Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

ಹವಾಮಾನ ಮುನ್ಸೂಚನಾ ಕೇಂದ್ರವನ್ನು ಸ್ಥಾಪಿಸಲು ಪ್ರಯತ್ನ.

Team Udayavani, Apr 23, 2024, 10:31 AM IST

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

ಕೋಟ: ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಅಭಿವೃದ್ಧಿ ಆವಶ್ಯಕತೆಗಳನ್ನು ಗಮನದಲ್ಲಿರಿಸಿಕೊಂಡು ಪ್ರತ್ಯೇಕವಾದ ಪ್ರಣಾಳಿಕೆಯನ್ನು ರೂಪಿಸಲಾಗಿದೆ. ಪ್ರಣಾಳಿಕೆಯಲ್ಲಿ ರಾಜ್ಯ ಸರಕಾರಕ್ಕೆ ಸಂಬಂಧಿಸಿದ ವಿಚಾರಗಳು ಇದೆ. ಆದರೆ ಇಚ್ಛಾಶಕ್ತಿ ಹಾಗೂ ಸಂಪರ್ಕವಿದ್ದರೆ ಸಂಸದನಿಗೆ ರಾಜ್ಯ ಸರಕಾರದ ಕೆಲಸಗಳನ್ನು ಮಾಡಬಹುದು ಎಂದು ಎ.22ರಂದು ಬ್ರಹ್ಮಾವರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ ಮಾಹಿತಿ ನೀಡಿದರು.

ಮೀನುಗಾರಿಕೆ, ಬಂದರು ಅಭಿವೃದ್ಧಿ

ಅಳಿವೆ ಮತ್ತು ಬಂದರಿನ ಡ್ರಜ್ಜಿಂಗ್‌ ಹಾಗೂ ಬ್ರೇಕ್‌ ವಾಟರ್‌ ಯೋಜನೆಗಳಿಗೆ ಒತ್ತು, ಮೀನುಗಾರಿಕಾ ಬಂದರಿನ ಸ್ವಚ್ಚತೆಗೆ ಆದ್ಯತೆ ನೀಡುವುದು. ಅಸಂಘಟಿತ ಕಾರ್ಮಿಕರಿಗೆ ಸರಕಾರದಿಂದ ದೊರಕುವ ಸೌಲಭ್ಯಗಳನ್ನು ಮೀನುಗಾರಿಕಾ ಕಾರ್ಮಿಕರಿಗೂ ವಿಸ್ತರಿಸಲು ಪ್ರಯತ್ನಿಸುವುದು. ಸಾಂಪ್ರದಾಯಿಕ ಮಹಿಳಾ ಮೀನುಗಾರರಿಗೆ ಬಡ್ಡಿರಹಿತ ಸಾಲ, ನಿವೃತ್ತ ಮೀನುಗಾರರಿಗೆ ಪಿಂಚಣಿ ಸೌಲಭ್ಯಕ್ಕೆ ಪ್ರಯತ್ನ, ನಾಡ ದೋಣಿ ಸೀಮೆ ಎಣ್ಣೆ ಸಹಾಯಧನವನ್ನು ಕನಿಷ್ಠ 50 ರೂಪಾಯಿಗೆ ಹೆಚ್ಚಳ, ಸಂಕಷ್ಟ ಪರಿಹಾರ
ಸಹಾಯಧನವನ್ನು ರೂ. 10 ಲಕ್ಷಕ್ಕೆ ಹಾಗೂ ಮತ್ಸ್ಯಾಶ್ರಯ ಯೋಜನೆಯ ಸಹಾಯಧನವನ್ನು 5 ಲಕ್ಷಕ್ಕೆ ಹೆಚ್ಚಿಸಲು
ಪ್ರಯತ್ನಿಸುವುದು. ಪ್ರಧಾನಿ ಮತ್ಸ್ಯ ಸಂಪದ ಯೋಜನೆಯ ಸದುಪಯೋಗಕ್ಕೆ ಶ್ರಮಿಸುವುದು.

1984ರ ಮೀನುಗಾರಿಕಾ ಕಾಯ್ದೆಗೆ ಸೂಕ್ತ ತಿದ್ದುಪಡಿ, ಮೀನುಗಾರಿಕೆಗೆ ಸಂಬಂಧಪಟ್ಟ ಎಲ್ಲಾ ಇನ್ಶೂರೆನ್ಸ್‌ ಕ್ಲೈಮ್‌ ಗಳನ್ನು ಕಾಲಮಿತಿಯೊಂದಿಗೆ ಪಾವತಿ ಮಾಡಲು ಕ್ರಮಗಳನ್ನು ಜಾರಿಗೊಳಿಸುವುದು. ಕರ್ನಾಟಕ ಕರಾವಳಿಯಲ್ಲಿ ಮೀನುಗಾರಿಕೆಗೆ
ಸಂಬಂಧಪಟ್ಟ ಹವಾಮಾನ ಮುನ್ಸೂಚನಾ ಕೇಂದ್ರವನ್ನು ಸ್ಥಾಪಿಸಲು ಪ್ರಯತ್ನ.

