Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ
Team Udayavani, Apr 22, 2024, 3:57 PM IST
ಮುದ್ದೇಬಿಹಾಳ: ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಒಂದೇ ಕುಟುಂಬದ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಮುದ್ದೇಬಿಹಾಳ-ವಿಜಯಪುರ ರಸ್ತೆಯ ಬಸರಕೋಡ ಕ್ರಾಸ್- ಢವಳಗಿಯಲ್ಲಿ ನಡೆದಿದೆ.
ಮೃತರನ್ನು ಮಸಬಿನಾಳ ಗ್ರಾಮದ ನಿವೃತ್ತ ಸೈನಿಕ ಕಾರು ಚಲಾಯಿಸುತ್ತಿದ್ದ ದೊಡ್ಡಯ್ಯ ರಾಚಯ್ಯ ಪುರಾಣಿಕಮಠ (37), ತಾಳಿಕೋಟೆ ತಾಲೂಕು ಜಲಪುರದ ಪುಷ್ಪಾವತಿ ಶಿವಪುತ್ರಯ್ಯ ಹಿರೇಮಠ (55) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ದೊಡ್ಡಯ್ಯನ ಪತ್ನಿ ಈರಮ್ಮ ಪುರಾಣಿಕಮಠ(30), ಮಕ್ಕಳಾದ ಶಿವಕುಮಾರ (11) ಸಂಪತಕುಮಾರ (8) ಸಣ್ಣಪುಟ್ಡ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮದುವೆ ಮುಗಿಸಿಕೊಂಡು ಮುದ್ದೇಬಿಹಾಳಕ್ಕೆ ಬರುತ್ತಿರುವಾಗ ಈ ಘಟನೆ ನಡೆದಿದೆ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸೈ ಸಂಜಯ್ ತಿಪ್ಪರಡ್ಡಿ ಕಾನೂನು ಕ್ರಮ ಕೈಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.