕೃಷಿಕರಿಗೆ ಪೂರಕ ಯೋಜನೆಗಳು ಮತ ಕೇಳಲು, ಚರ್ಚಿಸಲು ಸಹಾಯ: ಜೆಪಿ ಹೆಗ್ಡೆ

ಚಿಕ್ಕಮಗಳೂರು ಕ್ಷೇತ್ರ ದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ.

Team Udayavani, Apr 22, 2024, 10:07 AM IST

ಕೃಷಿಕರಿಗೆ ಪೂರಕ ಯೋಜನೆಗಳು ಮತ ಕೇಳಲು, ಚರ್ಚಿಸಲು ಸಹಾಯ: ಜೆಪಿ ಹೆಗ್ಡೆ

ಚಿಕ್ಕಮಗಳೂರು: ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತಯಾಚನೆಯ ವೇಳೆ ಜನರು ಅಪಾರ ಅಭಿಮಾನ, ಪ್ರೀತಿ, ಪ್ರೋತ್ಸಾಹ ನೀಡಿದ್ದಾರೆ. ಈ ಅಭಿಮಾನ ಮತ್ತು ಪ್ರೀತಿ ಮತವಾಗಿ ಬದಲಾಗುತ್ತದೆ ಎಂಬ ನಂಬಿಕೆ ಇದೆ. ಜನ ಬದಲಾವಣೆ ಬಯಸಿದ್ದಾರೆ. ಇದಕ್ಕೆ ರಾಜ್ಯದಲ್ಲಿ ಕಾಂಗ್ರೆಸ್‌ ಮಾಡಿದ ಅಭಿವೃದ್ಧಿ ಕಾರ್ಯಗಳು ಮತ್ತು ಬಡವರ ಬದುಕಿಗೆ ನೆರವಾದ ಐದು ಗ್ಯಾರೆಂಟಿಗಳೇ ಕಾರಣ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಜಯಪ್ರಕಾಶ ಹೆಗ್ಡೆ ಹೇಳಿದರು.

ಅವರು ತಾಲೂಕಿನ ಆಲ್ದೂರಿನಲ್ಲಿ ನಡೆದ ಬೃಹತ್‌ ಜಾಥಾದ ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಹತ್ತು ವರ್ಷ ಕಳೆದರೂ ಮತ್ತೊಂದು ರೈಲು ತರಲಾಗಲಿಲ್ಲ ಕಳೆದ ನಾಲ್ಕು ದಶಕಗಳಿಂದ ರಾಜಕೀಯದಲ್ಲಿ ತೊಡಗಿಕೊಂಡಿದ್ದ ನನ್ನ ಬಗ್ಗೆ ಜನರು ಅಪಾರ ಪ್ರೀತಿ ತೋರಿಸುತ್ತಿರುವುದು ಮಾಡಿರುವ ಕೆಲಸಗಳನ್ನು ನೋಡಿ. ಕೇವಲ 20 ತಿಂಗಳ ಕಾಲ ಸಂಸದನಾಗಿದ್ದರೂ ಉಡುಪಿ ಮತ್ತು ಚಿಕ್ಕಮಗಳೂರು ಕ್ಷೇತ್ರ ದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ.

ಒಂದು ರೈಲ್ವೆ ಆರಂಭವಾಗಿ ಹತ್ತು ವರ್ಷ ಕಳೆದರೂ ಅನಂತರ ಅಧಿಕಾರಕ್ಕೆ ಬಂದವರಿಗೆ ಮತ್ತೂಂದು ರೈಲು ತರಲಾಗಲಿಲ್ಲ. ಪಕ್ಷದ ಜನರೇ “ಗೋ ಬ್ಯಾಕ್‌’ ಎಂದು ಹೇಳುವ ಸ್ಥಿತಿ ನಿರ್ಮಾಣವಾಯಿತು. ಇದರಿಂದಾಗಿ ಪ್ರತಿಸ್ಪರ್ಧಿ ಕ್ಷೇತ್ರವನ್ನೇ ತೊರೆದು ಹೋಗುವಂತಾಯಿತು. ಏನಾದರೂ ಅಭಿವೃದ್ಧಿ ಮಾಡಿದರೆ ಕ್ಷೇತ್ರದ ಜನರು ಚುನಾವಣೆ ಬಂದಾಗ ಸ್ಮರಿಸುತ್ತಾರೆ. ಚಿಕ್ಕಮಗಳೂರಿನ ಬೀದಿ ಬೀದಿಗಳಲ್ಲಿ ಮತ ಯಾಚನೆ ಮಾಡುವಾಗ ಜನ ತೋರುತ್ತಿರುವ ಪ್ರೀತಿಯನ್ನು ಕಂಡಾಗ ಗೆಲ್ಲುವ ಆತ್ಮವಿಶ್ವಾಸ ಮೂಡಿದೆ ಎಂದರು.