ಮೀನುಗಾರಿಕೆ ಹಾಗೂ ಬೋಟ್‌ ಎಂಜಿನ್‌ ಅಶ್ವಶಕ್ತಿಗನುಗುಣವಾಗಿ ವಾರ್ಷಿಕ ಕೋಟಾ ಹೆಚ್ಚಿಸುವುದು ಹಾಗೂ ಕನಿಷ್ಠ ದಿನವಹಿ
500 ಲೀಟರ್‌ ಡೀಸೆಲ್‌ ನೀಡಲು ಪ್ರಯತ್ನಿಸುವುದು. ಹೊರ ರಾಜ್ಯದ ಅಕ್ರಮ ಮೀನುಗಾರಿಕೆಯನ್ನು ನಿಷೇಧಿಸಲು ಕ್ರಮ
ಕೈಗೊಳ್ಳಲಾಗುವುದು ಎಂದು ಹೆಗ್ಗಡೆ ಹೇಳಿದರು.

ಪ್ರವಾಸೋದ್ಯಮ ಕ್ಷೇತ್ರ
ಉಭಯ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಗೆ ಅನುಕೂಲವಾಗುವಂತೆ ‘ಪ್ರವಾಸೋದ್ಯಮ ನೀತಿ, ಹೋಂ ಸ್ಟೇಗಳಿಗೆ ಹಾಗೂ ಸಮುದ್ರ
ತೀರದ ಪ್ರವಾಸೋದ್ಯಮಕ್ಕೆ ಸಂಬಂಧಿಸಿ ಇಲಾಖೆಗಳಿಂದ ಆಗುತ್ತಿರುವ ಕಾನೂನಿನ ನಿರ್ಬಂಧಗಳನ್ನು ಸರಳೀಕರಣ ದೇವಾಲಯ ಪ್ರವಾಸೋದ್ಯಮ ಅಭಿವೃದ್ಧಿ. ಮಲೆನಾಡಿಗೆ ಪೂರಕವಾಗಿರುವ ಮಿನಿ ಬಸ್‌ ಸಂಪರ್ಕ ಜಾಲವನ್ನು ವಿಸ್ತರಿಸುವಂತೆ
ಕೆ.ಎಸ್‌.ಆರ್‌.ಟಿ.ಸಿ.ಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದು ಎಂದರು.

ಅರಣ್ಯ ಕಾಯ್ದೆ ಸರಳೀಕರಣ
ಪ್ರತಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕನಿಷ್ಠ 10 ಎಕರೆ ಜಮೀನನ್ನು ಗುರುತಿಸಿ ನಿವೇಶನ ರಹಿತರಿಗೆ ನಿವೇಶನಕ್ಕೆ ಕ್ರಮ,
ಪಾರಂಪರಿಕ ಅರಣ್ಯ ಕಾಯ್ದೆಯಡಿ ಭೂ ಮಂಜೂರಾತಿಯ ಕಾಲ” ಮಿತಿಯನ್ನು ಅವಶ್ಯಕ ಪ್ರಸಕ್ತ 75 ವರ್ಷಗಳ ದಾಖಲೆಗಳನ್ನು
25 ವರ್ಷಕ್ಕೆ ಇಳಿಸಿ ಅರಣ್ಯವಾಸಿಗಳಿಗೆ ಬದುಕಲು ಅವಕಾಶ ಮಾಡಿಕೊಡುವುದು, ಅರಣ್ಯ ಕಾಯ್ದೆಯ ಸೆಕ್ಷನ್‌ 4 ಸರಳೀಕರಣ
ಮಾಡಲಾಗುವುದು ಎಂದರು.

ಕೃಷಿ ಹೈನುಗಾರಿಕೆ ಕ್ಷೇತ್ರ
‘ಅಡಿಕೆ ಸಂಶೋಧನ ಕೇಂದ್ರ’ವನ್ನು ಕ್ರಿಯಾಶೀಲಗೊಳಿಸುವುದು, ಅಡಿಕೆ ಬೆಳೆಗಾರರ ಹಿತರಕ್ಷಣೆಗಾಗಿ ನೇಮಿಸಿದ್ದ ಗೋರಖ್‌ ಸಿಂಗ್‌ ವರದಿಯ ಅನುಷ್ಠಾನ, ಎಲೆಚುಕ್ಕಿ ರೋಗದ ಶಾಶ್ವತ ನಿವಾರಣೆಗಾಗಿ ಸಂಶೋಧನೆಗೆ ಅಗತ್ಯ ಕ್ರಮ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆ.ಎಂ.ಎಫ್‌. ಹಾಲಿನ ಘಟಕ ಸ್ಥಾಪಿಸಿ ಹೈನುಗಾರಿಕೆಗೆ ಉತ್ತೇಜನ, “ನೀರಾ’ ಅನೌಪಚಾರಿಕ ಉದ್ಯೋಗವನ್ನು ಸೃಷ್ಟಿಸಲು ಕೃಷಿ ಕಾರ್ಯಕ್ರಮ. ಮಲೆನಾಡಿನ ಕೃಷಿ ಉತ್ಪನ್ನಗಳಿಗೆ ಜಾಗತಿಕ ಬ್ರ್ಯಾಂಡ್‌ ನೀಡಲು ಕ್ರಮ, ತರೀಕೆರೆ ತಾಲ್ಲೂಕಿನ ಇತರ ಪ್ರಮುಖ ಬೆಳೆಗಳಾದ ಈರುಳ್ಳಿ ಹಾಗೂ ಇತರ ತರಕಾರಿಗಳಿಗೆ ಉತ್ತಮ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಕೋಲ್ಡ್‌ ಸ್ಟೋರೇಜ್‌,  ಕಾಡು ಪ್ರಾಣಿಗಳ ಹಾವಳಿಯಿಂದ ಬೆಳೆಗಳಿಗೆ ಪರಿಹಾರ ಮೊತ್ತವನ್ನು ಹೆಚ್ಚಳ, ಮಲೆನಾಡಿನ ಮನೆಗಳನ್ನು ಕ್ರಮಬದ್ಧವಾದ ನಿವೇಶನವೆಂದು ತೀರ್ಮಾನಿಸಿ ನಮೂನೆ 9 ಮತ್ತು 11 ಎ ನೀಡಲು ಪ್ರಯತ್ನಿಸುವುದು. ‘ಮಲೆನಾಡ ದಿನಾಚರಣೆ ಮೂಲಕ ಅಲ್ಲಿನ
ಜನ ಜೀವನ, ಕೃಷಿ, ಪರಂಪರೆ, ಜನಪದ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಹಲವು ಕನಸುಗಳು
ಉಡುಪಿ ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಹಾಗೂ ಉಭಯ ಜಿಲ್ಲೆಗಳಲ್ಲಿ ಸರಕಾರಿ ಎಂಜಿನಿಯರಿಂಗ್‌ ಕಾಲೇಜು,
ವಿವಿಧ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸುಸಜ್ಜಿತ ಸ್ಫೋರ್ಟ್ಸ್ ಕಾಂಪ್ಲೆಕ್ಸ್‌ ನಿರ್ಮಾಣ, ಕೈಗಾರಿಕೆಗಳಿಗೆ ಸೂಕ್ತ
ಕೈಗಾರಿಕಾ ನಿವೇಶನ ಒದಗಿಸಲು ಕ್ರಮ, ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಜಾಗದಲ್ಲಿ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಕೈಗಾರಿಕಾ ವಸಾಹತು ಅಭಿವೃದ್ಧಿಗೆ ಪ್ರಯತ್ನ ಸರಕಾರಿ ಆಸ್ಪತ್ರೆಗಳ ಉನ್ನತೀಕರಣ. ಮಲೆನಾಡು ಭಾಗದಲ್ಲಿ ಕೃಷಿ ಪೂರಕ ಉದ್ಯಮದ ಸ್ಥಾಪನೆಗೆ ವಿಶೇಷ ಕಾರಿಡಾರ್‌, ಕ್ಷೇತ್ರದಾದ್ಯಂತ 5 ವಿವಿಧ ಸ್ಥಳಗಳಲ್ಲಿ ನೀರಾ ಶುದ್ದೀ ಕರಣ ಘಟಕ/ಸ್ಟೋರೇಜ್‌ ಕ್ಲಸ್ಟರ್‌ ಕನಸುಗಳಿವೆ ಎಂದು ಜಯಪ್ರಕಾಶ್‌ ಹೆಗ್ಡೆ ಹೇಳಿದರು.

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BUS driver

Bus ticket; ದೀಪಾವಳಿ ಸಂಭ್ರಮಕ್ಕೆ ಬಸ್‌ ಟಿಕೆಟ್‌ ದರ ತಣ್ಣೀರು

1-mahe

MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.