ಜನಪ್ರತಿನಿಧಿಯಾಗಿ ಅಡಿಕೆ ಬೆಳೆಗಾರರಿಗೆ ಮಾಡಿದ ನೆರವು, ಕಾಂಗ್ರೆಸ್‌ ಸರಕಾರದ ಕೃಷಿಕರಿಗೆ ಪೂರಕವಾದ ಯೋಜನೆಗಳು ಮತ ಕೇಳಲು ಮತ್ತು ಮತದಾರರೊಂದಿಗೆ ಚರ್ಚಿಸಲು ಸಹಾಯ ಮಾಡಿದೆ. ಜನಪ್ರತಿನಿಧಿ ಎನಿಸಿ  ಕೊಂಡವರು, ಚುನಾವಣೆ ವೇಳೆ ಮತ ಯಾಚಿಸುವಾಗ ಅವರು ಕ್ಷೇತ್ರದ ಜನರಿಗಾಗಿ ಮಾಡಿದ ಯಾವುದಾದರೂ ಕೆಲಸಗಳಿದ್ದರೆ ನೆರವಾಗುತ್ತದೆ. ಇಲ್ಲಿನ ಮತದಾರರು ಹಿಂದೆ ಮಾಡಿದ ಅಭಿವೃದ್ಧಿ ಕಾರ್ಯ ನೋಡಿಕೊಂಡು ಜಯಕ್ಕಾಗಿ ಹಾರೈಸುತ್ತಿದ್ದಾರೆ. ಇದು ಯಶಸ್ಸಿನ ಹಾದಿಗೆ ನೆರವಾಗುತ್ತದೆ ಎಂದರು. ಮಾಜಿ ಶಾಸಕಿ ಮೋಟಮ್ಮ, ಎಂ.ಪಿ. ಕುಮಾರ ಸ್ವಾಮಿ ಹಾಗೂ ಕಾಂಗ್ರೆಸ್‌ನ ಇತರ ಗಣ್ಯರು ಈ
ಸಂದರ್ಭದಲ್ಲಿ ಹಾಜರಿದ್ದರು.

“ಗ್ಯಾರಂಟಿಯಿಂದ ಮಹಿಳೆಯರು ಹಾದಿ ತಪ್ಪುತ್ತಿದ್ದಾರೆ ಎಂದು ಲೇವಡಿ ಮಾಡಿರುವುದು ಖಂಡನೀಯ’

ಮೂಡಿಗೆರೆ ಶಾಸಕಿ, ನಯನಾ ಮೋಟಮ್ಮ ಮಾತನಾಡಿ, “ಇವತ್ತು ರಾಜ್ಯ ಮಹಿಳೆಯರು ಖುಷಿಯಿಂದ, ಆತ್ಮವಿಶ್ವಾಸದಿಂದ ಇರಲು ಕಾಂಗ್ರೆಸ್‌ ಸರಕಾರ ನೀಡಿದ ಐದು ಗ್ಯಾರಂಟಿಗಳೇ ಕಾರಣವಾಗಿವೆ. ಮಾಜಿ ಮುಖ್ಯಮಂತ್ರಿಗಳು ಈ ಗ್ಯಾರಂಟಿಯಿಂದ ಮಹಿಳೆಯರು ಹಾದಿ ತಪ್ಪುತ್ತಿದ್ದಾರೆ ಎಂದು ಲೇವಡಿ ಮಾಡಿರುವುದು ಖಂಡನೀಯ. ಎ. 26ರಂದು ನಡೆಯುವ ಮತದಾನದ ವೇಳೆ ಕ್ಷೇತ್ರದ ಜನತೆ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ. ಕಾಂಗ್ರೆಸ್‌ ಸರಕಾರ ನೀಡಿರುವ ಐದು ಗ್ಯಾರಂಟಿಗಳಿಂದ ಅಭಿವೃದ್ಧಿ ಕಾರ್ಯ ಮರೆತ ವಿರೋಧ ಪಕ್ಷಗಳಿಗೆ ಸಹಿಸಿಕೊಳ್ಳಲಾಗುತ್ತಿಲ್ಲ. ಸೋಲಿನ ಆತಂಕ ಕಾಡಿದಾಗ ಲೇವಡಿಯೇ ಅಸ್ತ್ರವಾಗುತ್ತದೆ. ನಮ್ಮ
ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ ಅವರು ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತ ಯಾಚಿಸುತ್ತಿದ್ದಾರೆಯೇ ಹೊರತು ಪ್ರತಿಸ್ಪರ್ಧಿಗಳನ್ನು ಟೀಕಿಸಿಯೋ ಅಥವಾ ಲೇವಡಿ ಮಾಡಿಯೋ ಮತ ಯಾಚಿಸುತ್ತಿಲ್ಲ. ಮಹಿಳೆಯರನ್ನು ಅವಮಾನಿಸುವುದು ಕಾಂಗ್ರೆಸ್‌ ಸಂಸ್ಕೃತಿಯಲ್ಲ. ನಾಳೆಯ ನೆಮ್ಮದಿಗಾಗಿ ಇಂದು ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು.

ಟಾಪ್ ನ್ಯೂಸ್

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.